< ಪ್ರಕಟಣೆ 5 >

1 ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
Puis je vis dans la main droite de Celui qui était assis sur le trône un livre écrit en dedans et en dehors, et scellé de sept sceaux.
2 ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು, “ಈ ಸುರುಳಿಯ ಮುದ್ರೆಗಳನ್ನು ಬರೆಯುವುದಕ್ಕೂ ಅದನ್ನು ಬಿಚ್ಚುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಧ್ವನಿಯಿಂದ ಕೂಗುವುದನ್ನು ಕಂಡೆನು.
Et je vis un ange puissant qui criait d’une voix forte: « Qui est digne d’ouvrir le livre et d’en rompre les sceaux? »
3 ಆದರೆ ಆ ಸುರುಳಿಯನ್ನು ಬಿಚ್ಚಲು ಇಲ್ಲವೆ ಅದರಲ್ಲಿ ನೋಡಲು ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾವ ವ್ಯಕ್ತಿಗೂ ಆಗಲಿಲ್ಲ.
Et personne ni dans le ciel, ni sur la terre, ne pouvait ouvrir le livre ni le regarder.
4 ಆಗ ಸುರುಳಿಯನ್ನು ಬಿಚ್ಚುವುದಕ್ಕಾಗಲಿ, ಅದರಲ್ಲಿ ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.
Et moi je pleurais beaucoup de ce qu’il ne se trouvait personne qui fût digne d’ouvrir le livre, ni de le regarder.
5 ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.
Alors un des vieillards me dit: « Ne pleure point; voici que le lion de la tribu de Juda, le rejeton de David, a vaincu, de manière à pouvoir ouvrir le livre et ses sept sceaux. »
6 ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.
Et je vis, et voici qu’au milieu du trône et des quatre animaux, et au milieu des vieillards, un Agneau était debout: il semblait avoir été immolé; il avait sept cornes et sept yeux, qui sont les sept Esprits de Dieu envoyés par toute la terre.
7 ಆ ಕುರಿಮರಿ ಆಗಿರುವವರು ಬಂದು ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯೊಳಗಿಂದ ಸುರುಳಿಯನ್ನು ತೆಗೆದುಕೊಂಡರು.
Il vint, et reçut le livre de la main droite de Celui qui était assis sur le trône.
8 ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.
Quand il eut reçu le livre, les quatre animaux et les vingt-quatre vieillards se prosternèrent devant l’Agneau, tenant chacun une harpe et des coupes d’or pleines de parfums, qui sont les prières des saints.
9 ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.
Et ils chantaient un cantique nouveau, en disant: « Vous êtes digne de recevoir le livre et d’en ouvrir les sceaux; car vous avez été immolé et vous avez racheté pour Dieu, par votre sang, des hommes de toute tribu, de toute langue, de tout peuple et de toute nation;
10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.
et vous les avez faits rois et prêtres, et ils régneront sur la terre. »
11 ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
Puis je vis, et j’entendis autour du trône, autour des animaux et des vieillards, la voix d’une multitude d’anges, et leur nombre était des myriades et des milliers de milliers.
12 ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.
Ils disaient d’une voix forte: « L’Agneau qui a été immolé est digne de recevoir la puissance, la richesse, la sagesse, la force, l’honneur, la gloire et la bénédiction. »
13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, (aiōn g165)
Et toutes les créatures qui sont dans le ciel, sur la terre, sous la terre et dans la mer, et toutes les choses qui s’y trouvent, je les entendis qui disaient: « À Celui qui est assis sur le trône et à l’Agneau, louange, honneur, gloire et puissance dans les siècles des siècles! » (aiōn g165)
14 ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.
Et les quatre animaux disaient: « Amen! » Et les vieillards se prosternèrent et adorèrent [Celui qui vit aux siècles des siècles].

< ಪ್ರಕಟಣೆ 5 >