< ಜೆಕರ್ಯನು 14 >

1 ಯೆಹೋವ ದೇವರ ದಿನವು ಬರುತ್ತದೆ. ಓ ಯೆರೂಸಲೇಮೇ, ಆ ದಿನದಲ್ಲಿ ನಿನ್ನ ಐಶ್ವರ್ಯವು ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ನಿನ್ನ ಗೋಡೆಗಳ ಮಧ್ಯದಲ್ಲಿ ಹಂಚಿಹೋಗುವುದು.
הִנֵּה יֽוֹם־בָּא לַֽיהוָה וְחֻלַּק שְׁלָלֵךְ בְּקִרְבֵּֽךְ׃
2 ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.
וְאָסַפְתִּי אֶת־כָּל־הַגּוֹיִם ׀ אֶֽל־יְרוּשָׁלִַם לַמִּלְחָמָה וְנִלְכְּדָה הָעִיר וְנָשַׁסּוּ הַבָּתִּים וְהַנָּשִׁים תשגלנה תִּשָּׁכַבְנָה וְיָצָא חֲצִי הָעִיר בַּגּוֹלָה וְיֶתֶר הָעָם לֹא יִכָּרֵת מִן־הָעִֽיר׃
3 ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.
וְיָצָא יְהוָה וְנִלְחַם בַּגּוֹיִם הָהֵם כְּיוֹם הִֽלָּחֲמו בְּיוֹם קְרָֽב׃
4 ಆ ದಿವಸದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವದಿಕ್ಕಿನಲ್ಲಿರುವ ಓಲಿವ್ ಮರಗಳ ಗುಡ್ಡದ ಮೇಲೆ ನಿಲ್ಲುವುವು. ಆ ಗುಡ್ಡವು, ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವುದು. ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದುಕೊಳ್ಳುವುದು.
וְעָמְדוּ רַגְלָיו בַּיּוֹם־הַהוּא עַל־הַר הַזֵּתִים אֲשֶׁר עַל־פְּנֵי יְרוּשָׁלִַם מִקֶּדֶם וְנִבְקַע הַר הַזֵּיתִים מֵֽחֶצְיוֹ מִזְרָחָה וָיָמָּה גֵּיא גְּדוֹלָה מְאֹד וּמָשׁ חֲצִי הָהָר צָפוֹנָה וְחֶצְיוֹ־נֶֽגְבָּה׃
5 ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.
וְנַסְתֶּם גֵּֽיא־הָרַי כִּֽי־יַגִּיעַ גֵּי־הָרִים אֶל־אָצַל וְנַסְתֶּם כַּאֲשֶׁר נַסְתֶּם מִפְּנֵי הָרַעַשׁ בִּימֵי עֻזִּיָּה מֶֽלֶךְ־יְהוּדָה וּבָא יְהוָה אֱלֹהַי כָּל־קְדֹשִׁים עִמָּֽךְ׃
6 ಆ ದಿವಸದಲ್ಲಿ, ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.
וְהָיָה בַּיּוֹם הַהוּא לֹֽא־יִהְיֶה אוֹר יְקָרוֹת יקפאון וְקִפָּאֽוֹן׃
7 ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.
וְהָיָה יוֹם־אֶחָד הוּא יִוָּדַע לַֽיהוָה לֹא־יוֹם וְלֹא־לָיְלָה וְהָיָה לְעֵֽת־עֶרֶב יִֽהְיֶה־אֽוֹר׃
8 ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.
וְהָיָה ׀ בַּיּוֹם הַהוּא יֵצְאוּ מַֽיִם־חַיִּים מִירוּשָׁלִַם חֶצְיָם אֶל־הַיָּם הַקַּדְמוֹנִי וְחֶצְיָם אֶל־הַיָּם הָאַחֲרוֹן בַּקַּיִץ וּבָחֹרֶף יִֽהְיֶֽה׃
9 ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.
וְהָיָה יְהוָה לְמֶלֶךְ עַל־כָּל־הָאָרֶץ בַּיּוֹם הַהוּא יִהְיֶה יְהוָה אֶחָד וּשְׁמוֹ אֶחָֽד׃
10 ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.
יִסּוֹב כָּל־הָאָרֶץ כָּעֲרָבָה מִגֶּבַע לְרִמּוֹן נֶגֶב יְרֽוּשָׁלָ͏ִם וְֽרָאֲמָה וְיָשְׁבָה תַחְתֶּיהָ לְמִשַּׁעַר בִּנְיָמִן עַד־מְקוֹם שַׁעַר הָֽרִאשׁוֹן עַד־שַׁעַר הַפִּנִּים וּמִגְדַּל חֲנַנְאֵל עַד יִקְבֵי הַמֶּֽלֶךְ׃
11 ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು.
וְיָשְׁבוּ בָהּ וְחֵרֶם לֹא יִֽהְיֶה־עוֹד וְיָשְׁבָה יְרוּשָׁלַ͏ִם לָבֶֽטַח׃
12 ಯೆರೂಸಲೇಮಿಗೆ ವಿರೋಧವಾಗಿ ದಂಡು ಕಟ್ಟಿಕೊಂಡಿರುವ ಎಲ್ಲಾ ಜನರನ್ನು ಯೆಹೋವ ದೇವರು ವ್ಯಾಧಿಯಿಂದ ಬಾಧಿಸುವರು. ಹೀಗೆಯೇ, ಅವರು ನಿಂತಿರುವಾಗ, ಅವರ ಮಾಂಸವು ಕ್ಷಯಿಸಿ ಹೋಗುವುವು. ಅವರ ಕಣ್ಣುಗಳು ಕುಣಿಗಳಲ್ಲಿ ಇಂಗಿ ಹೋಗುವುವು. ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವುದು.
וְזֹאת ׀ תִּֽהְיֶה הַמַּגֵּפָה אֲשֶׁר יִגֹּף יְהוָה אֶת־כָּל־הָעַמִּים אֲשֶׁר צָבְאוּ עַל־יְרוּשָׁלָ͏ִם הָמֵק ׀ בְּשָׂרוֹ וְהוּא עֹמֵד עַל־רַגְלָיו וְעֵינָיו תִּמַּקְנָה בְחֹֽרֵיהֶן וּלְשׁוֹנוֹ תִּמַּק בְּפִיהֶֽם׃
13 ಆ ದಿವಸದಲ್ಲಿ, ಯೆಹೋವ ದೇವರಿಂದಾದ ದೊಡ್ಡ ಕೋಲಾಹಲದಿಂದ ಜನರು ಭಯಭೀತಿಗೆ ಒಳಗಾಗುವರು. ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಒಬ್ಬರ ಮೇಲೊಬ್ಬರು ಕೈಯೆತ್ತುವರು.
וְהָיָה בַּיּוֹם הַהוּא תִּֽהְיֶה מְהֽוּמַת־יְהוָה רַבָּה בָּהֶם וְהֶחֱזִיקוּ אִישׁ יַד רֵעֵהוּ וְעָלְתָה יָדוֹ עַל־יַד רֵעֵֽהוּ׃
14 ಯೆಹೂದವೂ ಸಹ ಯೆರೂಸಲೇಮಿನಲ್ಲಿ ಯುದ್ಧಮಾಡುವುದು. ಸುತ್ತಲಿರುವ ಎಲ್ಲಾ ಜನಾಂಗಗಳ ಸಂಪತ್ತು, ಚಿನ್ನ, ಬೆಳ್ಳಿ ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲಾಗುವುದು.
וְגַם־יְהוּדָה תִּלָּחֵם בִּירֽוּשָׁלָ͏ִם וְאֻסַּף חֵיל כָּל־הַגּוֹיִם סָבִיב זָהָב וָכֶסֶף וּבְגָדִים לָרֹב מְאֹֽד׃
15 ಆ ಗುಡಾರಗಳಲ್ಲಿರುವ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳಿಗೆ ಈ ವ್ಯಾಧಿಯೇ ತಗಲುವದು.
וְכֵן תִּֽהְיֶה מַגֵּפַת הַסּוּס הַפֶּרֶד הַגָּמָל וְהַחֲמוֹר וְכָל־הַבְּהֵמָה אֲשֶׁר יִהְיֶה בַּמַּחֲנוֹת הָהֵמָּה כַּמַּגֵּפָה הַזֹּֽאת׃
16 ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.
וְהָיָה כָּל־הַנּוֹתָר מִכָּל־הַגּוֹיִם הַבָּאִים עַל־יְרֽוּשָׁלָ͏ִם וְעָלוּ מִדֵּי שָׁנָה בְשָׁנָה לְהִֽשְׁתַּחֲוֺת לְמֶלֶךְ יְהוָה צְבָאוֹת וְלָחֹג אֶת־חַג הַסֻּכּֽוֹת׃
17 ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.
וְהָיָה אֲשֶׁר לֹֽא־יַעֲלֶה מֵאֵת מִשְׁפְּחוֹת הָאָרֶץ אֶל־יְרוּשָׁלִַם לְהִֽשְׁתַּחֲוֺת לְמֶלֶךְ יְהוָה צְבָאוֹת וְלֹא עֲלֵיהֶם יִהְיֶה הַגָּֽשֶׁם׃
18 ಈಜಿಪ್ಟಿನವರು ಹೋಗದಿದ್ದರೆ ಮತ್ತು ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಅವರಿಗೂ ಮಳೆ ಬರುವುದಿಲ್ಲ. ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಇತರ ಜನಾಂಗಗಳಿಗೆ ಯೆಹೋವ ದೇವರು ಬಾಧಿಸುವ ವ್ಯಾಧಿಯು ಅವರ ಮೇಲೆ ತಗಲುವುದು.
וְאִם־מִשְׁפַּחַת מִצְרַיִם לֹֽא־תַעֲלֶה וְלֹא בָאָה וְלֹא עֲלֵיהֶם תִּֽהְיֶה הַמַּגֵּפָה אֲשֶׁר יִגֹּף יְהוָה אֶת־הַגּוֹיִם אֲשֶׁר לֹא יַֽעֲלוּ לָחֹג אֶת־חַג הַסֻּכּֽוֹת׃
19 ಇದೇ ಈಜಿಪ್ಟಿನ ದಂಡನೆಯೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವುದು.
זֹאת תִּהְיֶה חַטַּאת מִצְרָיִם וְחַטַּאת כָּל־הַגּוֹיִם אֲשֶׁר לֹא יַֽעֲלוּ לָחֹג אֶת־חַג הַסֻּכּֽוֹת׃
20 ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.
בַּיּוֹם הַהוּא יִֽהְיֶה עַל־מְצִלּוֹת הַסּוּס קֹדֶשׁ לַֽיהוָה וְהָיָה הַסִּירוֹת בְּבֵית יְהוָה כַּמִּזְרָקִים לִפְנֵי הַמִּזְבֵּֽחַ׃
21 ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.
וְהָיָה כָּל־סִיר בִּירוּשָׁלִַם וּבִֽיהוּדָה קֹדֶשׁ לַיהוָה צְבָאוֹת וּבָאוּ כָּל־הַזֹּבְחִים וְלָקְחוּ מֵהֶם וּבִשְּׁלוּ בָהֶם וְלֹא־יִהְיֶה כְנַעֲנִי עוֹד בְּבֵית־יְהוָה צְבָאוֹת בַּיּוֹם הַהֽוּא׃ 211 14 4 4

< ಜೆಕರ್ಯನು 14 >