< ಪ್ರಕಟಣೆ 7 >
1 ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು.
इसके बाद मैंने देखा कि चार स्वर्गदूत पृथ्वी के चारों कोनों पर खड़े हुए पृथ्वी की चारों दिशाओं का वायु प्रवाह रोके हुए हैं कि न तो पृथ्वी पर वायु प्रवाहित हो, न ही समुद्र पर और न ही किसी पेड़ पर.
2 ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,
मैंने एक अन्य स्वर्गदूत को पूर्वी दिशा में ऊपर की ओर आते हुए देखा, जिसके अधिकार में जीवित परमेश्वर की मोहर थी, उसने उन चार स्वर्गदूतों से, जिन्हें पृथ्वी तथा समुद्र को नाश करने का अधिकार दिया गया था,
3 “ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು.
ऊंचे शब्द में पुकारते हुए कहा, “न तो पृथ्वी को, न समुद्र को और न ही किसी पेड़ को तब तक नाश करना, जब तक हम हमारे परमेश्वर के दासों के माथे पर मुहर न लगा दें.”
4 ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು.
तब मैंने, जो चिह्नित किए गए थे, उनकी संख्या का योग सुना: 1,44,000. ये इस्राएल के हर एक गोत्र में से थे.
5 ಯೂದ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000, ರೂಬೇನ್ ಕುಲದಿಂದ 12,000, ಗಾದ್ ಕುಲದಿಂದ 12,000,
यहूदाह गोत्र से 12,000, रियूबेन के गोत्र से 12,000, गाद के गोत्र से 12,000,
6 ಆಶೇರ್ ಕುಲದಿಂದ 12,000, ನಫ್ತಲೀಮ ಕುಲದಿಂದ 12,000, ಮನಸ್ಸೆ ಕುಲದಿಂದ 12,000,
आशेर के गोत्र से 12,000, नफताली के गोत्र से 12,000, मनश्शेह के गोत्र से 12,000,
7 ಸಿಮೆಯೋನ್ ಕುಲದಿಂದ 12,000, ಲೇವಿ ಕುಲದಿಂದ 12,000, ಇಸ್ಸಾಕರ್ ಕುಲದಿಂದ 12,000,
शिमओन के गोत्र से 12,000, लेवी के गोत्र से 12,000, इस्साखार के गोत्र से 12,000,
8 ಜೆಬುಲೋನ್ ಕುಲದಿಂದ 12,000, ಯೋಸೇಫನ ಕುಲದಿಂದ 12,000, ಬೆನ್ಯಾಮೀನ್ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000 ಜನರು.
ज़ेबुलून के गोत्र से 12,000, योसेफ़ के गोत्र से 12,000 तथा बिन्यामिन के गोत्र से 12,000 चिह्नित किए गए.
9 ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.
इसके बाद मुझे इतनी बड़ी भीड़ दिखाई दी, जिसकी गिनती कोई नहीं कर सकता था. इस समूह में हर एक राष्ट्र, गोत्र, प्रजाति और भाषा के लोग थे, जो सफ़ेद वस्त्र धारण किए तथा हाथ में खजूर की शाखाएं लिए सिंहासन तथा मेमने के सामने खड़े हुए थे.
10 ಅವರು ಮಹಾಧ್ವನಿಯಿಂದ ಹೀಗೆ ಕೂಗಿದರು: “ಸಿಂಹಾಸನದಲ್ಲಿ ಕೂತಿರುವ ನಮ್ಮ ದೇವರಿಗೂ, ಕುರಿಮರಿ ಆಗಿರುವವರಿಗೂ, ರಕ್ಷಣೆಯು ಸೇರತಕ್ಕದ್ದಾಗಿದೆ.”
वे ऊंचे शब्द में पुकार रहे थे: “उद्धार के स्रोत हैं, सिंहासन पर बैठे, हमारे परमेश्वर और मेमना.”
11 ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
सिंहासन, पुरनियों तथा चारों प्राणियों के चारों ओर सभी स्वर्गदूत खड़े हुए थे. उन्होंने सिंहासन की ओर मुख करके दंडवत होकर परमेश्वर की वंदना की.
12 “ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು. (aiōn )
वे कह रहे थे: “आमेन! स्तुति, महिमा, ज्ञान, आभार व्यक्ति, आदर, अधिकार तथा शक्ति सदा-सर्वदा हमारे परमेश्वर की है. आमेन!” (aiōn )
13 ಆಗ ಹಿರಿಯರಲ್ಲೊಬ್ಬನು ನನ್ನನ್ನು, “ಈ ಬಿಳಿ ನಿಲುವಂಗಿಯನ್ನು ತೊಟ್ಟ ಇವರು ಯಾರು? ಎಲ್ಲಿಂದ ಬಂದವರು?” ಎಂದು ಕೇಳಿದನು.
तब पुरनियों में से एक ने मुझसे प्रश्न किया, “ये, जो सफ़ेद वस्त्र धारण किए हुए हैं, कौन हैं और कहां से आए हैं?”
14 ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”
मैंने उत्तर दिया, “श्रीमान, यह तो आपको ही मालूम है.” इस पर उन्होंने कहा, “ये ही हैं वे, जो उस महाक्लेश में से सुरक्षित निकलकर आए हैं. इन्होंने अपने वस्त्र मेमने के लहू में धोकर सफ़ेद किए हैं.
15 ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.
इसलिये, “वे परमेश्वर के सिंहासन के सामने उपस्थित हैं और उनके मंदिर में दिन-रात उनकी आराधना करते रहते हैं; और वह, जो सिंहासन पर बैठे हैं, उन्हें सुरक्षा प्रदान करेंगे.
16 ‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; ಬಾಯಾರಿಕೆಯಾಗಲಿ ಆಗುವುದಿಲ್ಲ. ಇದಲ್ಲದೆ ಸೂರ್ಯನ ಬಿಸಿಲಾದರೂ,’ ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.
‘वे अब न तो कभी भूखे होंगे, न प्यासे. न तो सूर्य की गर्मी उन्हें झुलसाएगी,’ और न कोई अन्य गर्मी.
17 ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.
क्योंकि बीच के सिंहासन पर बैठा मेमना उनका चरवाहा होगा; ‘वह उन्हें जीवन के जल के सोतों तक ले जाएगा.’ ‘परमेश्वर उनकी आंखों से हर एक आंसू पोंछ डालेंगे.’”