< Matendo ya Mitume 1 >
1 Kitabu kya muandi nakilembili, Theofilo nikajobha ghoha kwa yesu ghaabhanji kubhomba ni kumanyisya,
೧ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,
2 mpaka ligono muene apokelibhu kunani. Ej'ha jha jhele baada jha kupisya amri kup'etela Roho Mtakatifu kwa mitume bhabhajhele abhachaguili.
೨ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
3 Baada jha malombosi gha muene, abhonekane kwa bhene ajha hai pia ni fitishu fingi kushuhudibhwa. Kwa magono arobaini akidhihirishi kwa bhene, naa ajobhili kuhusu bhufalme bhwa K'yara.
೩ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
4 Bhoibhonana nabhu abhajubhili bhasibhoki Yerusalemu, lakini bhalendayi kwa ndabha jha ahadi jha Dadi, ambajho ajobhili, “Mwaip'eliki kuhomela kwa nene.
೪ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,
5 Kwamba Yohana abatili kwa masi, lakini mbatisibhwa kwa Roho Mtakatatifu mu magono agha madebe.”
೫ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.
6 Nabho bhabhonene pamonga bhakan'kota “Bwana, ivi obho ndo muda ambabho wibeta kubhakerebhusila Israeli bhufalme?”
೬ಕೂಡಿಬಂದವರು ಆತನನ್ನು, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು
7 Muene akabhajobhela, “Sawalepi kwa muenga kumanya bhwakati au majira ambayo Dadi akusudili kwa mamlaka gha muene.”
೭ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.
8 Lakini mwibeta kupokela nghofu bhwakati Roho mtakatifu paibeta kuhida kwa mwenga, ni muenga mwibe kujha mashahidi bha nene kuoha Yeresalemu ni Uyahudi jhioha ni Samaria mpaka mwisho ghwa nchi.”
೮ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
9 Bwana Yesu bho amalili kujobha agha, bhakaj'ha bhilanga kunani, muene ajhinulibhu kunani, ni libhengu lyan'gupiki bhasimboni kwa mihu gha bhene.
೯ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
10 Bhwakati bhilola kumbinguni ilota, ghafla bhanu bhabhele bhajhemili katikati jha bhene bhafwalili maguanda mabhalafu.
೧೦ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
11 Bhakajobha, “Enyi bhanu bha Galilaya kwandabha jha kiki mwijhema apa mwilola kumbinguni.” Ojho Yesu jhaakwelili kunani kumbinguni ibeta kukerebhuka kwa namna jhela jhela kama kya mumbwene ilota kumbinguni.
೧೧“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
12 Ndipo bhakakerebhuka Yerusalemu, kuhoma kukidonda kya mizeituni ambako okhu karibu ni Yerusalemu, mwendo ghwa ligono lya sabato.
೧೨ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
13 Bho bhafihili bhakalota ghorofani ambako bhatamaghe. Nabhene ndo Petro, Yohana Yakobo, Andrea, Filipo, Thomaso, Bhatholomayo, Mathayo, Yakobo mwana ghwa Alfayo, Simoni Zelote ni Yuda mwana ghwa Yakobo.
೧೩ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
14 Bhoha bhaungene kama munu mmonga, kwa juhudi bhajhe bhijhendelela ni maombi pamonga ni abhu bhajhela bhadala, Mariamu nyinamunu Yesu nibhakaka yake.
೧೪ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
15 Katika magono ghala ajhemili katikati jha bhalongomunu, kama bhenu 120, akajobha.
೧೫ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
16 Bhalonho bhangu, jhahele lazima maandiku ghatimisibhwayi, ambapo muandi Roho Mtakatifu ajobhili kwa kinywa kya muene Daudi, kuhusiana ni Yuda, ambajhe abha jhekisi bhala bhabharikamuili Yesu.
೧೬“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
17 Kwa kujha muene ajhele mmonga bhitu na apokili fungu lya muene lye faida katika huduma ejhe.”
೧೭ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”
18 (Henu, munu ojho, ahemili lieneo kwa khela kya akipokili kwa uovu bhwa muene ni apuabinili kulongolasya mutu, mbhele ghwa kayuiki ni matumbu gha muene ghoha gajhele pabhwaka ghajhitiki.
೧೮(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
19 Bhoha bha bhataniuli Yerusalemu bhabeliki kuhusu e'le, hivyo lieneo e'lu bhakalikuta kwa lihina lya bhene. “Akeldama” e'lu ndo “N'gonda ghwa damu.”)
೧೯ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
20 “Mukitabu kya Zaburi ile mbibhu, lendayi eneo lya muene lijhelayi hame na asinihusibhu hata mmonga kutani apala, na Ruhusuajhi munu jhongi atolayi nafasi jha muenejha uongozi.
೨೦ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
21 Ejhu, jha muhimu, henu, mmonga ghwa bhagosi ambabho bhalongosene ni tete bhwakati Bwana Yesu abhokili ni kujhingila kwa tete.
೨೧ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
22 kubhwanjila ku ubatisu bhwa Yohana mpaka ligono lela bho atwalibhu kunani lazima ajhelayi shahidi bhwa ufufuo pamonga ni tete.
೨೨
23 Bhakabhabheka palongolo bhagosi bhabhele, Yusufu jhaakutibhweghe Barnaba ambaye pia akutibhu Yusto ni Mathia.
೨೩ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
24 Bhene bhasokili bhajobhili, “Bhebhe Bwana, jhaumanyi mioyo jha bhanu bhoha hivyo bhekayi wazi jholeku kati jha bhabhele abha ambajhe un'chaguili.
೨೪“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
25 Kutola nafasi katika huduma jha utume, ambapo Yuda abhombi uovu ni kulota mahali pa muene.”
೨೫
26 Bhakapiga kura kwa ajili jha bhene, ni kura jhikanibinila Mathia ambajhe abhalangibhu pamonga ni bhala mitume kumi na moja.
೨೬ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.