< ರೋಮಾಪುರದವರಿಗೆ 16 >

1 ನಮ್ಮ ಸಹೋದರಿಯೂ ಕೆಂಖ್ರೆಯ ಸಭೆಯ ಸೇವಕಿಯೂ ಆಗಿರುವ ಫೊಯಿಬೆಯನ್ನು ನಿಮಗೆ ಪರಿಚಯಿಸುತ್ತೇನೆ.
मैं, हमारी बहन फ़ोइबे को, जो केनख्रेया नगर की कलीसिया की विश्वस्त सेविका है.
2 ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ.
जैसा पवित्र लोगों के लिए सही है, प्रभु में उसे स्वीकार कर उसे जिस किसी रूप में भी सहायता की ज़रूरत हो, प्रदान करो. स्वयं उसने अनेकों की सहायता की है तथा मेरी भी.
3 ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಕೆಲಸದವರಾಗಿರುವ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
मसीह येशु में मेरे सहसेवकों प्रिस्का तथा अकुलॉस को मेरा नमस्कार.
4 ಅವರು ನನ್ನ ಪ್ರಾಣದ ನಿಮಿತ್ತವಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಒಡ್ಡಿದರು. ಅವರಿಗೆ ನಾನು ಮಾತ್ರವೇ ಅಲ್ಲ ಯೆಹೂದ್ಯರಲ್ಲದವರು ಎಲ್ಲಾ ಸಭೆಗಳವರೂ ಕೃತಜ್ಞರಾಗಿರುತ್ತಾರೆ.
उन्होंने मेरे हित में अपने प्राण जोख़िम में डाले थे. न केवल मैं परंतु गैर-यहूदियों की सभी कलीसियाएं उनकी ऋणी हैं.
5 ಅವರ ಮನೆಯಲ್ಲಿ ಸೇರಿ ಬರುವ ಸಭೆಗೂ ನನ್ನ ವಂದನೆಗಳನ್ನು ತಿಳಿಸಿರಿ. ಏಷ್ಯಾ ಪ್ರಾಂತದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾಗಿರುವ ಎಪೈನೆತನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
उस कलीसिया को नमस्कार, जो उनके घर में इकट्ठा होती है. मेरे प्रिय मित्र ईपाएनेतॉस को नमस्कार. आसिया प्रदेश में उसी ने सबसे पहले मसीह को स्वीकार किया था.
6 ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆಗಳು.
मरियम को नमस्कार. उसने तुम्हारे लिए बहुत परिश्रम किया है.
7 ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ.
आन्द्रोनिकॉस तथा यूनियस को नमस्कार. ये मेरे संबंधी तथा सहबंदी हैं. प्रेरितों में इनका स्थान वर्णनीय है. ये भी मुझसे पहले मसीह में आ चुके थे.
8 ನನಗೆ ಕರ್ತನಲ್ಲಿ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆಗಳು.
प्रभु में मेरे प्रिय आम्पलियातॉस को नमस्कार.
9 ಕ್ರಿಸ್ತನಲ್ಲಿ ನನ್ನ ಜೊತೆ ಸೇವಕನಾಗಿರುವ ಉರ್ಬಾನನಿಗೂ ನನಗೆ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
मसीह में हमारे सहकर्मी अरबानस को नमस्कार और मेरे प्रिय स्ताख़ुस को भी.
10 ಕ್ರಿಸ್ತನಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆಗಳು, ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
मसीह में प्रमाणित तथा स्वीकृत अपेल्लेस को नमस्कार. आरिस्तोबुलस के परिजनों को नमस्कार.
11 ನನ್ನ ಸಂಬಂಧಿಯಾಗಿರುವ ಹೆರೊಡಿಯೋನನಿಗೆ ವಂದನೆಗಳು, ಕರ್ತನಲ್ಲಿರುವ ನಾರ್ಕಿಸ್ಸನ ಕುಟುಂಬದವರಿಗೆ ವಂದನೆಗಳು.
मेरे संबंधी हेरोदियॉन को नमस्कार. नारकिसस के परिजनों में से उन्हें, जो प्रभु के अनुगामी हैं, नमस्कार.
12 ಕರ್ತನ ಸೇವೆಯಲ್ಲಿ ದುಡಿಯುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು, ಕರ್ತನಲ್ಲಿ ತುಂಬಾ ಶ್ರಮಪಟ್ಟು ದುಡಿದಿರುವ ಪ್ರೀತಿಯ ಪೆರ್ಸೀಸಳಿಗೂ ನನ್ನ ವಂದನೆಗಳು.
प्रभु के कर्मी त्रिफेना तथा त्रुफ़ोसा को नमस्कार. मेरे प्रिय परसिस को नमस्कार. उसने प्रभु में अथक परिश्रम किया है.
13 ಕರ್ತನಲ್ಲಿ ಆಯ್ಕೆಯಾಗಿರುವ ರೂಫನಿಗೂ ನನಗೂ ತಾಯಿಯಂತಿದ್ದ ಅವನ ತಾಯಿಗೂ ವಂದನೆಗಳು.
प्रभु के चुने हुए व्यक्ति रूफ़ॉस को नमस्कार तथा उसकी माता को भी, जो मेरी भी माता हैं.
14 ಅಸುಂಕ್ರಿತ, ಪ್ಲೆಗೋನ, ಹೆರ್ಮೆಯನಿಗೂ ಪತ್ರೋಬನಿಗೂ ಹೆರ್ಮಾನ ಮತ್ತು ಅವನೊಂದಿಗಿರುವ ಪ್ರಿಯರಿಗೂ ವಂದನೆಗಳು.
आसुन्क्रितॉस, फ़्लेगॉन, हेर्मेस, पात्रोबस, हेर्मेस तथा उनके सहयोगी भाई बहिनों को नमस्कार.
15 ಫಿಲೊಲೊಗ, ಯೂಲ್ಯಳು, ನೇರ್ಯ ಮತ್ತು ಅವನ ಸಹೋದರಿ, ಒಲುಂಪ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೂ ವಂದನೆಗಳು.
फ़िलोलोगॉस तथा यूलिया, नेरेयुस, उसकी बहन तथा ओलुम्पस तथा उनके साथ सभी पवित्र लोगों को नमस्कार.
16 ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಎಲ್ಲಾ ಸಭೆಗಳವರೂ ನಿಮಗೆ ವಂದನೆಗಳನ್ನು ಕಳುಹಿಸುತ್ತಾರೆ.
तुम्हारा पारस्परिक नमस्कार पवित्र चुंबन के साथ हो. मसीह की सभी कलीसियाओं की ओर से तुम्हें नमस्कार.
17 ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
प्रिय भाई बहिनो, मेरी तुमसे विशेष विनती है कि उन पर विशेष ध्यान दो, जो तुम्हारे बीच फूट डालते तथा तुम्हें दी गई शिक्षा के मार्ग में बाधा उत्पन्‍न करते रहते हैं. उनसे दूर रहो.
18 ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ये लोग हमारे प्रभु येशु मसीह के नहीं परंतु अपनी ही लालसाओं के दास हैं. अपनी चिकनी-चुपड़ी तथा चतुराई से की गई बातचीत के द्वारा वे भोले-भाले लोगों को भटका देते हैं.
19 ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.
सभी तुम्हारी आज्ञाकारिता के विषय में सुन चुके हैं. यह मेरे लिए आनंद का विषय है. फिर भी मेरी यह इच्छा है कि तुम भलाई के प्रति बुद्धिमान तथा बुराई के प्रति भोले बने रहो.
20 ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.
शांति के परमेश्वर शीघ्र ही शैतान को तुम्हारे पांवों के नीचे कुचल देंगे. हमारे प्रभु येशु मसीह का अनुग्रह तुम पर बना रहे.
21 ನನ್ನ ಜೊತೆ ಕೆಲಸದವನಾಗಿರುವ ತಿಮೊಥೆಯನು ನಿಮಗೆ ವಂದನೆಗಳನ್ನು ತಿಳಿಸುತ್ತಾನೆ. ಹಾಗೆಯೇ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.
मेरे सहकर्मी तिमोथियॉस का नमस्कार. वैसे ही मेरे परिजन लुकियॉस, यासोन तथा सोसिपात्रॉस का भी.
22 ಈ ಪತ್ರವನ್ನು ಬರೆದ ತೆರ್ತ್ಯನೆಂಬ ನಾನು ಕರ್ತನಲ್ಲಿ ನಿಮ್ಮನ್ನು ವಂದಿಸುತ್ತೇನೆ.
इस पत्र के लिखनेवाले, तेर्तियॉस का तुम्हें प्रभु में नमस्कार.
23 ಇಲ್ಲಿ ನನಗೂ ಇಡೀ ಸಭೆಗೂ ಅತಿಥಿ ಸತ್ಕಾರ ಮಾಡುತ್ತಿರುವ ಗಾಯನು ತನ್ನ ವಂದನೆಗಳನ್ನು ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾಗಿರುವ ಎರಸ್ತನೂ ಮತ್ತು ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
गायॉस का, जिसके यहां मैं अतिथि हूं और जिसके घर पर कलीसिया आराधना करती है, तुम्हें नमस्कार. नगर कोषाध्यक्ष इरास्तुस तथा संगी विश्वासी क्वार्तोस का भी तुम्हें नमस्कार. [
24 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರೊಡನೆ ಇರಲಿ! ಆಮೆನ್.
हमारे प्रभु येशु मसीह का अनुग्रह तुम पर बना रहे. आमेन.]
25 ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ. (aiōnios g166)
अब उस परमेश्वर को, जो तुमको मेरे सुसमाचार और मसीह येशु के प्रचार द्वारा और सशक्त कर सकता, उस भेद के प्रकाशन के अनुसार, जो सनातन से छिपाकर रखा गया था; (aiōnios g166)
26 ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ. (aiōnios g166)
जिसे अब परमेश्वर की आज्ञा के अनुसार भविष्यद्वक्ताओं के अभिलेखों द्वारा सभी राष्ट्रों पर प्रकट कर दिया गया है कि इसके द्वारा वे विश्वास की आज्ञाकारिता की ओर आगे बढ़ें. (aiōnios g166)
27 ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್. (aiōn g165)
मसीह येशु के द्वारा उन एकमात्र ज्ञानी परमेश्वर की महिमा सदा-सर्वदा होती रहे! आमेन. (aiōn g165)

< ರೋಮಾಪುರದವರಿಗೆ 16 >