< ಜೆಕರ್ಯನು 14 >

1 ಯೆಹೋವ ದೇವರ ದಿನವು ಬರುತ್ತದೆ. ಓ ಯೆರೂಸಲೇಮೇ, ಆ ದಿನದಲ್ಲಿ ನಿನ್ನ ಐಶ್ವರ್ಯವು ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ನಿನ್ನ ಗೋಡೆಗಳ ಮಧ್ಯದಲ್ಲಿ ಹಂಚಿಹೋಗುವುದು.
ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.
2 ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.
ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.
3 ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.
ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.
4 ಆ ದಿವಸದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವದಿಕ್ಕಿನಲ್ಲಿರುವ ಓಲಿವ್ ಮರಗಳ ಗುಡ್ಡದ ಮೇಲೆ ನಿಲ್ಲುವುವು. ಆ ಗುಡ್ಡವು, ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವುದು. ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದುಕೊಳ್ಳುವುದು.
ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.
5 ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.
ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
6 ಆ ದಿವಸದಲ್ಲಿ, ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.
ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,
7 ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.
ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.
8 ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.
ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.
9 ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.
ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.
10 ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.
೧೦ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.
11 ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು.
೧೧ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.
12 ಯೆರೂಸಲೇಮಿಗೆ ವಿರೋಧವಾಗಿ ದಂಡು ಕಟ್ಟಿಕೊಂಡಿರುವ ಎಲ್ಲಾ ಜನರನ್ನು ಯೆಹೋವ ದೇವರು ವ್ಯಾಧಿಯಿಂದ ಬಾಧಿಸುವರು. ಹೀಗೆಯೇ, ಅವರು ನಿಂತಿರುವಾಗ, ಅವರ ಮಾಂಸವು ಕ್ಷಯಿಸಿ ಹೋಗುವುವು. ಅವರ ಕಣ್ಣುಗಳು ಕುಣಿಗಳಲ್ಲಿ ಇಂಗಿ ಹೋಗುವುವು. ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವುದು.
೧೨ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.
13 ಆ ದಿವಸದಲ್ಲಿ, ಯೆಹೋವ ದೇವರಿಂದಾದ ದೊಡ್ಡ ಕೋಲಾಹಲದಿಂದ ಜನರು ಭಯಭೀತಿಗೆ ಒಳಗಾಗುವರು. ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಒಬ್ಬರ ಮೇಲೊಬ್ಬರು ಕೈಯೆತ್ತುವರು.
೧೩ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.
14 ಯೆಹೂದವೂ ಸಹ ಯೆರೂಸಲೇಮಿನಲ್ಲಿ ಯುದ್ಧಮಾಡುವುದು. ಸುತ್ತಲಿರುವ ಎಲ್ಲಾ ಜನಾಂಗಗಳ ಸಂಪತ್ತು, ಚಿನ್ನ, ಬೆಳ್ಳಿ ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲಾಗುವುದು.
೧೪ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.
15 ಆ ಗುಡಾರಗಳಲ್ಲಿರುವ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳಿಗೆ ಈ ವ್ಯಾಧಿಯೇ ತಗಲುವದು.
೧೫ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು.
16 ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.
೧೬ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.
17 ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.
೧೭ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.
18 ಈಜಿಪ್ಟಿನವರು ಹೋಗದಿದ್ದರೆ ಮತ್ತು ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಅವರಿಗೂ ಮಳೆ ಬರುವುದಿಲ್ಲ. ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಇತರ ಜನಾಂಗಗಳಿಗೆ ಯೆಹೋವ ದೇವರು ಬಾಧಿಸುವ ವ್ಯಾಧಿಯು ಅವರ ಮೇಲೆ ತಗಲುವುದು.
೧೮ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.
19 ಇದೇ ಈಜಿಪ್ಟಿನ ದಂಡನೆಯೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವುದು.
೧೯ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.
20 ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.
೨೦ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
21 ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.
೨೧ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.

< ಜೆಕರ್ಯನು 14 >