< ಪ್ರಕಟಣೆ 20 >

1 ಆಗ ಒಬ್ಬ ದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. (Abyssos g12)
Shesho nalola ontumi afume mwanya alinenfunkuto eyilenda lyashele selili nomalishilo ni nyolo igosi mkhono gwakwe. (Abyssos g12)
2 ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
Akhete lila izoha, izoha elye mwaha yashele ya Shetani, nahufunje amahu elufu.
3 ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು. (Abyssos g12)
Aponyizye hwilinde lyashele selili nomalishilo, walifunga nakhome omhuli pamwanya yakwe. Eli lyali aje asakhopele abhemataifa nantele paka amaha elufu papabhamalishile. Hwesho epo, aileshewa wewe hunsiku nyishe. (Abyssos g12)
4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.
Shesho nalola itengo elyeshimwene. Vya bhali bhavikhalie bhabhala bhali bhapeta amadalaka agalonje. Shesho nalola enafsi ezya bhala bhashele bha dumulwe amatwe hujili eyehushuda husu oYesu na hwizu elya Ngolobhe. Bhali sebhaputile omnyama olwenje esanamu yake, nabhakhene aposhele, ishilango pamaso gabho napakhono. Bhahenzele huwomi, natawala pandwemo no Kilisiti humaha elfu.
5 ಉಳಿದ ಸತ್ತವರು ಆ ಸಾವಿರ ವರ್ಷ ಗತಿಸುವ ತನಕ ಜೀವಿತರಾಗಲಿಲ್ಲ. ಇದೇ ಪ್ರಥಮ ಪುನರುತ್ಥಾನವು.
Abhafwe bhabhasageye sebhahenzele huwomi paka amala elfu pagamalishe ogu. Wawowu ovyosyo ogwa hwande.
6 ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.
Oyetehwe no pomamie mntu yayonti yahwega enafasi huuvyosyo owa wande! Efwa eyabhele selinenguvu pamwanya pabhantu nashi ebha. Paibha na chungaji bha Ngolobhe nasha Kilisiti nabhaitawala nomwene amaha elfu.
7 ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು.
Owakati amaha elfu nagaifiha humalishilo, Shetani abhahwiguliwe afume mwijela mwakwe.
8 ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.
Aibhala wonza akhopele amataifa hukona zine ezyensi -Gogu na Magogu - abhalete pandwemo hwibho. Bhaibha bhinji nashi osanga owamnsombi.
9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.
Bhabhalile pamwanya pantebha eyensi bhape bhazyongolele, ikambe elya bheweteho, iboma lyaligeuwe. Lelo omwoto gwahishile afume amwanya nabhamalezye.
10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. (aiōn g165, Limnē Pyr g3041 g4442)
Oshetani yabhakhopeye, aponyezewe mhati mwilende mwoto omnyama no kuwa owilenka. Bhali bhaponyezewe bhaipata amayemba pasanya nosiku wila na wila. (aiōn g165, Limnē Pyr g3041 g4442)
11 ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.
Shesho nalola itengo elyeshimwene igosi izelu nola yashele akheye pamwanya yakwe. Ensi nemwanya zyanyilile hutali afume huhweli hwakwe, lelo sehwali nenafasi yabho abhale.
12 ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
Nabhalolile bhabhafwiye - abheshikhone nabhashele sebhali bhemhimu bhemele ye hwitengo elyemwene, ne vitabu vya higulwa. Eshitabu eshamwabho shahigulwa- Eshitabu eshewomi. Abhafwe bhalongilwe hwashila shashasimbiwe mhati mshitabu, humafumo gala gabha bhombile.
13 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು. (Hadēs g86)
Ensombi ehabhefwizye abhafwe bhabhali mhati yakwe enfwa na hwilongo hwabhafumizya abhafwe bhabhali mhati yakwe, na bhafwe bhalongilwe hwashila shabhabhombile. (Hadēs g86)
14 ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. (Hadēs g86, Limnē Pyr g3041 g4442)
Enfwa nahwilongo zyaponyizyewe mhati eye lende lyemwoto. (Hadēs g86, Limnē Pyr g3041 g4442)
15 ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು. (Limnē Pyr g3041 g4442)
Ega nfwa ya bhele ilende elyemwoto. Nkashile itawa lyalyonti selibhoneshe lisimbilwe mhati yeShitabu eshe Womi, aponyezewe mmwoto. (Limnē Pyr g3041 g4442)

< ಪ್ರಕಟಣೆ 20 >