< 2 Timotheo 4 >
1 Nikupela lilaghisu ele lyalijhele ni bhusitu palongolo pa K'yara ni Kristu Yesu, jhaibetakubhahukumu bhabhajhele hai ni bhafu, ni kwandabha jha kufunulibhwa kwa muene ni Ufalme bhwa muene:
೧ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,
2 Hubiriajhi Lilobhi. Ujhelayi tayari kwa bhwakati bhwa bhilondeka ni bhwabhwibela kulondeka. Bhajobhelayi bhanu dhambi sya bhene, jhwangilayi, himisijhi, kwa kusindamala kuoha ni mafundisu.
೨ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.
3 Kwandabha bhwa kati wibetakuhida ambabho bhanu bhibetalepi kutolelana ni mafundisu gha bhukweli. Badala jhiake, bhibetakwilondela bhalimu bha kufundisya kulengana ni tamaa sya bhene. Kwanjele ejhe mb'ol'okhoto sya bhene sibetakujha sinyeghesibhu.
೩ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
4 Bhibetakuleka kup'elekesya mafundisu gha bhukweli, ni kusanukila fijegu.
೪ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
5 Lakini bhebhe ujhelayi mwaminifu mu mambo ghoha, sindamalayi manonono, bhombayi mahengu gha mwinjilisti; timisiajhi huduma jha bhebhe.
೫ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.
6 Kwandabha nene tayari nimali kumiminibhwa. Muda ghwa kubhoka kwa nene bhumalikuhegeleka.
೬ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
7 Nikomanili mu haki, mwendo niumalili, imani nijhilendili.
೭ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
8 Litaji lya haki nibhekibhu kwa ndabha jha nene, ambalyo Bwana, jhaihukumu kwa haki, ibetakunipela ligon lela. Na sio kwa nene tu bali kabhele kwa bhoha bhabhilendela kwa shauku kubhoneka kwa muene.
೮ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
9 Ukitangajhi kuhida kwa nene manyata.
೯ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು,
10 Kwa kujha Dema anilekili. Abhuganili bhulimwengu bhwa henu na alotili Thesalonike, Kreseni alotili Galatia, ni Tito alotili Dalmatia. (aiōn )
೧೦ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು. (aiōn )
11 Luka tu ndo ajhe pamonga ni nene. Un'tolayi Marko na uhidayi nakhu kwani muene ghwa muhimu kwa nene mu huduma.
೧೧ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.
12 Nindaghisi Tikiko Efeso.
೧೨ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
13 Lijoho l'ela ambalyo na lilekeli Troa kwa Kapro, pawibetakuhida liletayi, pamonga ni fitabu fela fya ngozi.
೧೩
14 Alekizanda mfua chuma anibhombili maovu ghamehele. Bwana ibetakundepa kul'engana ni matendo gha muene.
೧೪ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.
15 Nabhi kabhele, ukihadhariajhi ni muene, kwani aghapingili nesu malobhi gha tete.
೧೫ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.
16 Mu utetezi bhuangu bhwa kubhwandelu, ajhelepi munu jhejhioha jhaajhemili pamonga ni nene, badala jhiake, khila mmonga anilekhili. K'yara asibhabhalangili haita.
೧೬ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.
17 Lakini Bwana ajhemili pamonga ni nene, anipelili nghofu ili kwamba kupet'ela kwa nene, lilobhi lijobhibhulajhi kwa ukamilifu ni mataifa bhabhwesiajhi kup'eleka. Naokolibhu mu ndomo bhwa simba.
೧೭ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
18 Bwana ibetakunijhepusya ni matendo ghoha maovu ni kunikola kwandabha jha ufalme bhwa muene bhwa kumbinguni. Utukufu bhujhelayi kwa muene milele ni milele. Amina (aiōn )
೧೮ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. (aiōn )
19 Un'salimilayi Priska, Akila ni nyumba jha Onesiforo.
೧೯ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, ಒನೇಸಿಪೊರನ ಮನೆಯವರಿಗೂ ವಂದನೆಹೇಳು.
20 Erasto asie'le okhu Korintho, lakini Trifimo nandekili Mileto akajha iluala.
೨೦ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು.
21 Bhombayi manyata uhidayi kabla jha kipindi kya mepu. Eubulo ikuponesya, kabhele Pude, Lino, Claudia ni bhalongobhu bhoha.
೨೧ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.
22 K'yara ajhelayi pamonga ni roho jha jhobhi, Neema jhijhelayi nabhi.
೨೨ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.