< ಪ್ರಕಟಣೆ 22 +
1 ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,
И показал мне чистую реку воды жизни, светлую, как кристалл, исходящую от престола Бога и Агнца.
2 ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.
Среди улицы его, и по ту и по другую сторону реки, древо жизни, двенадцать раз приносящее плоды, дающее на каждый месяц плод свой; и листья дерева - для исцеления народов.
3 ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.
И ничего уже не будет проклятого; но престол Бога и Агнца будет в нем, и рабы Его будут служить Ему.
4 ದೇವರ ಮುಖವನ್ನು ಅವರು ಕಾಣುವರು. ಅವರ ಹಣೆಗಳ ಮೇಲೆ ದೇವರ ಹೆಸರು ಇರುವುದು.
И узрят лице Его, и имя Его будет на челах их.
5 ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು. (aiōn )
И ночи не будет там, и не будут иметь нужды ни в светильнике, ни в свете солнечном, ибо Господь Бог освещает их; и будут царствовать во веки веков. (aiōn )
6 ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.
И сказал мне: сии слова верны и истинны; и Господь Бог святых пророков послал Ангела Своего показать рабам Своим то, чему надлежит быть вскоре.
7 ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.
Се, гряду скоро: блажен соблюдающий слова пророчества книги сей.
8 ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
Я, Иоанн, видел и слышал сие. Когда же услышал и увидел, пал к ногам Ангела, показывающего мне сие, чтобы поклониться ему;
9 ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.
но он сказал мне: смотри, не делай сего; ибо я сослужитель тебе и братьям твоим пророкам и соблюдающим слова книги сей; Богу поклонись.
10 ಇದಲ್ಲದೆ ಅವನು, “ನನಗೆ ಈ ಪುಸ್ತಕದಲ್ಲಿರುವ ಪ್ರವಾದನಾ ವಾಕ್ಯಗಳಿಗೆ ಮುದ್ರೆ ಹಾಕಬೇಡ. ಏಕೆಂದರೆ ಸಮಯವು ಸಮೀಪವಾಗಿದೆ.
И сказал мне: не запечатывай слов пророчества книги сей; ибо время близко.
11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.
Неправедный пусть еще делает неправду; нечистый пусть еще сквернится; праведный да творит правду еще, и святый да освящается еще.
12 ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.
Се, гряду скоро, и возмездие Мое со Мною, чтобы воздать каждому по делам его.
13 ನಾನೇ ಆಲ್ಫಾ ಮತ್ತು ಒಮೆಗಾ, ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಆರಂಭವೂ ಸಮಾಪ್ತಿಯೂ ಆಗಿದ್ದೇನೆ.
Я есмь Алфа и Омега, начало и конец, Первый и Последний.
14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.
Блаженны те, которые соблюдают заповеди Его, чтобы иметь им право на древо жизни и войти в город воротами.
15 ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.
А вне - псы и чародеи, и любодеи, и убийцы, и идолослужители, и всякий любящий и делающий неправду.
16 “ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.
Я, Иисус, послал Ангела Моего засвидетельствовать вам сие в церквах. Я есмь корень и потомок Давида, звезда светлая и утренняя.
17 ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
И Дух и невеста говорят: прииди! И слышавший да скажет: прииди! Жаждущий пусть приходит, и желающий пусть берет воду жизни даром.
18 ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು.
И я также свидетельствую всякому слышащему слова пророчества книги сей: если кто приложит что к ним, на того наложит Бог язвы, о которых написано в книге сей;
19 ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.
и если кто отнимет что от слов книги пророчества сего, у того отнимет Бог участие в книге жизни и в святом граде и в том, что написано в книге сей.
20 ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.
Свидетельствующий сие говорит: ей, гряду скоро! Аминь. Ей, гряди, Господи Иисусе!
21 ನಮ್ಮ ಕರ್ತ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!
Благодать Господа нашего Иисуса Христа со всеми вами. Аминь