< ಜೆಕರ್ಯನು 12 >

1 ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,
وَحْيُ كَلَامِ ٱلرَّبِّ عَلَى إِسْرَائِيلَ. يَقُولُ ٱلرَّبُّ بَاسِطُ ٱلسَّمَاوَاتِ وَمُؤَسِّسُ ٱلْأَرْضِ وَجَابِلُ رُوحِ ٱلْإِنْسَانِ فِي دَاخِلِهِ:١
2 “ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ಅಮಲೇರಿಸಿ ಓಲಾಡಿಸುವ ಪಾತ್ರೆಯಾಗಿ ಮಾಡುತ್ತೇನೆ. ಯೆರೂಸಲೇಮಿಗೂ, ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವಾಗ
«هَأَنَذَا أَجْعَلُ أُورُشَلِيمَ كَأْسَ تَرَنُّحٍ لِجَمِيعِ ٱلشُّعُوبِ حَوْلَهَا، وَأَيْضًا عَلَى يَهُوذَا تَكُونُ فِي حِصَارِ أُورُشَلِيمَ.٢
3 ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.
وَيَكُونُ فِي ذَلِكَ ٱلْيَوْمِ أَنِّي أَجْعَلُ أُورُشَلِيمَ حَجَرًا مِشْوَالًا لِجَمِيعِ ٱلشُّعُوبِ، وَكُلُّ ٱلَّذِينَ يَشِيلُونَهُ يَنْشَقُّونَ شَقًّا. وَيَجْتَمِعُ عَلَيْهَا كُلُّ أُمَمِ ٱلْأَرْضِ.٣
4 ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು.
فِي ذَلِكَ ٱلْيَوْمِ، يَقُولُ ٱلرَّبُّ، أَضْرِبُ كُلَّ فَرَسٍ بِٱلْحَيْرَةِ وَرَاكِبَهُ بِٱلْجُنُونِ. وَأَفْتَحُ عَيْنَيَّ عَلَى بَيْتِ يَهُوذَا، وَأَضْرِبُ كُلَّ خَيْلِ ٱلشُّعُوبِ بِٱلْعَمَى.٤
5 ಆ ಯೆಹೂದದ ದೊರೆಗಳು ತಮ್ಮ ಹೃದಯದಲ್ಲಿ ಯೆರೂಸಲೇಮಿನ ನಿವಾಸಿಗಳ ಶಕ್ತಿ ಸಾಮರ್ಥ್ಯ, ತಮ್ಮ ಸೇನಾಧೀಶ್ವರ ಯೆಹೋವ ದೇವರಲ್ಲಿಯೇ ಎಂದುಕೊಳ್ಳುವರು.
فَتَقُولُ أُمَرَاءُ يَهُوذَا فِي قَلْبِهِمْ: إِنَّ سُكَّانَ أُورُشَلِيمَ قُوَّةٌ لِي بِرَبِّ ٱلْجُنُودِ إِلَهِهِمْ.٥
6 “ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು.
فِي ذَلِكَ ٱلْيَوْمِ أَجْعَلُ أُمَرَاءَ يَهُوذَا كَمِصْبَاحِ نَارٍ بَيْنَ ٱلْحَطَبِ، وَكَمِشْعَلِ نَارٍ بَيْنَ ٱلْحُزَمِ. فَيَأْكُلُونَ كُلَّ ٱلشُّعُوبِ حَوْلَهُمْ عَنِ ٱلْيَمِينِ وَعَنِ ٱلْيَسَارِ، فَتَثْبُتُ أُورُشَلِيمُ أَيْضًا فِي مَكَانِهَا بِأُورُشَلِيمَ.٦
7 “ಇದಲ್ಲದೆ ದಾವೀದನ ಮನೆಯ ಘನತೆಯೂ, ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ, ಯೆಹೋವ ದೇವರು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವರು.
وَيُخَلِّصُ ٱلرَّبُّ خِيَامَ يَهُوذَا أَوَّلًا لِكَيْلَا يَتَعَاظَمَ ٱفْتِخَارُ بَيْتِ دَاوُدَ وَٱفْتِخَارُ سُكَّانِ أُورُشَلِيمَ عَلَى يَهُوذَا.٧
8 ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.
فِي ذَلِكَ ٱلْيَوْمِ يَسْتُرُ ٱلرَّبُّ سُكَّانَ أُورُشَلِيمَ، فَيَكُونُ ٱلْعَاثِرُ مِنْهُمْ فِي ذَلِكَ ٱلْيَوْمِ مِثْلَ دَاوُدَ، وَبَيْتُ دَاوُدَ مِثْلَ ٱللهِ، مِثْلَ مَلَاكِ ٱلرَّبِّ أَمَامَهُمْ.٨
9 ಆ ದಿವಸದಲ್ಲಿ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶಮಾಡುವುದಕ್ಕೆ ನಾನು ಹುಡುಕುವೆನು.
وَيَكُونُ فِي ذَلِكَ ٱلْيَوْمِ أَنِّي أَلْتَمِسُ هَلَاكَ كُلِّ ٱلْأُمَمِ ٱلْآتِينَ عَلَى أُورُشَلِيمَ.٩
10 “ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.
«وَأُفِيضُ عَلَى بَيْتِ دَاوُدَ وَعَلَى سُكَّانِ أُورُشَلِيمَ رُوحَ ٱلنِّعْمَةِ وَٱلتَّضَرُّعَاتِ، فَيَنْظُرُونَ إِلَيَّ، ٱلَّذِي طَعَنُوهُ، وَيَنُوحُونَ عَلَيْهِ كَنَائِحٍ عَلَى وَحِيدٍ لَهُ، وَيَكُونُونَ فِي مَرَارَةٍ عَلَيْهِ كَمَنْ هُوَ فِي مَرَارَةٍ عَلَى بِكْرِهِ.١٠
11 ಆ ದಿವಸದಲ್ಲಿ ಯೆರೂಸಲೇಮಿನಲ್ಲಿ ದೊಡ್ಡ ಗೋಳಾಟವಿರುವುದು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೋನಿನ ಗೋಳಾಟದ ಹಾಗೆಯೇ.
فِي ذَلِكَ ٱلْيَوْمِ يَعْظُمُ ٱلنَّوْحُ فِي أُورُشَلِيمَ كَنَوْحِ هَدَدْرِمُّونَ فِي بُقْعَةِ مَجِدُّونَ.١١
12 ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವುದು. ದಾವೀದನ ಮನೆಯ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ;
وَتَنُوحُ ٱلْأَرْضُ عَشَائِرَ عَشَائِرَ عَلَى حِدَتِهَا: عَشِيرَةُ بَيْتِ دَاوُدَ عَلَى حِدَتِهَا، وَنِسَاؤُهُمْ عَلَى حِدَتِهِنَّ. عَشِيرَةُ بَيْتِ نَاثَانَ عَلَى حِدَتِهَا، وَنِسَاؤُهُمْ عَلَى حِدَتِهِنَّ.١٢
13 ಲೇವಿಯರ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮೀಯನ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.
عَشِيرَةُ بَيْتِ لَاوِي عَلَى حِدَتِهَا، وَنِسَاؤُهُمْ عَلَى حِدَتِهِنَّ. عَشِيرَةُ شَمْعِي عَلَى حِدَتِهَا، وَنِسَاؤُهُمْ عَلَى حِدَتِهِنَّ.١٣
14 ಮತ್ತು ಉಳಿದ ಕುಲಗಳೆಲ್ಲಾ ಪ್ರತ್ಯೇಕವಾಗಿಯೂ, ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.”
كُلُّ ٱلْعَشَائِرِ ٱلْبَاقِيَةِ عَشِيرَةٌ عَشِيرَةٌ عَلَى حِدَتِهَا، وَنِسَاؤُهُمْ عَلَى حِدَتِهِنَّ.١٤

< ಜೆಕರ್ಯನು 12 >