< ಜೆಕರ್ಯನು 13 >

1 “ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.
בַּיּוֹם הַהוּא יִֽהְיֶה מָקוֹר נִפְתָּח לְבֵית דָּוִיד וּלְיֹשְׁבֵי יְרֽוּשָׁלָ͏ִם לְחַטַּאת וּלְנִדָּֽה׃
2 “ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.
וְהָיָה בַיּוֹם הַהוּא נְאֻם ׀ יְהוָה צְבָאוֹת אַכְרִית אֶת־שְׁמוֹת הָֽעֲצַבִּים מִן־הָאָרֶץ וְלֹא יִזָּכְרוּ עוֹד וְגַם אֶת־הַנְּבִיאִים וְאֶת־רוּחַ הַטֻּמְאָה אַעֲבִיר מִן־הָאָֽרֶץ׃
3 ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.
וְהָיָה כִּֽי־יִנָּבֵא אִישׁ עוֹד וְאָמְרוּ אֵלָיו אָבִיו וְאִמּוֹ יֹֽלְדָיו לֹא תִֽחְיֶה כִּי שֶׁקֶר דִּבַּרְתָּ בְּשֵׁם יְהוָה וּדְקָרֻהוּ אָבִיהוּ וְאִמּוֹ יֹלְדָיו בְּהִנָּבְאֽוֹ׃
4 “ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ.
וְהָיָה ׀ בַּיּוֹם הַהוּא יֵבֹשׁוּ הַנְּבִיאִים אִישׁ מֵחֶזְיֹנוֹ בְּהִנָּֽבְאֹתוֹ וְלֹא יִלְבְּשׁוּ אַדֶּרֶת שֵׂעָר לְמַעַן כַּחֵֽשׁ׃
5 ಆದರೆ ಅವನು, ‘ನಾನು ಪ್ರವಾದಿಯಲ್ಲ, ನಾನು ಹೊಲದಲ್ಲಿ ವ್ಯವಸಾಯ ಮಾಡುವವನು, ಚಿಕ್ಕಂದಿನಿಂದ ನಾನು ಗುಲಾಮನಾಗಿದ್ದೇನೆ,’ ಎಂದು ಹೇಳುವನು.
וְאָמַר לֹא נָבִיא אָנֹכִי אִישׁ־עֹבֵד אֲדָמָה אָנֹכִי כִּי אָדָם הִקְנַנִי מִנְּעוּרָֽי׃
6 ಆಗ ಒಬ್ಬನು ಅವನಿಗೆ, ‘ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ, ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ,’ ಅನ್ನುವನು.
וְאָמַר אֵלָיו מָה הַמַּכּוֹת הָאֵלֶּה בֵּין יָדֶיךָ וְאָמַר אֲשֶׁר הֻכֵּיתִי בֵּית מְאַהֲבָֽי׃
7 “ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
חֶרֶב עוּרִי עַל־רֹעִי וְעַל־גֶּבֶר עֲמִיתִי נְאֻם יְהוָה צְבָאוֹת הַךְ אֶת־הָֽרֹעֶה וּתְפוּצֶיןָ הַצֹּאן וַהֲשִׁבֹתִי יָדִי עַל־הַצֹּעֲרִֽים׃
8 ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.
וְהָיָה בְכָל־הָאָרֶץ נְאֻם־יְהוָה פִּֽי־שְׁנַיִם בָּהּ יִכָּרְתוּ יִגְוָעוּ וְהַשְּׁלִשִׁית יִוָּתֶר בָּֽהּ׃
9 ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.
וְהֵבֵאתִי אֶת־הַשְּׁלִשִׁית בָּאֵשׁ וּצְרַפְתִּים כִּצְרֹף אֶת־הַכֶּסֶף וּבְחַנְתִּים כִּבְחֹן אֶת־הַזָּהָב הוּא ׀ יִקְרָא בִשְׁמִי וַֽאֲנִי אֶעֱנֶה אֹתוֹ אָמַרְתִּי עַמִּי הוּא וְהוּא יֹאמַר יְהוָה אֱלֹהָֽי׃

< ಜೆಕರ್ಯನು 13 >