< ಜೆಕರ್ಯನು 10 >
1 ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.
汝ら春の雨の時に雨をヱホバに乞へヱホバは電光を造り大雨を人々に賜ひ田野において草蔬を各々に賜ふべし
2 ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು. ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು. ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ. ವ್ಯರ್ಥವಾಗಿ ಆದರಿಸುತ್ತಾರೆ, ಆದ್ದರಿಂದ ಕುರಿಗಳಂತೆ ಚದರಿದ್ದಾರೆ, ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.
夫テラピムは空虚き事を言ひ卜筮師はその見る所眞實ならずして虚僞の夢を語る其慰むる所は徒然なり是をもて民は羊のごとくに迷ひ牧者なきに因て惱む
3 “ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ. ನಾಯಕರನ್ನು ದಂಡಿಸುವೆನು. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವ ಯೆಹೂದನ ಮನೆತನದವರನ್ನು ಪರಿಪಾಲಿಸಿ, ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ.
我牧者にむかひて怒を發す我牡山羊を罰せん萬軍のヱホバその群なるユダの家を顧み之をしてその美しき軍馬のごとくならしめたまふ
4 ಆ ಕುಲದಿಂದಲೇ ಮೂಲೆಗಲ್ಲೂ, ಗುಡಾರದ ಮೊಳೆಯೂ, ಯುದ್ಧದ ಬಿಲ್ಲೂ, ಸಕಲ ಅಧಿಕಾರಿಗಳೂ ಕೂಡಿಕೊಂಡು ಹೊರಬರುವರು.
隅石彼より出で釘かれより出で軍弓かれより出で宰たる者みな齊く彼より出ん
5 ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.
彼等戰ふ時は勇士のごとくにして街衢の泥の中に敵を蹂躙らんヱホバかれらとともに在せば彼ら戰はん馬に騎れる者等すなはち媿を抱くべし
6 “ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.
我ユダの家を強くしヨセフの家を救はん我かれらを恤むが故に彼らをして歸り住しめん彼らは我に棄られし事なきが如くなるべし我は彼らの神ヱホバなり我かれらに聽べし
7 ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.
エフライム人は勇士に等しくして酒を飮たるごとく心に歡ばん其子等は見て喜びヱホバに因て心に樂しまん
8 ನಾನು ಅವರಿಗೆ ಸಿಳ್ಳುಹಾಕಿ, ಅವರನ್ನು ಕೂಡಿಸುವೆನು. ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ. ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು.
我かれらに向ひて嘯きて之を集めん其は我これを贖ひたればなり彼等は昔殖増たる如くに殖増ん
9 ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
我かれらを國々の民の中に捲ん彼等は遠き國において我をおぼへん彼らは其子等とともに生ながらへて歸り來るべし
10 ಈಜಿಪ್ಟ್ ದೇಶದೊಳಗಿಂದ ಸಹ ಅವರನ್ನು ತಿರುಗಿ ತರುವೆನು. ಅಸ್ಸೀರಿಯದೊಳಗಿಂದ ಅವರನ್ನು ಕೂಡಿಸುವೆನು. ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು. ಅವರಿಗೆ ಸ್ಥಳ ಸಾಲದೆ ಇರುವುದು.
我かれらをエジプトの國より携へかへりアッスリヤより彼等を集めギレアデの地およびレバノンに彼らを携へゆかんその居處も無きほどなるべし
11 ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು.
彼艱難の海を通り海の浪を撃破りたまふナイルの淵は盡く涸るアッスリヤの傲慢は卑くせられエジプトの杖は移り去ん
12 ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.
我彼らをしてヱホバに由て強くならしめん彼等はヱホバの名をもて歩まんヱホバこれを言たまふ