< ಜೆಕರ್ಯನು 7 >
1 ಅರಸನಾದ ದಾರ್ಯಾವೆಷನ ನಾಲ್ಕನೆಯ ವರ್ಷದಲ್ಲಿ ಒಂಬತ್ತನೆಯ ತಿಂಗಳಿನ ಅಂದರೆ ಕಿಸ್ಲೇವ್ ತಿಂಗಳಿನ ನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಬಂದಿತು.
Потом четврте године цара Дарија дође реч Господња Захарији четвртог дана деветог месеца, Хаслева,
2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು.
Кад послаше у дом Божји Сарасара и Регемелеха и људе своје да моле Господа,
3 ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.
И да говоре свештеницима, који беху у дому Господа над војскама, и пророцима, и кажу: Хоћемо ли плакати петог месеца одвајајући се, како чинисмо већ толико година?
4 ಆಗ ಸರ್ವಶಕ್ತರಾದ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,
И дође ми реч Господња Говорећи:
5 “ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?
Кажи свему народу земаљском и свештеницима, и реци: Кад постисте и тужисте петог и седмог месеца за седамдесет година, еда ли мени постисте?
6 ನೀವು ಉಂಡು ಕುಡಿಯುತ್ತಿದ್ದಾಗ, ನಿಮಗಾಗಿಯೇ ಉಂಡು ಕುಡಿದಿರಲ್ಲಾ?
А кад једете и пијете, не једете ли и не пијете ли сами?
7 ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.”
Нису ли то речи које је Господ прогласио преко пређашњих пророка, кад Јерусалим беше насељен и миран и градови његови око њега, и кад беше насељен јужни крај и равница?
8 ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಪುನಃ ಬಂದು ಹೇಳಿದ್ದೇನೆಂದರೆ,
Дође реч Господња Захарији говорећи:
9 “ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;
Овако говори Господ над војскама: Судите право и будите милостиви и жалостиви један другом.
10 ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’” ಎಂಬುದು.
И не чините криво удовици ни сироти, иностранцу ни сиромаху, и не мислите зло један другом у срцу свом.
11 “ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.
Али не хтеше слушати, и узмакоше раменом натраг, и затискоше уши своје да не чују.
12 ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.
И срцем својим отврднуше као дијамант да не чују закон и речи које сла Господ над војскама духом својим преко пророка пређашњих; зато дође велик гнев од Господа над војскама.
13 “ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
Зато као што Он вика, а они не слушаше, тако и они викаше а ја их не слушах, говори Господ над војскама.
14 ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”
Него их разметнух вихором по свим народима, којих не познаваше, и земља опусте иза њих да нико у њу не дохођаше нити се из ње враћаше, и обратише милу земљу у пустош.