< ಪರಮಗೀತೆ 6 >

1 ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವಂತೆ ನಿನ್ನ ಪ್ರಿಯನು ಯಾವ ಕಡೆಗೆ ಹೋಗಿದ್ದಾನೆ?
Whither is your kinsman gone, you beautiful amongst women? whither has your kinsman turned aside? [tell us], and we will seek him with you.
2 ನನ್ನ ಪ್ರಿಯನು ತೋಟಗಳಲ್ಲಿ ಮಂದೆ ಮೇಯಿಸುವುದಕ್ಕೂ, ನೆಲದಾವರೆಗಳನ್ನು ಕೊಯ್ದು ತರುವುದಕ್ಕೂ, ಸುಗಂಧ ಸಸ್ಯಗಳಿರುವ ಉದ್ಯಾನವನಕ್ಕೆ ಹೋಗಿದ್ದಾನೆ.
My kinsman is gone down to his garden, to the beds of spice, to feed [his flock] in the gardens, and to gather lilies.
3 ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.
I am my kinsman's, and my kinsman is mine, who feeds amongst the lilies.
4 ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.
You are fair, my companion, as Pleasure, beautiful as Jerusalem, terrible as [armies] set in array.
5 ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಏಕೆಂದರೆ ಅವು ನನ್ನನ್ನು ಜಯಿಸಿವೆ. ನಿನ್ನ ತಲೆಗೂದಲು ಗಿಲ್ಯಾದ್ ಪರ್ವತದಿಂದ ಇಳಿಯುವ ಮೇಕೆಯ ಮಂದೆಯಂತಿದೆ.
Turn away your eyes from before me, for they have ravished me: your hair is as flocks of goats which have appeared from Galaad.
6 ನಿನ್ನ ಹಲ್ಲುಗಳ ಹೊಳಪು ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಗೆ ಸಮಾನ. ಅವು ಜೊತೆಯಾಗಿಯೇ ಇರುತ್ತವೆ. ಅವುಗಳಲ್ಲಿ ಒಂದೂ ಒಂಟಿಯಾಗಿರದು.
Your teeth are as flocks of shorn [sheep], that have gone up from the washing, all of them bearing twins, and there is none barren amongst them: your lips are as a thread of scarlet, and your speech is comely.
7 ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.
Your cheek is like the rind of a pomegranate, [being seen] without your veil.
8 ಅರಸನಿಗೆ ಅರವತ್ತು ಮಂದಿ ರಾಣಿಯರೂ ಎಂಬತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
There are sixty queens, and eighty concubines, and maidens without number.
9 ಆದರೆ ನನಗೆ ನನ್ನ ಪಾರಿವಾಳವು, ನನ್ನ ಪರಿಪೂರ್ಣಳು ಒಬ್ಬಳೇ. ಇವಳು ತನ್ನ ತಾಯಿಗೆ ಒಬ್ಬಳೇ ಮಗಳು. ತನ್ನ ಹೆತ್ತವಳಿಗೆ ಪ್ರಿಯಳು. ಕನ್ನಿಕೆಯರು ಇವಳನ್ನು ಕಂಡು ಆಶೀರ್ವದಿಸಿದರು. ಹೌದು, ರಾಣಿಯರೂ ಉಪಪತ್ನಿಯರೂ ಇವಳನ್ನು ಹೀಗೆಂದು ಹೊಗಳಿದರು:
My dove, my perfect one is one; she is the [only] one of her mother; she is the choice of her that bore her. The daughters saw her, and the queens will pronounce her blessed, yes, and the concubines, and they will praise her.
10 ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ, ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂ ಆಗಿರುವ ಈ ಉದಯವಂತೆ ಯಾರು?
Who is this that looks forth as the morning, fair as the moon, choice as the sun, terrible as [armies] set in array?
11 ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.
I went down to the garden of nuts, to look at the fruits of the valley, to see if the vine flowered, [if] the pomegranates blossomed.
12 ನಾನು ಅದನ್ನು ಅರಿತುಕೊಳ್ಳುವ ಮೊದಲು, ನನ್ನ ಆಸೆ ನನ್ನ ಜನ ಪ್ರಧಾನರ ನಡುವೆ ರಥದ ಮೇಲೆ ಕೂತಿರುವಂತೆ ನನ್ನನ್ನು ನಡೆಸಿತು.
There I will give you my breasts: my soul knew [it] not: it made me as the chariots of Aminadab.
13 ತಿರುಗಿ ಬಾ, ತಿರುಗಿ ಬಾ, ಶೂಲಮ್ ಊರಿನವಳೇ, ನಾವು ನಿನ್ನನ್ನು ನೋಡುವಂತೆ ತಿರುಗಿ ಬಾ, ತಿರುಗಿ ಬಾ! ಪ್ರಿಯಕರ ಎರಡು ಗುಂಪಿನ ನರ್ತಕಿಯರ ನಡುವೆ ಕುಣಿಯುತ್ತಿರುವ, ಶೂಲಮ್ ಊರಿನವಳನ್ನು ನೀವು ನೋಡುವುದೇಕೆ?
Return, return, O Sunamite; return, return, and we will look at you. What will you see in the Sunamite? She comes as bands of armies.

< ಪರಮಗೀತೆ 6 >