< ಜೆಕರ್ಯನು 2 >

1 ಆಗ ನಾನು ಕಣ್ಣೆತ್ತಿ ನೋಡಲು, ತನ್ನ ಕೈಯಲ್ಲಿ ಅಳೆಯುವ ನೂಲು ಉಳ್ಳ ಒಬ್ಬ ಮನುಷ್ಯನನ್ನು ಕಂಡೆನು.
וָאֶשָּׂ֥א עֵינַ֛י וָאֵ֖רֶא וְהִנֵּה־אִ֑ישׁ וּבְיָדֹ֖ו חֶ֥בֶל מִדָּֽה׃
2 ಆಗ ನಾನು, “ನೀನು ಎಲ್ಲಿಗೆ ಹೋಗುತ್ತೀ?” ಎಂದೆನು. ಅದಕ್ಕೆ ಆತನು ನನಗೆ, “ಯೆರೂಸಲೇಮನ್ನು ಅಳತೆಮಾಡಿ, ಅದರ ಅಗಲವೆಷ್ಟು? ಅದರ ಉದ್ದವೆಷ್ಟು? ಎಂದು ನೋಡುವುದಕ್ಕೆ ಹೋಗುತ್ತೇನೆ,” ಎಂದನು.
וָאֹמַ֕ר אָ֖נָה אַתָּ֣ה הֹלֵ֑ךְ וַיֹּ֣אמֶר אֵלַ֗י לָמֹד֙ אֶת־יְר֣וּשָׁלַ֔͏ִם לִרְאֹ֥ות כַּמָּֽה־רָחְבָּ֖הּ וְכַמָּ֥ה אָרְכָּֽהּ׃
3 ನನ್ನ ಸಂಗಡ ಮಾತನಾಡಿದ ದೂತನು ಬರುತ್ತಿರಲು, ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು,
וְהִנֵּ֗ה הַמַּלְאָ֛ךְ הַדֹּבֵ֥ר בִּ֖י יֹצֵ֑א וּמַלְאָ֣ךְ אַחֵ֔ר יֹצֵ֖א לִקְרָאתֹֽו׃
4 “ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.
וַיֹּ֣אמֶר אֵלָ֔ו רֻ֗ץ דַּבֵּ֛ר אֶל־הַנַּ֥עַר הַלָּ֖ז לֵאמֹ֑ר פְּרָזֹות֙ תֵּשֵׁ֣ב יְרוּשָׁלַ֔͏ִם מֵרֹ֥ב אָדָ֛ם וּבְהֵמָ֖ה בְּתֹוכָֽהּ׃
5 ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.
וַאֲנִ֤י אֶֽהְיֶה־לָּהּ֙ נְאֻם־יְהוָ֔ה חֹ֥ומַת אֵ֖שׁ סָבִ֑יב וּלְכָבֹ֖וד אֶֽהְיֶ֥ה בְתֹוכָֽהּ׃ פ
6 “ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
הֹ֣וי הֹ֗וי וְנֻ֛סוּ מֵאֶ֥רֶץ צָפֹ֖ון נְאֻם־יְהוָ֑ה כִּ֠י כְּאַרְבַּ֞ע רוּחֹ֧ות הַשָּׁמַ֛יִם פֵּרַ֥שְׂתִּי אֶתְכֶ֖ם נְאֻם־יְהוָֽה׃
7 “ಚೀಯೋನೇ, ಬನ್ನಿರಿ, ಬಾಬಿಲೋನಿನ ಪುತ್ರಿಯ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.”
הֹ֥וי צִיֹּ֖ון הִמָּלְטִ֑י יֹושֶׁ֖בֶת בַּת־בָּבֶֽל׃ ס
8 ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
כִּ֣י כֹ֣ה אָמַר֮ יְהוָ֣ה צְבָאֹות֒ אַחַ֣ר כָּבֹ֔וד שְׁלָחַ֕נִי אֶל־הַגֹּויִ֖ם הַשֹּׁלְלִ֣ים אֶתְכֶ֑ם כִּ֚י הַנֹּגֵ֣עַ בָּכֶ֔ם נֹגֵ֖עַ בְּבָבַ֥ת עֵינֹֽו׃
9 ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.
כִּ֠י הִנְנִ֨י מֵנִ֤יף אֶת־יָדִי֙ עֲלֵיהֶ֔ם וְהָי֥וּ שָׁלָ֖ל לְעַבְדֵיהֶ֑ם וִֽידַעְתֶּ֕ם כִּֽי־יְהוָ֥ה צְבָאֹ֖ות שְׁלָחָֽנִי׃ ס
10 “ಚೀಯೋನ್ ಪುತ್ರಿಯೇ, ಹಾಡಿ ಹರ್ಷಿಸು. ಏಕೆಂದರೆ, ನಾನು ಬರುವೆನು ಮತ್ತು ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
רָנִּ֥י וְשִׂמְחִ֖י בַּת־צִיֹּ֑ון כִּ֧י הִנְנִי־בָ֛א וְשָׁכַנְתִּ֥י בְתֹוכֵ֖ךְ נְאֻם־יְהוָֽה׃
11 “ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.
וְנִלְווּ֩ גֹויִ֨ם רַבִּ֤ים אֶל־יְהוָה֙ בַּיֹּ֣ום הַה֔וּא וְהָ֥יוּ לִ֖י לְעָ֑ם וְשָׁכַנְתִּ֣י בְתֹוכֵ֔ךְ וְיָדַ֕עַתְּ כִּי־יְהוָ֥ה צְבָאֹ֖ות שְׁלָחַ֥נִי אֵלָֽיִךְ׃
12 ಇದಲ್ಲದೆ ಯೆಹೋವ ದೇವರು ತಮ್ಮ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸೊತ್ತಾಗಿ ಹೊಂದುವರು. ಯೆರೂಸಲೇಮನ್ನು ತಿರುಗಿ ಆಯ್ದುಕೊಳ್ಳುವರು.
וְנָחַ֨ל יְהוָ֤ה אֶת־יְהוּדָה֙ חֶלְקֹ֔ו עַ֖ל אַדְמַ֣ת הַקֹּ֑דֶשׁ וּבָחַ֥ר עֹ֖וד בִּירוּשָׁלָֽ͏ִם׃
13 ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”
הַ֥ס כָּל־בָּשָׂ֖ר מִפְּנֵ֣י יְהוָ֑ה כִּ֥י נֵעֹ֖ור מִמְּעֹ֥ון קָדְשֹֽׁו׃ ס

< ಜೆಕರ್ಯನು 2 >