< ಜೆಕರ್ಯನು 4 >

1 ಆಗ ನನ್ನ ಸಂಗಡ ಮಾತನಾಡಿದ ದೇವದೂತನು ತಿರುಗಿಬಂದು,
ಆಗ ನನ್ನ ಸಂಗಡ ಮಾತನಾಡಿದ ದೇವದೂತನು ತಿರುಗಿಬಂದು,
2 ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ.
ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ.
3 ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳಿವೆ. ಅದರ ಬಳಿಯಲ್ಲಿ ಎರಡು ಹಿಪ್ಪೆಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ, ಪಾತ್ರೆಯ ಎಡಗಡೆಯಲ್ಲಿ ಒಂದೂ ಇದ್ದವು,” ಎಂದನು.
ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳಿವೆ. ಅದರ ಬಳಿಯಲ್ಲಿ ಎರಡು ಹಿಪ್ಪೆಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ, ಪಾತ್ರೆಯ ಎಡಗಡೆಯಲ್ಲಿ ಒಂದೂ ಇದ್ದವು,” ಎಂದನು.
4 ಹೀಗೆ ನಾನು ಉತ್ತರಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇವೇನು?” ಎಂದೆನು.
ಹೀಗೆ ನಾನು ಉತ್ತರಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇವೇನು?” ಎಂದೆನು.
5 ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರಕೊಟ್ಟು ನನಗೆ, “ಇವೇನೆಂದು ಗೊತ್ತಿಲ್ಲವೋ?” ಎಂದು ಕೇಳಿದನು. ನಾನು, “ಇಲ್ಲ, ನನ್ನ ಒಡೆಯನೇ,” ಎಂದೆನು.
ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರಕೊಟ್ಟು ನನಗೆ, “ಇವೇನೆಂದು ಗೊತ್ತಿಲ್ಲವೋ?” ಎಂದು ಕೇಳಿದನು. ನಾನು, “ಇಲ್ಲ, ನನ್ನ ಒಡೆಯನೇ,” ಎಂದೆನು.
6 ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
7 “ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”
“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”
8 ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
9 “ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.
“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.
10 “ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”
“ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”
11 ಆಗ ನಾನು ದೇವದೂತನಿಗೆ, “ದೀಪಸ್ತಂಭದ ಎಡಬಲಗಳಲ್ಲಿರುವ ಈ ಎರಡು ಓಲಿವ್ ಮರಗಳು ಏನು?” ಎಂದೆನು.
ಆಗ ನಾನು ದೇವದೂತನಿಗೆ, “ದೀಪಸ್ತಂಭದ ಎಡಬಲಗಳಲ್ಲಿರುವ ಈ ಎರಡು ಓಲಿವ್ ಮರಗಳು ಏನು?” ಎಂದೆನು.
12 ಪುನಃ ನಾನು ಅವನಿಗೆ, “ಎರಡು ಚಿನ್ನದ ನಾಳಗಳಿಂದ ಚಿನ್ನದ ಎಣ್ಣೆಯನ್ನು ತಮ್ಮೊಳಗಿಂದ ಸುರಿಸುವ, ಈ ಎರಡು ಹಿಪ್ಪೆಕೊಂಬೆಗಳು ಏನು?” ಎಂದೆನು.
ಪುನಃ ನಾನು ಅವನಿಗೆ, “ಎರಡು ಚಿನ್ನದ ನಾಳಗಳಿಂದ ಚಿನ್ನದ ಎಣ್ಣೆಯನ್ನು ತಮ್ಮೊಳಗಿಂದ ಸುರಿಸುವ, ಈ ಎರಡು ಹಿಪ್ಪೆಕೊಂಬೆಗಳು ಏನು?” ಎಂದೆನು.
13 ಅವನು ನನಗೆ, “ಇವು ಏನೆಂದು ತಿಳಿಯುವುದಿಲ್ಲವೋ?” ಎಂದನು. ನಾನು, “ನನ್ನ ಒಡೆಯನೇ, ಇಲ್ಲ,” ಎಂದೆನು.
ಅವನು ನನಗೆ, “ಇವು ಏನೆಂದು ತಿಳಿಯುವುದಿಲ್ಲವೋ?” ಎಂದನು. ನಾನು, “ನನ್ನ ಒಡೆಯನೇ, ಇಲ್ಲ,” ಎಂದೆನು.
14 ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.
ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.

< ಜೆಕರ್ಯನು 4 >