< ಜೆಕರ್ಯನು 5 >

1 ಆಗ ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಲು, ಹಾರುವ ಸುರುಳಿ ಕಾಣಿಸಿತು.
Puis, je me repris à lever les yeux et je regardai: c’était un rouleau qui volait.
2 ಆಗ ದೂತನು ನನಗೆ, “ಏನು ನೋಡುತ್ತೀ?” ಎಂದಾಗ, ನಾನು, “ಹಾರುವ ಸುರುಳಿಯನ್ನು ನೋಡುತ್ತಿದ್ದೇನೆ. ಅದರ ಉದ್ದವು ಒಂಬತ್ತು ಮೀಟರ್, ಅದರ ಅಗಲವು ನಾಲ್ಕುವರೆ ಮೀಟರ್ ಇದೆ,” ಎಂದೆನು.
Il me dit: "Que vois-tu?" Je répondis: "Je vois un rouleau qui vole; sa longueur est de vingt coudées et sa largeur de dix coudées."
3 ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.
Il me dit: "C’Est là la malédiction qui se répand sur la face de tout ce pays; car quiconque dérobe sera rejeté d’ici comme elle l’annonce, et quiconque se parjure sera rejeté d’ici comme elle l’annonce.
4 ‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’”
Je lui ai donné libre cours, dit l’Eternel-Cebaot, pour qu’elle entre dans la maison du larron et dans la maison de celui qui jure faussement par mon nom: elle élira domicile au milieu de sa maison et la ruinera avec sa charpente et ses pierres."
5 ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ನಿನ್ನ ಕಣ್ಣೆತ್ತಿ ಹೊರಡುವಂಥದ್ದು ಏನೆಂದು ನೋಡು,” ಎಂದು ನನಗೆ ಹೇಳಿದನು.
Puis l’ange qui conversait avec moi sortit et me dit: "Lève donc les yeux et regarde ce qui apparaît-là."
6 ನಾನು, “ಇದೇನು?” ಎಂದು ಕೇಳಿದಾಗ, ಅವನು, “ಇದು ಅಳೆಯುವ ಬುಟ್ಟಿ,” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು,” ಎಂದನು.
Et je dis: "Qu’est-ce?" II répondit: "C’Est l’êpha qui apparaît." Et il ajouta: "C’Est vers elle que se portent les regards sur toute la terre."
7 ಸೀಸದ ಮುಚ್ಚಳವು ತೆಗೆಯಲಾಯಿತು. ಆ ಬುಟ್ಟಿಯಲ್ಲಿ ಒಬ್ಬ ಸ್ತ್ರೀ ಕುಳಿತುಕೊಂಡಿದ್ದಳು.
Or, voici qu’un bloc de plomb était soulevé et qu’on voyait une femme assise dans l’êpha.
8 ಆತನು, “ಇದು ದುಷ್ಟತ್ವವು,” ಎಂದು ಹೇಳಿ ಆಕೆಯನ್ನು ಬುಟ್ಟಿಯಲ್ಲಿ ಪುನಃ ಅದುಮಿ, ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.
Il dit: "C’Est là la Méchanceté!" Il la repoussa au fond de l’êpha et rejeta la masse de plomb sur l’ouverture.
9 ಆಗ ನಾನು ಕಣ್ಣೆತ್ತಿ ನೋಡಿದಾಗ, ಇಬ್ಬರು ಸ್ತ್ರೀಯರು ಇದ್ದರು. ಅವರ ರೆಕ್ಕೆಗಳು ರಭಸವಾಗಿದ್ದವು. ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು. ಅವರು ಆಕಾಶ ಮತ್ತು ಭೂಮಿಯ ನಡುವೆ ಬುಟ್ಟಿಯನ್ನು ಎತ್ತಿದರು.
Je levai les yeux et je vis sortir deux femmes, les ailes gonflées par le vent. Elles avaient, en effet, des ailes pareilles aux ailes de la cigogne, et elles transportèrent l’êpha entre ciel et terre.
10 ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದೆನು.
Je dis à l’ange, qui conversait avec moi: "Où transportent-elles l’êpha?"
11 ದೂತನು ನನಗೆ, “ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವುದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿತವಾಗಿ, ತನ್ನ ಸ್ಥಾನದಲ್ಲಿ ಇರಿಸಲಾಗುವುದು,” ಎಂದನು.
Il me répondit: " Elles vont pour lui bâtir une demeure dans le pays de Sennaar, et quand celle-ci sera solidement établie, elle y sera déposée à demeure fixe."

< ಜೆಕರ್ಯನು 5 >