< ತೀತನಿಗೆ ಬರೆದ ಪತ್ರಿಕೆ 3 >

1 ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.
Remind them to be subject to principalities and authorities, to obey rule, to be ready to every good work,
2 ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು.
to speak evil of no one, not to be quarrelsome—gentle, showing all meekness to all men,
3 ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.
for we, also, were once thoughtless, disobedient, led astray, serving manifold desires and pleasures, living in malice and envy, odious—hating one another;
4 ಆದರೆ ನಮಗೆ ರಕ್ಷಕರೂ ದೇವರೂ ಆಗಿರುವ ಕ್ರಿಸ್ತ ಯೇಸುವಿನ ದಯೆಯೂ ಪ್ರೀತಿಯೂ ಮನುಷ್ಯರ ಕಡೆಗೆ ಪ್ರತ್ಯಕ್ಷವಾದಾಗ,
and when the kindness and the love to men of God our Savior appeared
5 ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.
(not by works that [are] in righteousness that we did but according to His kindness), He saved us, through a bathing of regeneration, and a renewing of the Holy Spirit,
6 ನಮಗೆ ರಕ್ಷಕರಾದ ಕ್ರಿಸ್ತ ಯೇಸುವಿನ ಮೂಲಕ ದೇವರು ಪವಿತ್ರಾತ್ಮ ದೇವರನ್ನು ನಮ್ಮ ಮೇಲೆ ಸಮೃದ್ಧವಾಗಿ ಸುರಿಸಿದರು.
which He poured on us richly, through Jesus Christ our Savior,
7 ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು. (aiōnios g166)
that having been declared righteous by His grace, we may become heirs according to the hope of continuous life. (aiōnios g166)
8 ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.
The word [is] steadfast; and concerning these things I intend you to affirm fully, that they may be thoughtful, to be leading in good works—who have believed God; these are the good and profitable things to men,
9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.
but stand away from foolish questions, and genealogies, and contentions, and strivings about law—for they are unprofitable and vain.
10 ಭೇದ ಹುಟ್ಟಿಸುವವರನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು. ಅಂಥವರ ಸಹವಾಸ ಮಾಡದಿರು.
Reject a heretical man, after a first and second admonition,
11 ಅಂಥವರು ಸನ್ಮಾರ್ಗ ತಪ್ಪಿದವರೂ ತಮ್ಮನ್ನು ತಾವೇ ಖಂಡಿಸಿಕೊಳ್ಳುವವರಾಗಿ ಪಾಪಮಾಡುವವರೂ ಆಗಿದ್ದಾರೆಂದು ನಿಶ್ಚಯವಾಗಿ ತಿಳಿದುಕೊ.
having known that he has been subverted who [is] such, and sins, being self-condemned.
12 ನಾನು ಅರ್ತೆಮನನ್ನಾಗಲಿ, ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದಾಗ ನೀನು ನಿಕೊಪೊಲಿಯಲ್ಲಿ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನ ಮಾಡು. ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂದು ನಾನು ತೀರ್ಮಾನಿಸಿದ್ದೇನೆ.
When I will send Artemas to you, or Tychicus, be diligent to come to me to Nicopolis, for I have determined to winter there.
13 ನಿಯಮ ಪಂಡಿತನಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು. ಅವರಿಗೇನೂ ಕೊರತೆಯಾಗಬಾರದು.
Diligently send forth Zenas the lawyer and Apollos on their way, that nothing to them may be lacking,
14 ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.
and let them learn—ours also—to be leading in good works to the necessary uses, that they may not be unfruitful.
15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ವಿಶ್ವಾಸದಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!
All those with me greet you. Greet those cherishing us in faith. The grace [is] with you all!

< ತೀತನಿಗೆ ಬರೆದ ಪತ್ರಿಕೆ 3 >