< ರೋಮಾಪುರದವರಿಗೆ 10 >

1 ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.
Mrli vayi, yo sron mu ni bre Bachi, aa ndu ba gbujbu.
2 ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.
Me to ndi bahe ni yo sron ni Rji, ana ndi ba to kpe na.
3 ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.
Bana to kpe nitu tie ndindi u Rji na, ba wa ndi ba tie ndindi u tu mba, bana nno tumba ni tie ndindi u Rji na.
4 ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.
Ahi Kristi hi duu u tie ndindi hi ni bi wa ba kpa y'me'a
5 ನಿಯಮದಿಂದ ಬರುವ ನೀತಿಯ ಬಗ್ಗೆ ಮೋಶೆಯು ಬರೆದಿರುವುದು ಏನೆಂದರೆ: “ನಿಯಮದಲ್ಲಿ ಬರೆದಿರುವ ಎಲ್ಲವನ್ನೂ ಮಾಡುವವರೇ ಬಾಳುವವರು,” ಎಂಬುದಾಗಿ ಬರೆದನು.
Musa a nghan nitu ndindi wa'a rji ni ndji, ndji wa a tie ndindi u duu ani son nitu du'a.
6 ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’
U ndindi waa rji ni yo sron a te ndi, na tre ni sron me ndi, a ngha ni hon hi ni mi shu? (Nda ji Yesu Kristi grji ye ni meme).
7 ಅಥವಾ, ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು ಯಾರು ಪಾತಾಳಕ್ಕೆ ಇಳಿದು ಹೋಗುವರು?’ ಎಂದು ಮನಸ್ಸಿನಲ್ಲಿ ಹೇಳಿಕೊಳ್ಳಬೇಡ.” (Abyssos g12)
Na tre ndi a ghan ni grji ye ni meme? Ahi ngha ni ji Yesu Kristi rji ni khyu). (Abyssos g12)
8 ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.
Amma asi tre ndi ge? iji trea he hyehyre ni wu ni mi nyu me ni mi sron me
9 ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.
U ta hla ni nyu me ndi Yesu hi Bachi, ndi kpa y'me ni sron me ndi Rji zuu wlude ni be u gbujbu.
10 ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.
Ni sron'a idji kpa y'me nda fe kiklan sron ni nyu ndi bre nda gbujbu.
11 ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”
Imbe Rji tre ndi, biwa ba kpa y'me'a ishan na tie ba na.
12 ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.
Don Jew baba Greek bana heni kankan na, don Bachi ba'a he riri.
13 ಏಕೆಂದರೆ, “ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.”
Idji wa a yo nde Rji ani fe sii.
14 ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?
Ba tie niheri nda yo nde Idji wa bana kpau y'me na? Ba tie nihe rli nda kpa y'me ni wa bana taba wo duu ma na?
15 ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.
Ba tie nihe rli nda wo ba tina tre tre Rji ni bawu na? Ba ti ni he rli nda tre tre Rji, idan bana ton bana? To wa ba nghan, “Iza biwa ba ji tre ndindi he bi bange.
16 ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.
Bana wo tre Rjia wawuu mba wu na. Ishaya a m'ye “Bachi, a hi nghan kpa y'me ni ton ndu'a?
17 ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
Yo sron nihe nitu wo, wo rli ni tre Rji.
18 ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”
U me m'ye, “Ba na wo na?” E” gbigbi ilan mba he ni mgbumgblu, itre mba hi ni mgbumgblu wawuu.
19 ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು, “ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ತಿಳುವಳಿಕೆಯಿಲ್ಲದ ಜನಾಂಗದವರ ಮೂಲಕ ನೀವು ಕೋಪಗೊಳ್ಳುವಂತೆ ಮಾಡುವೆನು,” ಎಂದು ಹೇಳುತ್ತಾನೆ.
Luwa, mi tre, Israila ban to mu naa? “Musa a tre ndi” Mi ndu yi tie ngu nitu mgbumgblu wa bana to kpe na mi tie ndu ni ba ni ndu sron mbi tie meme.
20 ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
Ishaya a vusron nda tre ndi, biwa bana wame na'a ba fe me. Mi tsro tu mu ni biwa bana m'ye me na'a.
21 ಆದರೆ ಇಸ್ರಾಯೇಲರ ಕುರಿತಾಗಿ, “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, ದಿನವೆಲ್ಲಾ ನಾನು ಕೈಚಾಚಿ ಕರೆದೆನು,” ಎಂದು ಹೇಳುತ್ತಾನೆ.
A tre ni Israila ndi, mi n'ma wo mu hi ni ndji bi kawo trre ni hanton.

< ರೋಮಾಪುರದವರಿಗೆ 10 >