< ರೋಮಾಪುರದವರಿಗೆ 13 >

1 ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.
Let every soul be subject to the higher authorities. For there is no authority except that which is from God; and the existing authorities have been ordained of God.
2 ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು.
So the one resisting the authority, antagonizes the ordinance of God: and those antagonizing shall receive to themselves judgment.
3 ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು.
For rulers are not a terror to the good work, but to the evil. Whether do you not wish to fear the authority? do the good, and you shall have praise from it:
4 ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
for he is the minister of God for you for good. But if you do evil, fear; for he bears not the sword in vain: for he is the minister of God, executing judgment unto wrath unto the one doing evil.
5 ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ.
Therefore it is necessary to submit, not only on account of wrath, but also on account of conscience.
6 ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ.
For on account of this also pay tribute; for they are the ministers of God, attending to this very thing.
7 ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.
Give to all their dues: custom to whom custom is due; tribute to whom tribute is due; fear to whom fear is due; honor to whom honor is due.
8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.
Owe no man anything, but to love one another with divine love: for the one loving another with divine love has fulfilled the law.
9 ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.
For, thou shalt not commit adultery, thou shalt not murder, thou shalt not steal, thou shalt not covet, and if there is any other commandment, it is fulfilled in this word, in this, Thou shalt love thy neighbor as thyself with divine love.
10 ಪ್ರೀತಿಯು ತನ್ನ ನೆರೆಯವನಿಗೆ ಹಾನಿ ಮಾಡುವುದಿಲ್ಲ. ಆದ್ದರಿಂದ ಪ್ರೀತಿಯು ನಿಯಮದ ನೆರವೇರಿಕೆಯಾಗಿರುತ್ತದೆ.
Divine love works no evil to its neighbor: for divine love is the fulfilling of the law.
11 ಈಗಿನ ಕಾಲವನ್ನು ತಿಳಿದು ಇದನ್ನೆಲ್ಲಾ ಮಾಡಿರಿ. ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಗಳಿಗೆಯಾಗಿದೆ. ಏಕೆಂದರೆ, ನಮ್ಮ ರಕ್ಷಣೆಯು ನಾವು ಮೊದಲು ವಿಶ್ವಾಸವಿಟ್ಟಿದಕ್ಕಿಂತ ಈಗ ಹತ್ತಿರವಾಗಿರುತ್ತದೆ.
And recognizing this time, that it is already the hour we should wake out of sleep: for now our salvation is nearer than when we believed.
12 ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ.
For the night is far spent, and the day is at hand. Therefore let us lay aside the works of the darkness, and let us put on the arms of the light.
13 ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.
Let us walk circumspectly, as in the day; not with revelries and drunkenness, not with debaucheries and impurities, not in strife and envy:
14 ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.
but put ye on the Lord Jesus Christ, and make no provision for the lust of the flesh.

< ರೋಮಾಪುರದವರಿಗೆ 13 >