< ಪ್ರಕಟಣೆ 4 >

1 ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.
Después de esto tuve una visión y he aquí una puerta abierta en el cielo, y aquella primera voz como de trompeta que yo había oído hablar conmigo dijo: “Sube aquí y te mostraré las cosas que han de suceder después de estas”.
2 ಕೂಡಲೇ ನಾನು ಆತ್ಮವಶನಾದೆನು. ಆಗ ನನ್ನೆದುರಿನಲ್ಲಿ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬರು ಕುಳಿತಿದ್ದರು.
Al instante me hallé ( allí ) en espíritu y he aquí un trono puesto en el cielo y Uno sentado en el trono.
3 ಆಸೀನರಾದವರು ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದರು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆಬಿಲ್ಲು ಹೊಳೆಯುತ್ತಿತ್ತು.
Y Aquel que estaba sentado era a la vista como la piedra de jaspe y el sardónico; y alrededor del trono había un arco iris con aspecto de esmeralda.
4 ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.
Y en torno del trono, veinticuatro tronos; y en los tronos veinticuatro ancianos sentados, vestidos de vestiduras blancas y llevando sobre sus cabezas coronas de oro.
5 ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು.
Y del trono salían relámpagos, voces y truenos; y delante del trono había siete lámparas de fuego encendidas, que son los siete espíritus de Dios;
6 ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
y delante del trono algo semejante a un mar de vidrio, como cristal; y en medio ante el trono, y alrededor del trono, cuatro vivientes llenos de ojos por delante y por detrás.
7 ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯದು ಮನುಷ್ಯನಂತಿತ್ತು, ನಾಲ್ಕನೆಯದು ಹಾರುವ ಹದ್ದಿನಂತಿತ್ತು.
El primer viviente era semejante a un león, el segundo viviente semejante a un becerro, el tercer viviente con cara como de hombre, y el cuarto viviente semejante a un águila que vuela.
8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು:
Los cuatro vivientes, cada uno con seis alas, están llenos de ojos alrededor y por dentro, y claman día y noche sin cesar, diciendo: “Santo, santo, santo el Señor Dios, el Todopoderoso, el que era, y que es, y que viene”.
9 ಯುಗಯುಗಾಂತರಗಳಲ್ಲಿಯೂ ಜೀವಿಸುವವರಾಗಿ, ಸಿಂಹಾಸನದ ಮೇಲೆ ಆಸೀನರಾದವರಿಗೆ ಆ ನಾಲ್ಕು ಜೀವಿಗಳು ಮಹಿಮೆ, ಮಾನ, ಕೃತಜ್ಞತಾ ಸ್ತುತಿಗಳನ್ನು ಸಲ್ಲಿಸುವಾಗ, (aiōn g165)
Y cada vez que los vivientes dan gloria, honor y acción de gracias al que está sentado en el trono, al que vive por los siglos de los siglos, (aiōn g165)
10 ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, (aiōn g165)
los veinticuatro ancianos se prosternan ante Aquel que está sentado sobre el trono y adoran, al que vive por los siglos de los siglos; y deponen sus coronas ante el trono, diciendo: (aiōn g165)
11 “ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.
“Digno eres Tú, Señor y Dios nuestro, de recibir la gloria y el honor y el poder, porque Tú creaste todas las cosas y por tu voluntad tuvieron ser y fueron creadas”.

< ಪ್ರಕಟಣೆ 4 >