< ರೂತಳು 3 >

1 ಒಂದು ದಿನ ರೂತಳ ಅತ್ತೆ ನೊವೊಮಿಯು ಅವಳಿಗೆ, “ನನ್ನ ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ, ನಾನು ನಿನಗೆ ವಿಶ್ರಾಂತಿ ಸ್ಥಳ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?
След това, свекърва й Ноемин й рече: Дъщерьо моя, да не потърся ли спокойствие за тебе та да благоденствуваш?
2 ಈಗ ನೀನು ಯಾರ ದಾಸಿಯರ ಸಂಗಡ ಇದ್ದೀಯೋ, ಆ ಬೋವಜನು ನಮ್ಮ ಬಂಧುವಾಗಿದ್ದಾನೆ. ಇಗೋ, ಅವನು ರಾತ್ರಿಯಲ್ಲಿ ಕಣದಲ್ಲಿ ಜವೆಗೋಧಿಯನ್ನು ತೂರುವನು.
И сега, не е ли от нашия род Вооз, с чиито момчета беше ти? Ето, тая нощ той вее ечемика на гумното.
3 ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ಒಳ್ಳೆಯ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ತಿಂದು ಕುಡಿದು ತೀರಿಸುವವರೆಗೂ ಅವನಿಗೆ ನೀನು ಅಲ್ಲಿರುವದು ಅವನಿಗೆ ತಿಳಿಯದಿರಲಿ.
Умий се, прочее, и помажи се, и облечи се с дрехите си и слез на гумното; но да се не покажеш на човека, догде не е свършил яденето и пиенето си.
4 ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳಿದುಕೊಂಡು ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು,” ಎಂದಳು.
И като си ляга, забележи мястото гдето ляга, и иди та подигни покривката из към нозете му и легни; и той ще ти каже що трябва да направиш.
5 ಅದಕ್ಕೆ ರೂತಳು, “ನೀವು ನನಗೆ ಹೇಳಿದ್ದನ್ನೆಲ್ಲಾ ಮಾಡುವೆನು,” ಎಂದಳು.
А тя й рече: Всичко що ми каза, ще сторя.
6 ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದಳು.
И тъй слезе на гумното, та стори всичко, що й заповяда свекърва й.
7 ಬೋವಜನು ತಿಂದು ಕುಡಿದು ಸಂತುಷ್ಟನಾಗಿದ್ದನು. ಅವನು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿಕೊಂಡನು. ಆಗ ರೂತಳು ಮೆಲ್ಲಗೆ ಬಂದು ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ತೆಗೆದು ಮಲಗಿಕೊಂಡಳು.
А Вооз, като яде и пи и сърцето му се развесели, отиде да си легне край купа ечемик; а тя дойде тихо та подигна покривката откъм нозете му и легна.
8 ಆದರೆ ಮಧ್ಯರಾತ್ರಿಯಲ್ಲಿ ಬೋವಜನು ಹೆದರಿ ತಿರುಗಿ ನೋಡಿದಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವುದನ್ನು ಕಂಡನು.
И около среднощ човекът се стресна и обърна; и ето жена лежеше при нозете му.
9 ಆಗ ಅವನು, “ನೀನು ಯಾರು?” ಎಂದನು. ಅದಕ್ಕವಳು, “ನಾನು ನಿಮ್ಮ ದಾಸಿಯಾದ ರೂತಳು. ನೀವು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿರಿ. ಏಕೆಂದರೆ ನೀವು ನನ್ನನ್ನು ವಿಮೋಚಿಸತಕ್ಕ ಹತ್ತಿರ ಸಂಬಂಧಿಕನು,” ಎಂದಳು.
И рече: Коя си ти? И тя отговори: Аз съм слугинята ти Рут; простри, прочее, полата си над слугинята си, защото си ми близък сродник.
10 ಅದಕ್ಕೆ ಅವನು, “ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ.
А той каза: Благословена да си от Господа, дъщерьо; тая последна доброта, която се показала, е по-голяма от предишната, гдето ти не отиде след млади, били те сиромаси или богати.
11 ಈಗ ನನ್ನ ಮಗಳೇ, ನೀನು ಭಯಪಡಬೇಡ. ನಿನಗೆ ಬೇಕಾಗಿರುವುದನ್ನು ನಿನಗೆ ಮಾಡುವೆನು. ನೀನು ಗುಣವತಿಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರೂ ಬಲ್ಲರು.
И сега, дъщерьо, не се бой; аз ще сторя за тебе всичко що казваш; защото целият град на людете ми знае, че си добродетелна жена.
12 ಈಗ ನಾನು ನಿನ್ನ ವಿಮೋಚಿಸತಕ್ಕ ಸಮೀಪ ಬಂಧುವಾಗಿದ್ದೇನೆ ಎಂಬುದು ನಿಜವೇ. ಆದರೆ ನನಗಿಂತಲೂ ಸಮೀಪಸ್ಥನಾದ ಬಂಧುವು ಒಬ್ಬನಿದ್ದಾನೆ.
И сега, вярно е, че аз съм близък сродник; има обаче друг сродник по-близък от мене.
13 ಈ ರಾತ್ರಿಯಲ್ಲಿ ಇಲ್ಲಿರು. ನಾಳೆ ಬೆಳಿಗ್ಗೆ ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಿದರೆ ಒಳ್ಳೆಯದು. ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಲು ಮನಸ್ಸಿಲ್ಲದಿದ್ದರೆ ಯೆಹೋವ ದೇವರ ಜೀವದಾಣೆ, ನಾನೇ ಅದನ್ನು ಮಾಡುವೆನು. ಉದಯಕಾಲದವರೆಗೂ ಇಲ್ಲಿಯೇ ಮಲಗಿರು,” ಎಂದನು.
Остани тая нощ и утре, ако иска той да изпълни към тебе длъжността на сродник, добре, нека я изпълни; но, ако не иска да изпълни към тебе длъжността на сродник, тогава заклевам се в живота на Господа, аз ще изпълня тая длъжност към тебе. Пренощувай тук.
14 ಅವಳು ಹಾಗೆಯೇ ಉದಯಕಾಲದವರೆಗೂ ಅವನ ಪಾದಗಳ ಬಳಿಯಲ್ಲಿ ಮಲಗಿದ್ದು ಯಾರಿಗೂ ಗೊತ್ತಾಗಬಾರದೆಂದು ಹೊತ್ತಿಗೆ ಮುಂಚೆ ಎದ್ದಳು. ಅವನು, “ಒಬ್ಬ ಸ್ತ್ರೀ ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯದಿರಲಿ,” ಎಂದನು.
И тя лежа при нозете му до сутринта, и стана преди да може човек да разпознае човека, защото той рече: Нека не се знае, че жена е дохождала на гумното.
15 ಅವನು, “ನಿನ್ನ ಮೇಲ್ಹೊದಿಕೆಯನ್ನು ಹಿಡಿ,” ಎಂದನು. ಅವಳು ಅದನ್ನು ಹಿಡಿದಾಗ ಅವನು ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಅವಳು ಅದನ್ನು ಹೊತ್ತುಕೊಂಡು ಪಟ್ಟಣಕ್ಕೆ ಬಂದಳು.
Рече още: Донеси покривалото, което е върху тебе, и дръж го. И като го държеше, той премери шест мери ечемик, та го натовари на нея; и тя си отиде в града.
16 ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು, “ನನ್ನ ಮಗಳೇ, ಏನು ನಡೆಯಿತು?” ಎಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು.
И като дойде при свекърва си, тя й каза: Що ти стана, дъщерьо моя. И тя й разправи всичко, що й стори човекът.
17 “‘ನೀನು ನಿನ್ನ ಅತ್ತೆಯ ಬಳಿಗೆ ಬರೀ ಕೈಯಾಗಿ ಹೋಗಬಾರದು’ ಎಂದು ಅವನು ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ನನಗೆ ಕೊಟ್ಟನು,” ಎಂದಳು.
Каза още: Даде ми тия шест мери ечемик, защото ми рече: Да не идеш празна при свекърва си.
18 ಅದಕ್ಕೆ ನೊವೊಮಿ, “ನನ್ನ ಮಗಳೇ, ಈ ಕಾರ್ಯ ಏನಾಗುವುದೋ, ಎಂದು ನೀನು ತಿಳಿಯುವವರೆಗೂ ಸುಮ್ಮನೆ ಇರು. ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವವರೆಗೂ ವಿಶ್ರಾಂತಿಯಲ್ಲಿ ಇರಲಾರನು,” ಎಂದಳು.
А тя рече: Седни, дъщерьо моя, догде видиш как ще се свърши работата; защото човекът няма да се спре, докато не свърши работата още днес.

< ರೂತಳು 3 >