< ಪ್ರಕಟಣೆ 19 >
1 ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!
Après cela j'entendis comme la voix d'une grande multitude, dans le ciel, qui disait: Alléluia! (Louez l'Éternel. ) Le salut, et la gloire, et l'honneur, et la puissance au Seigneur notre Dieu!
2 ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”
Parce que ses jugements sont véritables et justes, parce qu'il a jugé la grande prostituée, qui corrompait la terre par son impudicité, et qu'il a vengé le sang de ses serviteurs, qu'elle avait répandu de sa main.
3 ಎಂದೂ ದ್ವಿತೀಯ ಬಾರಿ: “ಹಲ್ಲೆಲೂಯಾ! ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತದೆ!” ಎಂದು ಘೋಷಿಸಿದರು. (aiōn )
Et ils dirent une seconde fois: Alléluia! et sa fumée monte aux siècles des siècles. (aiōn )
4 ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು, ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿ: “ಆಮೆನ್, ಹಲ್ಲೆಲೂಯಾ!” ಎಂದರು.
Et les vingt-quatre Anciens, et les quatre animaux se prosternèrent, et adorèrent Dieu, qui était assis sur le trône, en disant: Amen, Alléluia!
5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.
Et une voix sortit du trône, disant: Louez notre Dieu, vous tous, ses serviteurs, et vous qui le craignez, petits et grands.
6 ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.
Et j'entendis comme la voix d'une grande multitude, comme le bruit de grosses eaux, et comme la voix de grands tonnerres, qui disait: Alléluia! car il règne le Seigneur Dieu, le Tout-Puissant.
7 ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು. ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಅವರನ್ನು ಮಹಿಮೆಪಡಿಸೋಣ!”
Réjouissons-nous, et faisons éclater notre joie, et donnons-lui gloire; car les noces de l'Agneau sont venues, et son épouse s'est parée.
8 ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು. ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ.
Et il lui a été donné d'être vêtue d'un fin lin, pur et éclatant, car le fin lin, ce sont les justices des saints.
9 ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.
Alors l'ange me dit: Écris: Heureux ceux qui sont appelés au banquet des noces de l'Agneau! Il me dit aussi: Ce sont là les véritables paroles de Dieu.
10 ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.
Or, je me jetai à ses pieds pour l'adorer; mais il me dit: Garde-toi de le faire; je suis ton compagnon de service et celui de tes frères qui ont le témoignage de Jésus. Adore Dieu, car le témoignage de Jésus, c'est l'esprit de prophétie.
11 ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.
Je vis ensuite le ciel ouvert, et voici un cheval blanc, et celui qui était monté dessus, s'appelait le FIDELE et le VÉRITABLE, qui juge et qui combat avec justice.
12 ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.
Ses yeux étaient comme une flamme de feu; il avait sur sa tête plusieurs diadèmes. Il avait un nom écrit que personne ne connaît que lui-même.
13 ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದಾನೆ. ಆತನ ಹೆಸರು ದೇವರ ವಾಕ್ಯವೆಂಬುದೇ.
Il était vêtu d'un manteau teint de sang, et son nom s'appelle, LA PAROLE DE DIEU.
14 ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು.
Les armées qui sont dans le ciel, vêtues de fin lin blanc et pur, le suivaient sur des chevaux blancs.
15 ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.
Il sortait de sa bouche une épée tranchante pour frapper les nations, car il les gouvernera avec un sceptre de fer, et il foulera la cuve du vin de la colère et de l'indignation du Dieu Tout-Puissant.
16 ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.
Et sur son manteau, et sur sa cuisse, il portait ce nom écrit: ROI DES ROIS, et SEIGNEUR DES SEIGNEURS.
17 ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾಧ್ವನಿಯಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಏರ್ಪಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ.
Je vis un ange qui se tenait dans le soleil, et qui cria d'une voix forte à tous les oiseaux qui volaient par le ciel: Venez, et assemblez-vous pour le festin du grand Dieu;
18 ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು.
Pour manger la chair des rois, la chair des capitaines, la chair des puissants, la chair des chevaux et de ceux qui les montent, et la chair de tous, libres et esclaves, petits et grands.
19 ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವರ ಮೇಲೆಯೂ ಅವರ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿ ಬಂದಿರುವುದನ್ನು ನಾನು ಕಂಡೆನು.
Et je vis la bête, et les rois de la terre et leurs armées, assemblées pour faire la guerre à celui qui était monté sur le cheval, et à son armée.
20 ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು. (Limnē Pyr )
Mais la bête fut prise, et avec elle le faux prophète, qui devant elle avait fait des prodiges, par lesquels il avait séduit ceux qui avaient pris la marque de la bête, et qui avaient adoré son image; tous deux furent jetés vifs dans l'étang de feu brûlant, dans le soufre. (Limnē Pyr )
21 ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು.
Et tout le reste fut tué par l'épée qui sortait de la bouche de celui qui était monté sur le cheval; et tous les oiseaux furent rassasiés de leur chair.