< ಪರಮಗೀತೆ 7 >
1 ಓ ರಾಜಪುತ್ರಿಯೇ! ಕೆರಗಳನ್ನು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದರವಾಗಿವೆ! ನಿನ್ನ ಅಂದದ ಕಾಲುಗಳು ಶಿಲ್ಪಿಯ ಕೈಕೆಲಸದ ಆಭರಣಗಳಂತಿವೆ.
王女啊,你的脚在鞋中何其美好! 你的大腿圆润,好像美玉, 是巧匠的手做成的。
2 ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ದುಂಡು ಬಟ್ಟಲಿನ ಹಾಗಿದೆ. ನಿನ್ನ ಹೊಟ್ಟೆ ನೆಲದಾವರೆಗಳಿಂದ ಸುತ್ತಿಕೊಂಡಿರುವ ಹೂವುಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.
你的肚脐如圆杯, 不缺调和的酒; 你的腰如一堆麦子, 周围有百合花。
3 ನಿನ್ನ ಸ್ತನಗಳೆರಡೂ ಹುಲ್ಲೆಯ ಅವಳಿಮರಿಗಳ ಹಾಗಿವೆ.
你的两乳好像一对小鹿, 就是母鹿双生的。
4 ನಿನ್ನ ಕೊರಳು ದಂತದ ಗೋಪುರ. ನಿನ್ನ ಕಣ್ಣುಗಳು ಬತ್ ರಬ್ಬೀಮ್ ಬಾಗಿಲ ಬಳಿಯಲ್ಲಿರುವ ಹೆಷ್ಬೋನಿನ ಕೊಳಗಳು. ನಿನ್ನ ಮೂಗು, ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದ ಹಾಗಿದೆ.
你的颈项如象牙台; 你的眼目像希实本、巴特·拉并门旁的水池; 你的鼻子仿佛朝大马士革的黎巴嫩塔。
5 ನಿನ್ನ ತಲೆಯು ಕರ್ಮೆಲ್ ಬೆಟ್ಟದಂತೆ ವೈಭವ. ನಿನ್ನ ತಲೆಕೂದಲು ಧೂಮ್ರ ಬಣ್ಣದ ಹಾಗೆ ಇದೆ. ಹೆಣೆದ ಆ ಜಡೆಯಿಂದ ಅರಸನಿಗೂ ಆಕರ್ಷಣ.
你的头在你身上好像迦密山; 你头上的发是紫黑色; 王的心因这下垂的发绺系住了。
6 ನನ್ನ ಪ್ರೇಮವೇ, ನೀನು ನಿನ್ನ ಹರ್ಷದಿಂದ ಎಷ್ಟೋ ಸುಂದರಿಯೂ ಎಷ್ಟೋ ಮನೋಹರಳೂ ಆಗಿರುವೆ.
我所爱的,你何其美好! 何其可悦,使人欢畅喜乐!
7 ನಿನ್ನ ನೀಳ ಆಕಾರವು ಖರ್ಜೂರ ಮರದಂತಿದೆ. ನಿನ್ನ ಸ್ತನಗಳು ಅದರ ಗೊಂಚಲುಗಳು.
你的身量好像棕树; 你的两乳如同其上的果子,累累下垂。
8 ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ.
我说:我要上这棕树,抓住枝子。 愿你的两乳好像葡萄累累下垂, 你鼻子的气味香如苹果;
9 ನಿನ್ನ ಬಾಯಿಯ ಮುದ್ದುಗಳು ಉತ್ತಮ ದ್ರಾಕ್ಷಾರಸದ ಹಾಗಿರಲಿ. ಪ್ರಿಯತಮೆ ನನ್ನ ಪ್ರಿಯಕರನ ತುಟಿ, ಹಲ್ಲುಗಳಲ್ಲಿ ದ್ರಾಕ್ಷಾರಸವು ನೇರವಾಗಿ ಹರಿದು ಇಂಪಾಗಿ ರುಚಿಸಲಿ.
你的口如上好的酒。 〔新娘〕 女子说:为我的良人下咽舒畅, 流入睡觉人的嘴中。
10 ನಾನು ನನ್ನ ಪ್ರಿಯನವಳು. ಅವನ ಆಸೆಯು ನನ್ನ ಕಡೆಗಿರುವುದು.
我属我的良人, 他也恋慕我。
11 ನನ್ನ ಪ್ರಿಯನೇ, ಬಾ ಹೋಗೋಣ. ನಾವು ಗ್ರಾಮಗಳಲ್ಲಿ ವಸತಿಯಾಗಿರೋಣ ಬಾ.
我的良人,来吧! 你我可以往田间去; 你我可以在村庄住宿。
12 ನಾವು ಬೆಳಗ್ಗೆ ಹೊರಟು, ದ್ರಾಕ್ಷಿ ತೋಟಗಳಿಗೆ ಹೋಗೋಣ ಬಾ. ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂಬಿಟ್ಟಿದೆಯೋ ನೋಡೋಣ ಬಾ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಅರ್ಪಿಸುವೆನು.
我们早晨起来往葡萄园去, 看看葡萄发芽开花没有, 石榴放蕊没有; 我在那里要将我的爱情给你。
13 ನನ್ನ ಪ್ರಿಯನೇ, ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ. ನಮ್ಮ ಬಾಗಿಲ ಬಳಿಯಲ್ಲಿ ನಿನಗೋಸ್ಕರ ನಾನು ರುಚಿಯುಳ್ಳ ಮಾಗಿದ ಹೊಸ ಹಣ್ಣುಗಳನ್ನು ಸಿದ್ಧಪಡಿಸಿದ್ದೇನೆ.
风茄放香, 在我们的门内有各样新陈佳美的果子; 我的良人,这都是我为你存留的。