< ರೋಮಾಪುರದವರಿಗೆ 6 >

1 ಹಾಗಾದರೆ ನಾವು ಏನು ಹೇಳೋಣ? ಕೃಪೆಯು ಹೆಚ್ಚಾಗಲಿ ಎಂದು ನಾವು ಪಾಪದಲ್ಲಿ ಮುಂದುವರಿಯೋಣವೆ?
प्रभूतरूपेण यद् अनुग्रहः प्रकाशते तदर्थं पापे तिष्ठाम इति वाक्यं किं वयं वदिष्यामः? तन्न भवतु।
2 ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ?
पापं प्रति मृता वयं पुनस्तस्मिन् कथम् जीविष्यामः?
3 ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ?
वयं यावन्तो लोका यीशुख्रीष्टे मज्जिता अभवाम तावन्त एव तस्य मरणे मज्जिता इति किं यूयं न जानीथ?
4 ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.
ततो यथा पितुः पराक्रमेण श्मशानात् ख्रीष्ट उत्थापितस्तथा वयमपि यत् नूतनजीविन इवाचरामस्तदर्थं मज्जनेन तेन सार्द्धं मृत्युरूपे श्मशाने संस्थापिताः।
5 ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು.
अपरं वयं यदि तेन संयुक्ताः सन्तः स इव मरणभागिनो जातास्तर्हि स इवोत्थानभागिनोऽपि भविष्यामः।
6 ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.
वयं यत् पापस्य दासाः पुन र्न भवामस्तदर्थम् अस्माकं पापरूपशरीरस्य विनाशार्थम् अस्माकं पुरातनपुरुषस्तेन साकं क्रुशेऽहन्यतेति वयं जानीमः।
7 ಮರಣ ಹೊಂದಿರುವ ಯಾರೇ ಆದರೂ ಪಾಪದಿಂದ ಮುಕ್ತರಾಗಿರುತ್ತಾರೆ.
यो हतः स पापात् मुक्त एव।
8 ನಾವು ಈಗ ಕ್ರಿಸ್ತ ಯೇಸುವಿನೊಂದಿಗೆ ಸತ್ತಿರುವುದಾದರೆ, ಅವರೊಂದಿಗೆ ಬದುಕುವೆವು ಎಂದು ನಂಬುತ್ತೇವೆ.
अतएव यदि वयं ख्रीष्टेन सार्द्धम् अहन्यामहि तर्हि पुनरपि तेन सहिता जीविष्याम इत्यत्रास्माकं विश्वासो विद्यते।
9 ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ.
यतः श्मशानाद् उत्थापितः ख्रीष्टो पुन र्न म्रियत इति वयं जानीमः। तस्मिन् कोप्यधिकारो मृत्यो र्नास्ति।
10 ಕ್ರಿಸ್ತ ಯೇಸು ಪಾಪದ ಪಾಲಿಗೆ ಸತ್ತದ್ದೂ ಒಂದೇ ಸಾರಿಯಾಗಿರುತ್ತದೆ. ಆದರೆ, ಅವರು ಜೀವಿಸುವ ಜೀವಿತವು ದೇವರಿಗಾಗಿಯೇ.
अपरञ्च स यद् अम्रियत तेनैकदा पापम् उद्दिश्याम्रियत, यच्च जीवति तेनेश्वरम् उद्दिश्य जीवति;
11 ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.
तद्वद् यूयमपि स्वान् पापम् उद्दिश्य मृतान् अस्माकं प्रभुणा यीशुख्रीष्टेनेश्वरम् उद्दिश्य जीवन्तो जानीत।
12 ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ.
अपरञ्च कुत्सिताभिलाषाान् पूरयितुं युष्माकं मर्त्यदेहेषु पापम् आधिपत्यं न करोतु।
13 ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.
अपरं स्वं स्वम् अङ्गम् अधर्म्मस्यास्त्रं कृत्वा पापसेवायां न समर्पयत, किन्तु श्मशानाद् उत्थितानिव स्वान् ईश्वरे समर्पयत स्वान्यङ्गानि च धर्म्मास्त्रस्वरूपाणीश्वरम् उद्दिश्य समर्पयत।
14 ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
युष्माकम् उपरि पापस्याधिपत्यं पुन र्न भविष्यति, यस्माद् यूयं व्यवस्थाया अनायत्ता अनुग्रहस्य चायत्ता अभवत।
15 ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ!
किन्तु वयं व्यवस्थाया अनायत्ता अनुग्रहस्य चायत्ता अभवाम, इति कारणात् किं पापं करिष्यामः? तन्न भवतु।
16 ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.
यतो मृतिजनकं पापं पुण्यजनकं निदेशाचरणञ्चैतयोर्द्वयो र्यस्मिन् आज्ञापालनार्थं भृत्यानिव स्वान् समर्पयथ, तस्यैव भृत्या भवथ, एतत् किं यूयं न जानीथ?
17 ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.
अपरञ्च पूर्व्वं यूयं पापस्य भृत्या आस्तेति सत्यं किन्तु यस्यां शिक्षारूपायां मूषायां निक्षिप्ता अभवत तस्या आकृतिं मनोभि र्लब्धवन्त इति कारणाद् ईश्वरस्य धन्यवादो भवतु।
18 ಪಾಪದಿಂದ ಬಿಡುಗಡೆಹೊಂದಿ ನೀತಿಗೆ ಗುಲಾಮರಾಗಿದ್ದೀರಿ.
इत्थं यूयं पापसेवातो मुक्ताः सन्तो धर्म्मस्य भृत्या जाताः।
19 ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.
युष्माकं शारीरिक्या दुर्ब्बलताया हेतो र्मानववद् अहम् एतद् ब्रवीमि; पुनः पुनरधर्म्मकरणार्थं यद्वत् पूर्व्वं पापामेध्ययो र्भृत्यत्वे निजाङ्गानि समार्पयत तद्वद् इदानीं साधुकर्म्मकरणार्थं धर्म्मस्य भृत्यत्वे निजाङ्गानि समर्पयत।
20 ನೀವು ಪಾಪಕ್ಕೆ ಗುಲಾಮರಾಗಿದ್ದಾಗ ನೀತಿಗೆ ಅಧೀನರಾಗಿರಲಿಲ್ಲ.
यदा यूयं पापस्य भृत्या आस्त तदा धर्म्मस्य नायत्ता आस्त।
21 ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!
तर्हि यानि कर्म्माणि यूयम् इदानीं लज्जाजनकानि बुध्यध्वे पूर्व्वं तै र्युष्माकं को लाभ आसीत्? तेषां कर्म्मणां फलं मरणमेव।
22 ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ. (aiōnios g166)
किन्तु साम्प्रतं यूयं पापसेवातो मुक्ताः सन्त ईश्वरस्य भृत्याऽभवत तस्माद् युष्माकं पवित्रत्वरूपं लभ्यम् अनन्तजीवनरूपञ्च फलम् आस्ते। (aiōnios g166)
23 ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ. (aiōnios g166)
यतः पापस्य वेतनं मरणं किन्त्वस्माकं प्रभुणा यीशुख्रीष्टेनानन्तजीवनम् ईश्वरदत्तं पारितोषिकम् आस्ते। (aiōnios g166)

< ರೋಮಾಪುರದವರಿಗೆ 6 >