< ಚೆಫನ್ಯನು 1 >

1 ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ:
דְּבַר־יְהֹוָה ׀ אֲשֶׁר הָיָה אֶל־צְפַנְיָה בֶּן־כּוּשִׁי בֶן־גְּדַלְיָה בֶּן־אֲמַרְיָה בֶּן־חִזְקִיָּה בִּימֵי יֹאשִׁיָּהוּ בֶן־אָמוֹן מֶלֶךְ יְהוּדָֽה׃
2 ಯೆಹೋವ ದೇವರು ಹೇಳುವುದೇನೆಂದರೆ, “ನಾನು ದೇಶದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.”
אָסֹף אָסֵף כֹּל מֵעַל פְּנֵי הָאֲדָמָה נְאֻם־יְהֹוָֽה׃
3 “ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.
אָסֵף אָדָם וּבְהֵמָה אָסֵף עוֹף־הַשָּׁמַיִם וּדְגֵי הַיָּם וְהַמַּכְשֵׁלוֹת אֶת־הָרְשָׁעִים וְהִכְרַתִּי אֶת־הָאָדָם מֵעַל פְּנֵי הָאֲדָמָה נְאֻם־יְהֹוָֽה׃
4 “ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.
וְנָטִיתִי יָדִי עַל־יְהוּדָה וְעַל כׇּל־יוֹשְׁבֵי יְרוּשָׁלָ͏ִם וְהִכְרַתִּי מִן־הַמָּקוֹם הַזֶּה אֶת־שְׁאָר הַבַּעַל אֶת־שֵׁם הַכְּמָרִים עִם־הַכֹּהֲנִֽים׃
5 ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
וְאֶת־הַמִּשְׁתַּחֲוִים עַל־הַגַּגּוֹת לִצְבָא הַשָּׁמָיִם וְאֶת־הַמִּֽשְׁתַּחֲוִים הַנִּשְׁבָּעִים לַֽיהֹוָה וְהַנִּשְׁבָּעִים בְּמַלְכָּֽם׃
6 ಯೆಹೋವ ದೇವರನ್ನು ಅನುಸರಿಸದೆ ಹಿಂತಿರುಗಿ ಹೋಗುವವರನ್ನು ಯೆಹೋವ ದೇವರನ್ನು ಹುಡುಕದೆಯೂ ವಿಚಾರಿಸದೆಯೂ ಇರುವವರನ್ನೂ ಕಡಿದುಬಿಡುವೆನು.”
וְאֶת־הַנְּסוֹגִים מֵאַחֲרֵי יְהֹוָה וַאֲשֶׁר לֹא־בִקְשׁוּ אֶת־יְהֹוָה וְלֹא דְרָשֻֽׁהוּ׃
7 ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.
הַס מִפְּנֵי אֲדֹנָי יֱהֹוִה כִּי קָרוֹב יוֹם יְהֹוָה כִּֽי־הֵכִין יְהֹוָה זֶבַח הִקְדִּישׁ קְרֻאָֽיו׃
8 ಯೆಹೋವ ದೇವರ ಯಜ್ಞದ ದಿನದಲ್ಲಿ ನಾನು ಪ್ರಧಾನರನ್ನು, ರಾಜಪುತ್ರರನ್ನು ಮತ್ತು ವಿದೇಶಿಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
וְהָיָה בְּיוֹם זֶבַח יְהֹוָה וּפָקַדְתִּי עַל־הַשָּׂרִים וְעַל־בְּנֵי הַמֶּלֶךְ וְעַל כׇּל־הַלֹּבְשִׁים מַלְבּוּשׁ נׇכְרִֽי׃
9 ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.
וּפָקַדְתִּי עַל כׇּל־הַדּוֹלֵג עַל־הַמִּפְתָּן בַּיּוֹם הַהוּא הַֽמְמַלְאִים בֵּית אֲדֹנֵיהֶם חָמָס וּמִרְמָֽה׃
10 “ಆ ದಿನದಲ್ಲಿ, ಮೀನಿನ ಬಾಗಿಲಿನಿಂದ ಕೂಗಿನ ಶಬ್ದವೂ ಹೊಸ ಮನೆಯಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ಮುರಿಯುವ ಬಲವಾದ ಶಬ್ದವೂ ಕೇಳಿಬರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.
וְהָיָה בַיּוֹם הַהוּא נְאֻם־יְהֹוָה קוֹל צְעָקָה מִשַּׁעַר הַדָּגִים וִֽילָלָה מִן־הַמִּשְׁנֶה וְשֶׁבֶר גָּדוֹל מֵהַגְּבָעֽוֹת׃
11 ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ, ಗೋಳಾಡಿರಿ. ಏಕೆಂದರೆ ವರ್ತಕರ ಜನರೆಲ್ಲಾ ಸಂಹಾರವಾದರು. ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.
הֵילִילוּ יֹֽשְׁבֵי הַמַּכְתֵּשׁ כִּי נִדְמָה כׇּל־עַם כְּנַעַן נִכְרְתוּ כׇּל־נְטִילֵי כָֽסֶף׃
12 ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.
וְהָיָה בָּעֵת הַהִיא אֲחַפֵּשׂ אֶת־יְרוּשָׁלַ͏ִם בַּנֵּרוֹת וּפָקַדְתִּי עַל־הָאֲנָשִׁים הַקֹּֽפְאִים עַל־שִׁמְרֵיהֶם הָאֹֽמְרִים בִּלְבָבָם לֹא־יֵיטִיב יְהֹוָה וְלֹא יָרֵֽעַ׃
13 ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”
וְהָיָה חֵילָם לִמְשִׁסָּה וּבָתֵּיהֶם לִשְׁמָמָה וּבָנוּ בָתִּים וְלֹא יֵשֵׁבוּ וְנָטְעוּ כְרָמִים וְלֹא יִשְׁתּוּ אֶת־יֵינָֽם׃
14 ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.
קָרוֹב יוֹם־יְהֹוָה הַגָּדוֹל קָרוֹב וּמַהֵר מְאֹד קוֹל יוֹם יְהֹוָה מַר צֹרֵחַ שָׁם גִּבּֽוֹר׃
15 ಆ ದಿವಸವು ರೌದ್ರದ ದಿವಸವು, ಇಕ್ಕಟ್ಟು ಸಂಕಟಗಳ ದಿವಸವು, ಹಾಳುಪಾಳುಗಳ ದಿವಸವು, ಕತ್ತಲೆ ಮಬ್ಬುಗಳ ದಿವಸವು, ಕಾರ್ಮುಗಿಲ ಕಗ್ಗತ್ತಲ ದಿವಸವು,
יוֹם עֶבְרָה הַיּוֹם הַהוּא יוֹם צָרָה וּמְצוּקָה יוֹם שֹׁאָה וּמְשׁוֹאָה יוֹם חֹשֶׁךְ וַאֲפֵלָה יוֹם עָנָן וַעֲרָפֶֽל׃
16 ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಆರ್ಭಟಗಳ ದಿವಸವು.
יוֹם שׁוֹפָר וּתְרוּעָה עַל הֶעָרִים הַבְּצֻרוֹת וְעַל הַפִּנּוֹת הַגְּבֹהֽוֹת׃
17 “ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.
וַהֲצֵרֹתִי לָאָדָם וְהָֽלְכוּ כַּֽעִוְרִים כִּי לַֽיהֹוָה חָטָאוּ וְשֻׁפַּךְ דָּמָם כֶּעָפָר וּלְחֻמָם כַּגְּלָלִֽים׃
18 ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.
גַּם־כַּסְפָּם גַּם־זְהָבָם לֹא־יוּכַל לְהַצִּילָם בְּיוֹם עֶבְרַת יְהֹוָה וּבְאֵשׁ קִנְאָתוֹ תֵּאָכֵל כׇּל־הָאָרֶץ כִּֽי־כָלָה אַךְ־נִבְהָלָה יַעֲשֶׂה אֵת כׇּל־יֹשְׁבֵי הָאָֽרֶץ׃

< ಚೆಫನ್ಯನು 1 >