< ಜೆಕರ್ಯನು 11 >

1 ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.
פְּתַ֥ח לְבָנֹ֖ון דְּלָתֶ֑יךָ וְתֹאכַ֥ל אֵ֖שׁ בַּאֲרָזֶֽיךָ׃
2 ತುರಾಯಿ ಗಿಡವೇ, ಗೋಳಾಡು. ಏಕೆಂದರೆ ದೇವದಾರು ಬಿದ್ದುಹೋಯಿತು. ಭವ್ಯವಾದ ಮರಗಳು ಹಾಳಾದವು. ಬಾಷಾನಿನ ಅಲ್ಲೋನ್ ಮರಗಳೇ, ಗೋಳಾಡಿರಿ. ದಟ್ಟವಾದ ಅಡವಿಯು ಕಡಿಯಲಾಗಿದೆ.
הֵילֵ֤ל בְּרֹושׁ֙ כִּֽי־נָ֣פַל אֶ֔רֶז אֲשֶׁ֥ר אַדִּרִ֖ים שֻׁדָּ֑דוּ הֵילִ֙ילוּ֙ אַלֹּונֵ֣י בָשָׁ֔ן כִּ֥י יָרַ֖ד יַ֥עַר הַבָּצוּר (הַבָּצִֽיר)׃
3 ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ.
קֹ֚ול יִֽלְלַ֣ת הָרֹעִ֔ים כִּ֥י שֻׁדְּדָ֖ה אַדַּרְתָּ֑ם קֹ֚ול שַׁאֲגַ֣ת כְּפִירִ֔ים כִּ֥י שֻׁדַּ֖ד גְּאֹ֥ון הַיַּרְדֵּֽן׃ ס
4 ನನ್ನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು ಮೇಯಿಸು.
כֹּ֥ה אָמַ֖ר יְהוָ֣ה אֱלֹהָ֑י רְעֵ֖ה אֶת־צֹ֥אן הַהֲרֵגָֽה׃
5 ಅವುಗಳನ್ನು ಕೊಂಡುಕೊಳ್ಳುವವರು, ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ. ಅವುಗಳನ್ನು ಮಾರುವವರು, ‘ನಾನು ಐಶ್ವರ್ಯವಂತನಾದೆನು, ಯೆಹೋವ ದೇವರಿಗೆ ಸ್ತೋತ್ರ,’ ಎಂದೆನ್ನುತ್ತಾರೆ. ಅವರ ಸ್ವಂತ ಕುರುಬರೂ ಅವುಗಳನ್ನು ಕನಿಕರಿಸುವುದಿಲ್ಲ.
אֲשֶׁ֨ר קֹנֵיהֶ֤ן יַֽהֲרְגֻן֙ וְלֹ֣א יֶאְשָׁ֔מוּ וּמֹכְרֵיהֶ֣ן יֹאמַ֔ר בָּר֥וּךְ יְהוָ֖ה וַאעְשִׁ֑ר וְרֹ֣עֵיהֶ֔ם לֹ֥א יַחְמֹ֖ול עֲלֵיהֶֽן׃
6 ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”
כִּ֠י לֹ֣א אֶחְמֹ֥ול עֹ֛וד עַל־יֹשְׁבֵ֥י הָאָ֖רֶץ נְאֻם־יְהוָ֑ה וְהִנֵּ֨ה אָנֹכִ֜י מַמְצִ֣יא אֶת־הָאָדָ֗ם אִ֤ישׁ בְּיַד־רֵעֵ֙הוּ֙ וּבְיַ֣ד מַלְכֹּ֔ו וְכִתְּתוּ֙ אֶת־הָאָ֔רֶץ וְלֹ֥א אַצִּ֖יל מִיָּדָֽם׃
7 ಆಗ ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು, ವಿಶೇಷವಾಗಿ ಬಡವಾದ ಮಂದೆಯನ್ನು ಮೇಯಿಸಿದೆನು. ನಾನು ಎರಡು ಕೋಲುಗಳನ್ನು ತೆಗೆದುಕೊಂಡೆನು. ಒಂದಕ್ಕೆ “ಕೃಪೆ” ಎಂದೂ ಮತ್ತೊಂದಕ್ಕೆ “ಐಕ್ಯ” ಎಂದು ಹೆಸರಿಟ್ಟೆನು. ಹೀಗೆ ಮಂದೆಯನ್ನು ಮೇಯಿಸಿದೆನು.
וָֽאֶרְעֶה֙ אֶת־צֹ֣אן הַֽהֲרֵגָ֔ה לָכֵ֖ן עֲנִיֵּ֣י הַצֹּ֑אן וָאֶקַּֽח־לִ֞י שְׁנֵ֣י מַקְלֹ֗ות לְאַחַ֞ד קָרָ֤אתִי נֹ֙עַם֙ וּלְאַחַד֙ קָרָ֣אתִי חֹֽבְלִ֔ים וָאֶרְעֶ֖ה אֶת־הַצֹּֽאן׃
8 ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.
וָאַכְחִ֛ד אֶת־שְׁלֹ֥שֶׁת הָרֹעִ֖ים בְּיֶ֣רַח אֶחָ֑ד וַתִּקְצַ֤ר נַפְשִׁי֙ בָּהֶ֔ם וְגַם־נַפְשָׁ֖ם בָּחֲלָ֥ה בִֽי׃
9 ಆಗ ನಾನು, “ನಾನು ನಿಮ್ಮನ್ನು ಮೇಯಿಸುವುದಿಲ್ಲ, ಸಾಯುವಂಥದ್ದು ಸಾಯಲಿ, ಕೆಡುವಂಥದ್ದು ಕೆಡಲಿ, ಮಿಕ್ಕಾದವುಗಳು ಒಂದರ ಮಾಂಸವನ್ನು ಒಂದು ತಿನ್ನಲಿ,” ಎಂದು ಹೇಳಿದೆನು.
וָאֹמַ֕ר לֹ֥א אֶרְעֶ֖ה אֶתְכֶ֑ם הַמֵּתָ֣ה תָמ֗וּת וְהַנִּכְחֶ֙דֶת֙ תִּכָּחֵ֔ד וְהַ֨נִּשְׁאָרֹ֔ות תֹּאכַ֕לְנָה אִשָּׁ֖ה אֶת־בְּשַׂ֥ר רְעוּתָֽהּ׃
10 ಆಗ “ಕೃಪೆ” ಎಂಬ ನನ್ನ ಕೋಲನ್ನು ತೆಗೆದುಕೊಂಡು ಅದನ್ನು ಮುರಿದುಬಿಟ್ಟೆನು. ಹೀಗೆ ಎಲ್ಲಾ ಜನಾಂಗಗಳ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ರದ್ದುಗೊಳಿಸಿದೆನು.
וָאֶקַּ֤ח אֶת־מַקְלִי֙ אֶת־נֹ֔עַם וָאֶגְדַּ֖ע אֹתֹ֑ו לְהָפֵיר֙ אֶת־בְּרִיתִ֔י אֲשֶׁ֥ר כָּרַ֖תִּי אֶת־כָּל־הָעַמִּֽים׃
11 ಅದೇ ದಿವಸದಲ್ಲಿ ಅದು ರದ್ದುಗೊಂಡಿತು. ಆಗ ನನ್ನನ್ನು ನೋಡಿಕೊಳ್ಳುತ್ತಿದ್ದ ಬಡ ಕುರಿ ಮಂದೆಯು, ಅದು ಯೆಹೋವ ದೇವರ ವಾಕ್ಯವೆಂದು ತಿಳಿದುಕೊಂಡಿತು.
וַתֻּפַ֖ר בַּיֹּ֣ום הַה֑וּא וַיֵּדְע֨וּ כֵ֜ן עֲנִיֵּ֤י הַצֹּאן֙ הַשֹּׁמְרִ֣ים אֹתִ֔י כִּ֥י דְבַר־יְהוָ֖ה הֽוּא׃
12 ನಾನು ಅವರಿಗೆ, “ಇದು ನಿಮ್ಮ ಕಣ್ಣುಗಳಲ್ಲಿ ಒಳ್ಳೆಯದಾಗಿ ತೋರಿದರೆ, ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ,” ಎಂದೆನು. ಆಗ ಅವರು ನನಗೆ ಸಂಬಳವಾಗಿ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.
וָאֹמַ֣ר אֲלֵיהֶ֗ם אִם־טֹ֧וב בְּעֵינֵיכֶ֛ם הָב֥וּ שְׂכָרִ֖י וְאִם־לֹ֣א ׀ חֲדָ֑לוּ וַיִּשְׁקְל֥וּ אֶת־שְׂכָרִ֖י שְׁלֹשִׁ֥ים כָּֽסֶף׃
13 ಆಗ ಯೆಹೋವ ದೇವರು ನನಗೆ, “ಅದನ್ನು ಕುಂಬಾರನಿಗೆ ಎಸೆ. ಅವರು ನನಗೆ ಕಟ್ಟಿದ ಬೆಲೆ ಸರಿಯಾಗಿದೆ,” ಎಂದನು. ಆಗ ನಾನು, ಆ ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಯೆಹೋವ ದೇವರ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಎಸೆದೆನು.
וַיֹּ֨אמֶר יְהוָ֜ה אֵלַ֗י הַשְׁלִיכֵ֙הוּ֙ אֶל־הַיֹּוצֵ֔ר אֶ֣דֶר הַיְקָ֔ר אֲשֶׁ֥ר יָקַ֖רְתִּי מֵֽעֲלֵיהֶ֑ם וָֽאֶקְחָה֙ שְׁלֹשִׁ֣ים הַכֶּ֔סֶף וָאַשְׁלִ֥יךְ אֹתֹ֛ו בֵּ֥ית יְהוָ֖ה אֶל־הַיֹּוצֵֽר׃
14 ಆಗ ನನ್ನ ಎರಡನೆಯ ಕೋಲಾದ “ಐಕ್ಯ” ಎಂಬುದನ್ನು ಮುರಿದುಬಿಟ್ಟೆನು. ಹೀಗೆ ಯೆಹೂದಕ್ಕೂ, ಇಸ್ರಾಯೇಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
וָֽאֶגְדַּע֙ אֶת־מַקְלִ֣י הַשֵּׁנִ֔י אֵ֖ת הַחֹֽבְלִ֑ים לְהָפֵר֙ אֶת־הָֽאַחֲוָ֔ה בֵּ֥ין יְהוּדָ֖ה וּבֵ֥ין יִשְׂרָאֵֽל׃ ס
15 ಯೆಹೋವ ದೇವರು ನನಗೆ, “ಇನ್ನು ಬುದ್ಧಿಹೀನವಾದ ಕುರುಬನ ಆಯುಧಗಳನ್ನು ತೆಗೆದುಕೋ.
וַיֹּ֥אמֶר יְהוָ֖ה אֵלָ֑י עֹ֣וד קַח־לְךָ֔ כְּלִ֖י רֹעֶ֥ה אֱוִלִֽי׃
16 ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.
כִּ֣י הִנֵּֽה־אָנֹכִי֩ מֵקִ֨ים רֹעֶ֜ה בָּאָ֗רֶץ הַנִּכְחָדֹ֤ות לֹֽא־יִפְקֹד֙ הַנַּ֣עַר לֹֽא־יְבַקֵּ֔שׁ וְהַנִּשְׁבֶּ֖רֶת לֹ֣א יְרַפֵּ֑א הַנִּצָּבָה֙ לֹ֣א יְכַלְכֵּ֔ל וּבְשַׂ֤ר הַבְּרִיאָה֙ יֹאכַ֔ל וּפַרְסֵיהֶ֖ן יְפָרֵֽק׃ ס
17 “ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಕಷ್ಟ! ಖಡ್ಗವು ಅವನ ತೋಳಿನ ಮೇಲೆಯೂ, ಅವನ ಬಲಗಣ್ಣಿನ ಮೇಲೆಯೂ ಇರುವುದು. ಅವನ ತೋಳು ಪೂರ್ತಿಯಾಗಿ ಒಣಗುವುದು. ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವುದು.”
הֹ֣וי רֹעִ֤י הֽ͏ָאֱלִיל֙ עֹזְבִ֣י הַצֹּ֔אן חֶ֥רֶב עַל־זְרֹועֹ֖ו וְעַל־עֵ֣ין יְמִינֹ֑ו זְרֹעֹו֙ יָבֹ֣ושׁ תִּיבָ֔שׁ וְעֵ֥ין יְמִינֹ֖ו כָּהֹ֥ה תִכְהֶֽה׃ ס

< ಜೆಕರ್ಯನು 11 >