< ಪ್ರಕಟಣೆ 21 >

1 ತರುವಾಯ, “ನೂತನ ಆಕಾಶವನ್ನೂ ನೂತನ ಭೂಮಿಯನ್ನೂ” ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ.
Ipapo ndakaona denga idzva nenyika itsva, nokuti denga rokutanga nenyika yokutanga zvakanga zvapfuura, uye pakanga pasisina gungwa.
2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.
Ndakaona Guta Dzvene, Jerusarema idzva, richiburuka kubva kudenga richibva kuna Mwari, rakagadzirwa somwenga akashongera murume wake zvakaisvonaka.
3 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.
Uye ndakanzwa inzwi guru richibva pachigaro choushe richiti, “Zvino imba yaMwari yava pakati pavanhu, uye achagara navo. Vachava vanhu vake, uye Mwari pachake achava navo uye achava Mwari wavo.
4 ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.
Achapukuta misodzi yavo yose pameso avo. Hapachazovazve norufu, kana kuungudza, kana kuchema, kana kurwadziwa, nokuti zvinhu zvokutanga zvapfuura.”
5 ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.
Akanga agere pachigaro choushe akati, “Ndiri kuita kuti zvinhu zvose zvive zvitsva!” Ipapo akati, “Nyora izvi, nokuti mashoko aya akatendeka uye ndeechokwadi.”
6 ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.
Akati kwandiri, “Zvaitwa. Ndini Arifa naOmega, wokutanga newokupedzisira. Kuna iye ane nyota ndichamupa kuti anwe, asingaripi, kubva mutsime remvura youpenyu.
7 ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.
Anokunda achapiwa nhaka iyi yose, uye ndichava Mwari wake, uye iye achava mwanakomana wangu.
8 ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು. (Limnē Pyr g3041 g4442)
Asi vanotya, vasingatendi, navanonyangadza, mhondi, nemhombwe, navanoita zvouroyi, vanonamata zvifananidzo navanoreva nhema, nzvimbo yavo ichava mudziva romoto rinopfuta nesafuri. Urwu ndirwo rufu rwechipiri.” (Limnē Pyr g3041 g4442)
9 ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,
Mumwe wavatumwa vanomwe akanga ane ndiro nomwe dzizere namatambudziko manomwe okupedzisira akauya kwandiri akati, “Uya, ndizokuratidza mwenga, mukadzi weGwayana.”
10 ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು.
Uye akandiendesa muMweya kugomo guru refu, akandiratidza Guta Dzvene, Jerusarema, richiburuka richibva kuna Mwari.
11 ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು.
Raipenya nokubwinya kwaMwari, uye kuvaima kwaro kwakanga kwakaita sebwe rinokosha kwazvo, sebwe rejasipa, rinoonekera sekristaro.
12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.
Rakanga rina masvingo makuru, marefu kwazvo ana masuo gumi namaviri navatumwa gumi navaviri pamasuo. Pamasuo pakanga pakanyorwa mazita amarudzi gumi namaviri avaIsraeri.
13 ಪೂರ್ವದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.
Kumabvazuva kwakanga kune masuo matatu, matatu kumusoro, matatu nechezasi namatatu kumavirira.
14 ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.
Masvingo eguta akanga ane nheyo gumi nembiri, uye padziri pakanga pane mazita avapostori gumi navaviri veGwayana.
15 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.
Mutumwa akataura neni akanga ane tsvimbo yokuera yegoridhe, yokuyera guta, masuo namasvingo aro.
16 ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು, ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು 2,200 ಕಿಲೋಮೀಟರ್ ಆಗಿತ್ತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿದ್ದವು.
Guta rakanga rakavakwa zvokuti mativi aro mana akanga akaenzana pakureba napaupamhi. Akaera guta netsvimbo uye akariwana rina mastadhia zviuru gumi nezviviri paurefu, uye rakapamhama nokureba sourefu hwaro.
17 ಅವನು ಅದರ ಗೋಡೆಯನ್ನೂ ಅಳತೆ ಮಾಡಿದನು. ಅದು 65 ಮೀಟರ್ ಆಗಿತ್ತು. ಮನುಷ್ಯನ ಅಳತೆಯಂತೆ ದೇವದೂತನು ಅಳೆದನು.
Akaera rusvingo rwaro uye rwaiva rukobvu makubhiti zana namakumi mana namana nokuyera kwavanhu, kwaishandiswa nomutumwa.
18 ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲಾಗಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
Rusvingo rwakanga rwakavakwa nejasipa, uye guta rakanga rakavakwa negoridhe rakaisvonaka rinoonekera kunge girazi.
19 ಪಟ್ಟಣದ ಗೋಡೆಯು ಮತ್ತು ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತ, ಎರಡನೆಯದು ವೈಡೂರ್ಯ, ಮೂರನೆಯದು ಪಚ್ಚೆ, ನಾಲ್ಕನೆಯದು ಪದ್ಮರಾಗ,
Nheyo dzamasvingo eguta dzakanga dzakashongedzwa nemhando dzose dzamatombo anokosha. Nheyo yokutanga yakanga iri yejasipa, yechipiri yaiva yesafiri, yetatu yekasidhoni, yechina yeemaradhi;
20 ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಬತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲ ಸ್ಪಟಿಕ.
yeshanu yesadhonikisi, yechitanhatu yaiva yekarineri yechinomwe yaiva yekrisoriti, yorusere yaiva yebheriri, yepfumbamwe yaiva yetopazi, yegumi yaiva yekrisoprasi, yegumi neimwe yaiva yejasindi, yegumi nembiri yaiva yeametisti.
21 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದಾಗಿತ್ತು. ಪಟ್ಟಣದ ಮಹಾ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
Masuo gumi namaviri akanga ari amaparera, suo rimwe nerimwe rakaitwa neparera rimwe chete. Nzira huru yomuguta yakanga iri yegoridhe rakaisvonaka segirazi rinoonekera.
22 ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.
Handina kuona temberi muguta, nokuti Ishe Mwari Wamasimba Ose neGwayana ndivo temberi yaro.
23 ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.
Guta haritsvaki zuva kana mwedzi kuti zvivhenekere pamusoro paro, nokuti kubwinya kwaMwari ndiko kunovhenekera, uye Gwayana ndiro mwenje waro.
24 ಅದರ ಬೆಳಕಿನಲ್ಲಿ ಎಲ್ಲಾ ಜನರು ನಡೆಯುವರು. ಭೂರಾಜರು ತಮ್ಮ ಮಹಿಮೆಯನ್ನು ಅಲ್ಲಿಗೆ ತರುವರು.
Ndudzi dzichafamba nechiedza charo, uye madzimambo enyika achauyisa kubwinya kwawo mukati maro.
25 ಅದರ ಹೆಬ್ಬಾಗಿಲುಗಳು ಒಂದು ದಿನವೂ ಮುಚ್ಚುವುದೇ ಇಲ್ಲ. ಇರುಳಂತೂ ಇರುವುದೇ ಇಲ್ಲ.
Hapana zuva richatongozarirwa masuo aro, nokuti hakuchazova nousiku ikoko.
26 ಜನಾಂಗಗಳ ಮಹಿಮೆಯೂ ಗೌರವವೂ ಅಲ್ಲಿಗೆ ತರಲಾಗುವವು.
Kubwinya nokukudzwa kwendudzi kuchauyiswa mariri.
27 ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.
Hakuna chinhu chine tsvina chichazopinda imomo, uye kana upi zvake anoita zvinonyadzisa kana zvounyengeri, asi avo chete vana mazita akanyorwa mubhuku roupenyu reGwayana.

< ಪ್ರಕಟಣೆ 21 >