< ಪ್ರಕಟಣೆ 18 >

1 ಇದಾದನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಕೆಳಗೆ ಇಳಿದು ಬರುವುದನ್ನು ಕಂಡೆನು. ಅವನ ತೇಜಸ್ಸಿನಿಂದ ಭೂಮಿಯು ಬೆಳಗಿತು.
And after these things I saw another messenger coming down out of Heaven, having great authority, and the earth was lightened from his glory,
2 ಅವನು ಮಹಾಧ್ವನಿಯಿಂದ: “‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.
and he cried in might [with] a great voice, saying, “Fallen, fallen is Babylon the great! And she became a habitation of demons, and a hold of every unclean spirit, and a hold of every unclean and hateful bird,
3 ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.
because all the nations have drunk of the wine of the wrath of her whoredom, and the kings of the earth committed whoredom with her, and merchants of the earth were made rich from the power of her indulgence.”
4 ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’
And I heard another voice out of Heaven, saying, “Come forth out of her, My people, that you may not partake with her sins, and that you may not receive of her plagues,
5 ಏಕೆಂದರೆ ಆಕೆಯ ಪಾಪಗಳು ಒಂದಕ್ಕೊಂದು ಸೇರಿ ಆಕಾಶದಷ್ಟಾಗಿವೆ. ದೇವರು ಆಕೆಯ ಅಪರಾಧಗಳನ್ನು ಜ್ಞಾಪಿಸಿಕೊಂಡಿದ್ದಾರೆ.
because her sins have reached up to Heaven, and God remembered her unrighteousness.
6 ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.
Render to her as she also rendered to you, and double to her twofold according to her works; in the cup that she mingled mingle to her double.
7 ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.
As much as she glorified herself and indulged, so much torment and sorrow give to her, because in her heart she says, I sit [as] queen, and I am not a widow, and I will not see sorrow;
8 ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ ಆಕೆಯು ಬೆಂಕಿಯಿಂದ ನಾಶವಾಗುವಳು.”
because of this, in one day, will come her plagues: death, and sorrow, and famine; and she will be utterly burned in fire, because strong [is] the LORD God who is judging her;
9 “ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.
and the kings of the earth will weep over her and strike themselves for her, who committed whoredom and indulged with her, when they may see the smoke of her burning,
10 ಆಕೆಯ ಯಾತನೆಯ ದೆಸೆಯಿಂದ ಹೆದರಿ, ದೂರದಲ್ಲಿ ನಿಂತು: “‘ಅಯ್ಯೋ! ಅಯ್ಯೋ! ಮಹಾನಗರಿಯೇ, ಬಲಿಷ್ಠನಗರಿ ಬಾಬಿಲೋನೇ! ಒಂದೇ ತಾಸಿನಲ್ಲಿ ನಿನಗೆ ತೀರ್ಪಾಯಿತಲ್ಲಾ?’ ಎಂದು ಶೋಕಿಸುವರು.
having stood from afar because of the fear of her torment, saying, Woe, woe, the great city! Babylon, the strong city! Because in one hour your judgment came.
11 “ಭೂಮಿಯ ವರ್ತಕರು ಆಕೆಗಾಗಿ ದುಃಖಿಸಿ ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು.
And the merchants of the earth will weep and mourn over her, because no one buys their cargo anymore;
12 ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,
cargo of gold, and silver, and precious stone, and pearls, and fine linen, and purple, and silk, and scarlet, and all fragrant wood, and every vessel of ivory, and every vessel of most precious wood, and brass, and iron, and marble,
13 ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.
and cinnamon, and amomum, and incense, and ointment, and frankincense, and wine, and oil, and fine flour, and wheat, and cattle, and sheep, and of horses, and of chariots, and of bodies and souls of men.
14 “ನೀನು ಬಯಸಿದ ನಿನ್ನ ಪ್ರಾಣ ಫಲವು ನಿನ್ನಿಂದ ತೊಲಗಿಹೋಗಿದೆ. ನಿನ್ನ ಎಲ್ಲಾ ವೈಭವವು ಹಾಗೂ ನಿನ್ನ ಶೋಭೆಯ ಸೊಗಸುಗಳೆಲ್ಲಾ ನಿನ್ನಿಂದ ನಾಶವಾದವು. ಅವರು ಅವುಗಳನ್ನು ಇನ್ನೆಂದೂ ಕಾಣಲಾರರು.
And the fruits of the desire of your soul went away from you, and all things—the sumptuous and the radiant—went away from you, and no more at all may you find them.
15 ಆಕೆಯಿಂದ ಸಿರಿವಂತರಾದ ಆ ಸರಕುಗಳ ವರ್ತಕರು ದೂರದಲ್ಲಿ ನಿಂತು ಆಕೆಯ ಯಾತನೆಯ ದೆಸೆಯಿಂದ ಭಯಪಟ್ಟು, ದುಃಖಿಸಿ,
The merchants of these things, who were made rich by her, will stand far off because of the fear of her torment, weeping, and mourning,
16 “‘ಅಯ್ಯೋ! ಅಯ್ಯೋ! ಶೋಕಭರಿತ ಮಹಾನಗರಿಯೇ, ನೀನು ನೇರಳೆ, ಕಡುಗೆಂಪು ನಾರುಮಡಿಯನ್ನು ಧರಿಸಿ, ಚಿನ್ನ, ಬೆಲೆಬಾಳುವ ಕಲ್ಲು ಮತ್ತು ಮುತ್ತುಗಳಿಂದ ಬೆಳಗುತ್ತಿದ್ದೆ.
and saying, Woe, woe, the great city, that was clothed with fine linen, and purple, and scarlet, and gilded in gold, and precious stone, and pearls—
17 ಒಂದೇ ತಾಸಿನಲ್ಲಿ ಅಂಥ ಮಹಾ ಐಶ್ವರ್ಯವು ನಾಶವಾಗಿ ಹೋಯಿತಲ್ಲಾ?’” ಎಂದು ಗೋಳಾಡುವರು. “ಪ್ರತಿಯೊಂದು ಹಡಗಿನ ಮಾಲೀಕರು ಮತ್ತು ಹಡಗು ಪಯಣಿಗರು, ನಾವಿಕರು ಮತ್ತು ಸಮುದ್ರದಿಂದ ತಮ್ಮ ಜೀವನೋಪಾಯ ಮಾಡುವವರೆಲ್ಲರೂ ದೂರದಲ್ಲಿ ನಿಂತು
because in one hour so much riches were made desolate! And every shipmaster, and all the company on the ships, and sailors, and as many as work the sea, stood far off,
18 ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು.
and were crying, seeing the smoke of her burning, saying, What [city is] like to the great city?
19 ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’
And they cast dust on their heads, and were crying out, weeping and mourning, saying, Woe, woe, the great city! In which were made rich all having ships in the sea, out of her costliness—for in one hour was she made desolate.
20 “ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”
Be glad over her, O Heaven, and you holy apostles and prophets, because God judged your judgment of her!”
21 ಅನಂತರ ಒಬ್ಬ ಬಲಿಷ್ಠನಾದ ದೂತನು, ಬೀಸುವ ಕಲ್ಲಿನಷ್ಟಿರುವ ದೊಡ್ಡ ಕಲ್ಲೊಂದನ್ನು ತೆಗೆದುಕೊಂಡು ಅದನ್ನು ಸಮುದ್ರದೊಳಗೆ ಬಿಸಾಡಿ: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಬಲಾತ್ಕಾರದಿಂದ ಕೆಡವಲಾಗಿ ಎಂದಿಗೂ ಕಾಣಿಸದು.
And one strong messenger took up a stone as a great millstone, and cast [it] into the sea, saying, “Thus with violence will Babylon be cast, the great city, and may not be found anymore at all;
22 ಬಾಬಿಲೋನೇ, ನಿನ್ನಲ್ಲಿ ಮತ್ತೆ ತಂತಿವಾದ್ಯ ನುಡಿಸುವವರು, ಸಂಗೀತಗಾರರು, ಕೊಳಲೂದುವವರು, ತುತೂರಿಯವರು, ಮಾಡುವ ಧ್ವನಿ ಎಂದೂ ಕೇಳಿಸದು. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಎಂದೂ ಕಂಡುಬಾರನು. ಬೀಸುವ ಕಲ್ಲಿನ ಶಬ್ದವು, ನಿನ್ನಲ್ಲಿ ಎಂದೂ ಕೇಳಿಸದು.
and voice of harpists, and musicians, and pipers, and trumpeters, may not be heard at all in you anymore; and any craftsman of any craft may not be found at all in you anymore; and noise of a millstone may not be heard at all in you anymore;
23 ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.
and light of a lamp may not shine at all in you anymore; and voice of bridegroom and of bride may not be heard at all in you anymore; because your merchants were the great ones of the earth, because all the nations were led astray in your sorcery,
24 ಆಕೆಯಲ್ಲಿ ಪ್ರವಾದಿಗಳ ಮತ್ತು ಪರಿಶುದ್ಧರ ರಕ್ತವೂ ಮತ್ತು ಭೂಮಿಯ ಮೇಲೆ ಕೊಲೆಯಾದವರ ರಕ್ತವೂ ಸಿಕ್ಕಿತು,” ಎಂದು ಹೇಳಿದನು.
and in her blood of prophets and of holy ones was found, and of all those who have been slain on the earth.”

< ಪ್ರಕಟಣೆ 18 >