< ಜೆಕರ್ಯನು 7 >

1 ಅರಸನಾದ ದಾರ್ಯಾವೆಷನ ನಾಲ್ಕನೆಯ ವರ್ಷದಲ್ಲಿ ಒಂಬತ್ತನೆಯ ತಿಂಗಳಿನ ಅಂದರೆ ಕಿಸ್ಲೇವ್ ತಿಂಗಳಿನ ನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಬಂದಿತು.
ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.
2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು.
ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
3 ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.
ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.
4 ಆಗ ಸರ್ವಶಕ್ತರಾದ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,
ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
5 “ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?
“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
6 ನೀವು ಉಂಡು ಕುಡಿಯುತ್ತಿದ್ದಾಗ, ನಿಮಗಾಗಿಯೇ ಉಂಡು ಕುಡಿದಿರಲ್ಲಾ?
ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.
7 ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.”
ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”
8 ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಪುನಃ ಬಂದು ಹೇಳಿದ್ದೇನೆಂದರೆ,
ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,
9 “ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;
“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
10 ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’” ಎಂಬುದು.
೧೦ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
11 “ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.
೧೧“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
12 ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.
೧೨ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
13 “ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
೧೩“ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.
14 ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”
೧೪ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”

< ಜೆಕರ್ಯನು 7 >