< ಪರಮಗೀತೆ 4 >

1 ಇಗೋ, ನನ್ನ ಪ್ರಿಯಳೇ, ನೀನು ಎಷ್ಟು ಸುಂದರಿ! ಆಹಾ, ನೀನು ಎಷ್ಟು ಸುಂದರಿಯು. ನಿನ್ನ ಮುಸುಕಿನೊಳಗಿನ ನಿನ್ನ ಕಣ್ಣುಗಳು ಪಾರಿವಾಳಗಳೇ. ನಿನ್ನ ತಲೆಕೂದಲು ಗಿಲ್ಯಾದಿನ ಪರ್ವತದಿಂದ ಇಳಿದು ಬರುವ ಮೇಕೆ ಮಂದೆಯ ಹಾಗೆ ಇದೆ.
הִנָּךְ יָפָה רַעְיָתִי הִנָּךְ יָפָה עֵינַיִךְ יוֹנִים מִבַּעַד לְצַמָּתֵךְ שַׂעְרֵךְ כְּעֵדֶר הָֽעִזִּים שֶׁגָּלְשׁוּ מֵהַר גִּלְעָֽד׃
2 ನಿನ್ನ ಹಲ್ಲುಗಳ ಹೊಳಪು ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಗೆ ಸಮಾನ. ಅವು ಜೊತೆಯಾಗಿಯೇ ಇರುತ್ತವೆ. ಅವುಗಳಲ್ಲಿ ಒಂದೂ ಒಂಟಿಯಾಗಿರದು.
שִׁנַּיִךְ כְּעֵדֶר הַקְּצוּבוֹת שֶׁעָלוּ מִן־הָרַחְצָה שֶׁכֻּלָּם מַתְאִימוֹת וְשַׁכֻּלָה אֵין בָּהֶֽם׃
3 ನಿನ್ನ ತುಟಿ ಕೆಂಪು ದಾರದ ಹಾಗೆ ಇವೆ. ನಿನ್ನ ಮಾತು ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.
כְּחוּט הַשָּׁנִי שִׂפְתוֹתַיִךְ וּמִדְבָּרֵךְ נָאוֶה כְּפֶלַח הָֽרִמּוֹן רַקָּתֵךְ מִבַּעַד לְצַמָּתֵֽךְ׃
4 ನಿನ್ನ ಕೊರಳು ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲಾದ ಬುರುಜಿನ ಹಾಗೆ ಇದೆ. ಅದರಲ್ಲಿ ಶೂರರ ಸಾವಿರ ಗುರಾಣಿಗಳು ತೂಗುಹಾಕಿ ಇವೆ.
כְּמִגְדַּל דָּוִיד צַוָּארֵךְ בָּנוּי לְתַלְפִּיּוֹת אֶלֶף הַמָּגֵן תָּלוּי עָלָיו כֹּל שִׁלְטֵי הַגִּבֹּרִֽים׃
5 ನಿನ್ನ ಎರಡು ಸ್ತನಗಳು ನೆಲದಾವರೆಯ ನಡುವೆ ಮೇಯುವ ಹುಲ್ಲೆಯ ಅವಳಿಮರಿಗಳ ಹಾಗಿವೆ.
שְׁנֵי שָׁדַיִךְ כִּשְׁנֵי עֳפָרִים תְּאוֹמֵי צְבִיָּה הָרוֹעִים בַּשּׁוֹשַׁנִּֽים׃
6 ಹೊತ್ತು ಮೂಡುವವರೆಗೂ ನೆರಳು ಓಡಿ ಹೋಗುವವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.
עַד שֶׁיָּפוּחַ הַיּוֹם וְנָסוּ הַצְּלָלִים אֵלֶךְ לִי אֶל־הַר הַמּוֹר וְאֶל־גִּבְעַת הַלְּבוֹנָֽה׃
7 ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿ, ನಿನ್ನಲ್ಲಿ ದೋಷವೇನೂ ಇಲ್ಲ.
כֻּלָּךְ יָפָה רַעְיָתִי וּמוּם אֵין בָּֽךְ׃
8 ಬಾ, ವಧುವೇ, ಲೆಬನೋನಿನಿಂದ ಬಾ, ಲೆಬನೋನಿನಿಂದ ನನ್ನೊಡನೆ ಬಾ. ಅಮಾನದ ಶಿಖರಗಳಿಂದ, ಸೆನೀರ್, ಹೆರ್ಮೋನ್ ಶಿಖರಗಳಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ಇಳಿದು ಬಾ.
אִתִּי מִלְּבָנוֹן כַּלָּה אִתִּי מִלְּבָנוֹן תָּבוֹאִי תָּשׁוּרִי ׀ מֵרֹאשׁ אֲמָנָה מֵרֹאשׁ שְׂנִיר וְחֶרְמוֹן מִמְּעֹנוֹת אֲרָיוֹת מֵֽהַרְרֵי נְמֵרִֽים׃
9 ನನ್ನ ಹೃದಯವನ್ನು ನೀನು ಸೆಳಕೊಂಡಿರುವೆ. ನನ್ನ ಪ್ರಿಯಳೇ, ನನ್ನ ವಧುವೇ, ನೀನು ನಿನ್ನ ಒಂದೇ ಕಿರುನೋಟದಿಂದಲೂ, ನಿನ್ನ ಕೊರಳಿನ ಒಂದೇ ಕಂಠ ಹಾರದಿಂದಲೂ, ನನ್ನ ಹೃದಯವನ್ನು ಸೆಳಕೊಂಡಿರುವೆ.
לִבַּבְתִּנִי אֲחֹתִי כַלָּה לִבַּבְתִּנִי (באחד) [בְּאַחַת] מֵעֵינַיִךְ בְּאַחַד עֲנָק מִצַּוְּרֹנָֽיִךְ׃
10 ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ!
מַה־יָּפוּ דֹדַיִךְ אֲחֹתִי כַלָּה מַה־טֹּבוּ דֹדַיִךְ מִיַּיִן וְרֵיחַ שְׁמָנַיִךְ מִכׇּל־בְּשָׂמִֽים׃
11 ನನ್ನ ವಧುವೇ, ನಿನ್ನ ತುಟಿಗಳಿಂದ ಜೇನು ಸುರಿಯುತ್ತಿದೆ. ಹಾಲೂ, ಜೇನೂ ನಿನ್ನ ನಾಲಿಗೆ ಅಡಿಯಲ್ಲಿವೆ. ನಿನ್ನ ವಸ್ತ್ರಗಳ ಸುವಾಸನೆಯು ಲೆಬನೋನಿನ ಸುಗಂಧದಂತಿದೆ.
נֹפֶת תִּטֹּפְנָה שִׂפְתוֹתַיִךְ כַּלָּה דְּבַשׁ וְחָלָב תַּחַת לְשׁוֹנֵךְ וְרֵיחַ שַׂלְמֹתַיִךְ כְּרֵיחַ לְבָנֽוֹן׃
12 ನನ್ನ ಪ್ರಿಯಳೇ, ನನ್ನ ವಧುವೇ, ನೀನು ಭದ್ರ ತೋಟವೂ ಬೇಲಿಯೊಳಗಿನ ಬುಗ್ಗೆಯೂ ಮುದ್ರಿಸಿದ ಬಾವಿಯೂ ಆಗಿರುವೆ.
גַּן ׀ נָעוּל אֲחֹתִי כַלָּה גַּל נָעוּל מַעְיָן חָתֽוּם׃
13 ನಿನ್ನ ತೋಟದಲ್ಲಿ ದಾಳಿಂಬೆ ವನವೂ ಫಲಕೊಡುವ ಉತ್ತಮ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಇವೆ.
שְׁלָחַיִךְ פַּרְדֵּס רִמּוֹנִים עִם פְּרִי מְגָדִים כְּפָרִים עִם־נְרָדִֽים׃
14 ಜಟಾಮಾಂಸಿ ಅಷ್ಟೇ ಅಲ್ಲದೆ ಕೇಸರಿಯೂ ಬಜೆಯೂ ದಾಲ್ಚಿನ್ನಿಯೂ ಸಕಲ ಸಾಂಬ್ರಾಣಿ ಗಿಡಮೂಲಿಕೆಗಳೂ ರಕ್ತಬೋಳವೂ ಅಗರೂ ಸಕಲವಿಧ ಶ್ರೇಷ್ಠ ಸುಗಂಧ ದ್ರವ್ಯಗಳೂ ಬೆಳೆದಿವೆ.
נֵרְדְּ ׀ וְכַרְכֹּם קָנֶה וְקִנָּמוֹן עִם כׇּל־עֲצֵי לְבוֹנָה מֹר וַאֲהָלוֹת עִם כׇּל־רָאשֵׁי בְשָׂמִֽים׃
15 ನೀನು ತೋಟದ ಬುಗ್ಗೆಯೂ ಉಕ್ಕಿಬರುವ ಒರತೆಯೂ ಲೆಬನೋನಿನಿಂದ ಹರಿಯುವ ಹೊಳೆಯೂ ಆಗಿರುವೆ.
מַעְיַן גַּנִּים בְּאֵר מַיִם חַיִּים וְנֹזְלִים מִן־לְבָנֽוֹן׃
16 ಉತ್ತರಗಾಳಿಯೇ, ಬೀಸು, ದಕ್ಷಿಣ ಗಾಳಿಯೇ ಬಾ ನನ್ನ ತೋಟದ ಮೇಲೆ ಬೀಸು. ಸುಗಂಧ ಸುವಾಸನೆ ಹರಡಲಿ. ನನ್ನ ಪ್ರಿಯನು ತನ್ನ ತೋಟಕ್ಕೆ ಬಂದು ಉತ್ತಮ ಫಲಗಳನ್ನು ರುಚಿಸಲಿ.
עוּרִי צָפוֹן וּבוֹאִי תֵימָן הָפִיחִי גַנִּי יִזְּלוּ בְשָׂמָיו יָבֹא דוֹדִי לְגַנּוֹ וְיֹאכַל פְּרִי מְגָדָֽיו׃

< ಪರಮಗೀತೆ 4 >