< ಪರಮಗೀತೆ 8 >

1 ನೀನು ನನ್ನ ತಾಯಿಯ ಹಾಲು ಕುಡಿದ ನನ್ನ ಅಣ್ಣನಾಗಿದ್ದರೆ, ಎಷ್ಟೋ ಚೆನ್ನಾಗಿರುತ್ತಿತ್ತು! ನಾನು ನಿನ್ನನ್ನು ಕಂಡು ಹೊರಗೆಯೇ ನಿನಗೆ ಮುದ್ದಿಡುತ್ತಿದ್ದೆ. ಆಗ ಯಾರೂ ನನ್ನನ್ನು ನಿಂದಿಸುತ್ತಿರಲಿಲ್ಲ.
מִ֤י יִתֶּנְךָ֙ כְּאָ֣ח לִ֔י יֹונֵ֖ק שְׁדֵ֣י אִמִּ֑י אֶֽמְצָאֲךָ֤ בַחוּץ֙ אֶשָּׁ֣קְךָ֔ גַּ֖ם לֹא־יָב֥וּזוּ לִֽי׃
2 ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು. ಅಲ್ಲಿ ನೀನು ನನಗೆ ಉಪದೇಶ ಮಾಡಬಹುದಾಗಿತ್ತು. ನಾನು ದ್ರಾಕ್ಷಿ ಮಿಶ್ರಪಾನಕವನ್ನು ಕೊಡುತ್ತಿದ್ದೆನು. ದಾಳಿಂಬೆ ರಸವನ್ನು ನಿನಗೆ ಕುಡಿಸುತ್ತಿದ್ದೆನು.
אֶנְהָֽגֲךָ֗ אֲבִֽיאֲךָ֛ אֶל־בֵּ֥ית אִמִּ֖י תְּלַמְּדֵ֑נִי אַשְׁקְךָ֙ מִיַּ֣יִן הָרֶ֔קַח מֵעֲסִ֖יס רִמֹּנִֽי׃
3 ನಿನ್ನ ಎಡಗೈ ನನ್ನ ತಲೆದಿಂಬಾಗಿರಲಿ. ನಿನ್ನ ಬಲಗೈ ನನ್ನನ್ನು ಅಪ್ಪಿಕೊಳ್ಳಲಿ.
שְׂמֹאלֹו֙ תַּ֣חַת רֹאשִׁ֔י וִֽימִינֹ֖ו תְּחַבְּקֵֽנִי׃
4 ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಲೂ ಬೇಡಿರಿ ಎಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
הִשְׁבַּ֥עְתִּי אֶתְכֶ֖ם בְּנֹ֣ות יְרוּשָׁלָ֑͏ִם מַה־תָּעִ֧ירוּ ׀ וּֽמַה־תְּעֹֽרְר֛וּ אֶת־הָאַהֲבָ֖ה עַ֥ד שֶׁתֶּחְפָּֽץ׃ ס
5 ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಪ್ರಿಯತಮೆ ಸೇಬುಗಿಡದ ಕೆಳಗೆ ನಿನ್ನನ್ನು ಪ್ರೇರಿಸಿದೆನು. ಅದು ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ ಸ್ಥಳ. ಅಲ್ಲಿ ನಿನ್ನ ತಾಯಿ ಪ್ರಸವವೇದನೆಯಿಂದ ನಿನ್ನನ್ನು ಹಡೆದಳು.
מִ֣י זֹ֗את עֹלָה֙ מִן־הַמִּדְבָּ֔ר מִתְרַפֶּ֖קֶת עַל־דֹּודָ֑הּ תַּ֤חַת הַתַּפּ֙וּחַ֙ עֹֽורַרְתִּ֔יךָ שָׁ֚מָּה חִבְּלַ֣תְךָ אִמֶּ֔ךָ שָׁ֖מָּה חִבְּלָ֥ה יְלָדַֽתְךָ׃
6 ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು. (Sheol h7585)
שִׂימֵ֨נִי כַֽחֹותָ֜ם עַל־לִבֶּ֗ךָ כַּֽחֹותָם֙ עַל־זְרֹועֶ֔ךָ כִּֽי־עַזָּ֤ה כַמָּ֙וֶת֙ אַהֲבָ֔ה קָשָׁ֥ה כִשְׁאֹ֖ול קִנְאָ֑ה רְשָׁפֶ֕יהָ רִשְׁפֵּ֕י אֵ֖שׁ שַׁלְהֶ֥בֶתְיָֽה׃ (Sheol h7585)
7 ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ತನ್ನ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೂ, ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು.
מַ֣יִם רַבִּ֗ים לֹ֤א יֽוּכְלוּ֙ לְכַבֹּ֣ות אֶת־הָֽאַהֲבָ֔ה וּנְהָרֹ֖ות לֹ֣א יִשְׁטְפ֑וּהָ אִם־יִתֵּ֨ן אִ֜ישׁ אֶת־כָּל־הֹ֤ון בֵּיתֹו֙ בָּאַהֲבָ֔ה בֹּ֖וז יָב֥וּזוּ לֹֽו׃ ס
8 ಪ್ರಾಯಕ್ಕೆ ಬಾರದ ತಂಗಿ ಒಬ್ಬಳು ನಮಗಿದ್ದಾಳೆ. ಅವಳನ್ನು ಮದುವೆಗಾಗಿ ಮಾತಾಡಲು ಯಾರಾದರೂ ಬಂದರೆ, ನಾವೇನು ಮಾಡೋಣ?
אָחֹ֥ות לָ֙נוּ֙ קְטַנָּ֔ה וְשָׁדַ֖יִם אֵ֣ין לָ֑הּ מַֽה־נַּעֲשֶׂה֙ לַאֲחֹתֵ֔נוּ בַּיֹּ֖ום שֶׁיְּדֻבַּר־בָּֽהּ׃
9 ಅವಳು ಗೋಡೆಯಾದರೆ, ನಾವು ಅವಳ ಮೇಲೆ ಬೆಳ್ಳಿಯ ಗೋಪುರವನ್ನು ಕಟ್ಟುವೆವು. ಅವಳು ಬಾಗಿಲಾದರೆ, ದೇವದಾರು ಹಲಿಗೆಗಳಿಂದ ಅವಳನ್ನು ಭದ್ರಪಡಿಸುವೆವು.
אִם־חֹומָ֣ה הִ֔יא נִבְנֶ֥ה עָלֶ֖יהָ טִ֣ירַת כָּ֑סֶף וְאִם־דֶּ֣לֶת הִ֔יא נָצ֥וּר עָלֶ֖יהָ ל֥וּחַ אָֽרֶז׃
10 ನಾನು ಗೋಡೆಯಂಥವಳೇ, ನನ್ನ ಯೌವನವು ಬುರುಜುಗಳು. ಹೀಗೆ ನಾನು ಅವನ ದೃಷ್ಟಿಯಲ್ಲಿ ಸಮಾಧಾನ ಹೊಂದುವೆನು.
אֲנִ֣י חֹומָ֔ה וְשָׁדַ֖י כַּמִּגְדָּלֹ֑ות אָ֛ז הָיִ֥יתִי בְעֵינָ֖יו כְּמֹוצְאֵ֥ת שָׁלֹֽום׃ פ
11 ಸೊಲೊಮೋನನಿಗೆ ಬಾಳ್ ಹಾಮೋನಿನಲ್ಲಿ ಒಂದು ದ್ರಾಕ್ಷಿತೋಟ ಇತ್ತು. ಅವನು ಆ ದ್ರಾಕ್ಷಿತೋಟವನ್ನು ರೈತರಿಗೆ ಗುತ್ತಿಗೆಗೆ ಕೊಟ್ಟನು. ಪ್ರತಿಯೊಬ್ಬ ಗುತ್ತಿಗೆಗಾರನು ಅದರ ಫಲದಿಂದ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.
כֶּ֣רֶם הָיָ֤ה לִשְׁלֹמֹה֙ בְּבַ֣עַל הָמֹ֔ון נָתַ֥ן אֶת־הַכֶּ֖רֶם לַנֹּטְרִ֑ים אִ֛ישׁ יָבִ֥א בְּפִרְיֹ֖ו אֶ֥לֶף כָּֽסֶף׃
12 ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯಗಳು ನಿನಗೇ ಇರಲಿ. ತೋಟದ ಫಲವನ್ನು ಕಾಪಾಡುವವರಿಗೆ ಇನ್ನೂರು ಬೆಳ್ಳಿನಾಣ್ಯಗಳು ಸೇರಲಿ. ಆದರೆ ನನ್ನ ದ್ರಾಕ್ಷಿತೋಟ ನನಗೇ ಇರಲಿ.
כַּרְמִ֥י שֶׁלִּ֖י לְפָנָ֑י הָאֶ֤לֶף לְךָ֙ שְׁלֹמֹ֔ה וּמָאתַ֖יִם לְנֹטְרִ֥ים אֶת־פִּרְיֹֽו׃
13 ತೋಟಗಳಲ್ಲಿ ವಾಸವಾಗಿರುವಳೇ, ಸ್ನೇಹಿತರು ನನ್ನ ಸಂಗಡ ಇದ್ದಾರೆ. ನಾನು ನಿನ್ನ ಧ್ವನಿಯನ್ನು ಕೇಳ ಮಾಡು!
הַיֹּושֶׁ֣בֶת בַּגַּנִּ֗ים חֲבֵרִ֛ים מַקְשִׁיבִ֥ים לְקֹולֵ֖ךְ הַשְׁמִיעִֽינִי׃
14 ನನ್ನ ಪ್ರಿಯನೇ, ಸುಗಂಧ ಸಸ್ಯ ಪರ್ವತಗಳ ಮೇಲಿರುವ ಜಿಂಕೆಯಂತೆಯೂ, ಪ್ರಾಯದ ಹುಲ್ಲೆಯಂತೆಯೂ ನೀನು ಬೇಗ ಬಾ.
בְּרַ֣ח ׀ דֹּודִ֗י וּֽדְמֵה־לְךָ֤ לִצְבִי֙ אֹ֚ו לְעֹ֣פֶר הָֽאַיָּלִ֔ים עַ֖ל הָרֵ֥י בְשָׂמִֽים׃

< ಪರಮಗೀತೆ 8 >