< 출애굽기 5 >
1 그 후에 모세와 아론이 가서 바로에게 이르되 `이스라엘 하나님 여호와의 말씀에 내 백성을 보내라 그들이 광야에서 내 앞에 절기를 지킬 것이니라 하셨나이다'
೧ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.
2 바로가 가로되 `여호와가 누구관대 내가 그 말을 듣고 이스라엘을 보내겠느냐? 나는 여호와를 알지 못하니 이스라엘도 보내지 아니하리라'
೨ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.
3 그들이 가로되 `히브리인의 하나님이 우리에게 나타나셨은즉 우리가 사흘길쯤 광야에 가서 우리 하나님 여호와께 희생을 드리려 하오니 가기를 허락하소서 여호와께서 온역이나 칼로 우리를 치실까 두려워하나이다'
೩ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.
4 애굽왕이 그들에게 이르되 `모세와 아론아! 너희가 어찌하여 백성으로 역사를 쉬게 하느냐? 가서 너희의 역사나 하라'
೪ಐಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು.
5 또 가로되 `이제 나라에 이 백성이 많거늘 너희가 그들로 역사를 쉬게 하는도다' 하고
೫ಫರೋಹನು, “ಇಬ್ರಿಯರು ದೇಶದಲ್ಲಿ ಹೆಚ್ಚಾಗಿದ್ದಾರೆ. ಅವರು ತಮ್ಮ ಬಿಟ್ಟೀ ಕೆಲಸಗಳನ್ನು ಮಾಡದಂತೆ ನಿಲ್ಲಿಸಿ ಬಿಡುತ್ತಿದ್ದೀರಲ್ಲಾ?” ಎಂದನು.
6 바로가 당일에 백성의 간역자들과 패장들에게 명하여 가로되
೬ಆ ದಿನದಲ್ಲಿ ಫರೋಹನು ಬಿಟ್ಟೀಮಾಡಿಸುವವರನ್ನು ಮತ್ತು ಅವರ ಅಧಿಕಾರಿಗಳನ್ನು ಕರೆಯಿಸಿ,
7 `너희는 백성에게 다시는 벽돌 소용의 짚을 전과 같이 주지 말고 그들로 가서 스스로 줍게 하라
೭“ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಬಾರದು. ಅವರೇ ಹೋಗಿ ಹುಲ್ಲನ್ನು ಶೇಖರಿಸಿಕೊಳ್ಳಲಿ,
8 또 그들의 전에 만든 벽돌 수효대로 그들로 만들게 하고 감하지 말라 그들이 게으르므로 소리질러 이르기를 우리가 가서 우리 하나님께 희생을 드리자 하나니
೮ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ.
9 그 사람들의 고역을 무겁게 함으로 수고롭게 하여 그들로 거짓말을 듣지 않게 하라'
೯ಈ ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ” ಎಂದು ಆಜ್ಞಾಪಿಸಿದನು.
10 간역자들과 패장들이 나아가 백성에게 일러 가로되 `바로의 말씀에 내가 너희에게 짚을 주지 아니하리니
೧೦ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.
11 너희는 짚을 얻을 곳으로 가서 주우라 너희 일은 조금도 감하지 아니하리라' 하셨느니라
೧೧ನಿಮಗೆ ಹುಲ್ಲು ಎಲ್ಲಿ ದೊರಕುವುದೋ ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೂ ನೀವು ಮಾಡಬೇಕಾದ ಕೆಲಸದಲ್ಲಿ ಸ್ವಲ್ಪವೂ ಕಡಿಮೆಯಾಗಬಾರದು” ಎಂದು ಹೇಳಿದರು.
12 백성이 애굽 온 땅에 흩어져 곡초 그루터기를 거두어다가 짚을 대신하니
೧೨ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.
13 간역자들이 그들을 독촉하여 가로되 `너희는 짚이 있을 때와 같이 당일 일을 당일에 마치라' 하며
೧೩ಇದಲ್ಲದೆ ಬಿಟ್ಟೀ ಕೆಲಸ ಮಾಡಿಸುವವರು, “ನಿಮಗೆ ಹುಲ್ಲು ಇದ್ದಾಗ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಅದೇ ದಿನದಲ್ಲೇ ಮುಗಿಸಬೇಕು” ಎಂದು ಹೇಳಿ ಅವರನ್ನು ಅವಸರ ಪಡಿಸಿದರು.
14 바로의 간역자들이 자기들의 세운바 이스라엘 자손의 패장들을 때리며 가로되 '너희가 어찌하여 어제와 오늘에 만드는 벽돌의 수효를 전과 같이 채우지 아니하였느냐?' 하니라
೧೪ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು.
15 이스라엘 자손의 패장들이 가서 바로에게 호소하여 가로되 `왕은 어찌하여 종들에게 이같이 하시나이까?
೧೫ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ?
16 종들에게 짚을 주지 아니하고 그들이 우리더러 벽돌을 만들라 하나이다 종들이 매를 맞으오니 이는 왕의 백성의 허물이니이다'
೧೬ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು.
17 바로가 가로되 `너희가 게으르다, 게으르다 그러므로 너희가 이르기를 우리가 가서 여호와께 희생을 드리자 하는도다
೧೭ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ.
18 이제 가서 일하라 짚은 너희에게 주지 않을지라도 너희가 벽돌을 여수히 바칠지니라'
೧೮ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು” ಅಂದನು.
19 이스라엘 자손의 패장들이 너희의 매일 만드는 벽돌을 조금도 감하지 못하리라 함을 듣고 화가 몸에 미친 줄 알고
೧೯ದಿನ ದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂಬ ಅಪ್ಪಣೆಯಾಗಿದ್ದರಿಂದ ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಸಿಕ್ಕಿಕೊಂಡಿವೆಂದು ತಿಳಿದುಕೊಂಡರು.
20 그들이 바로를 떠나 나올 때에 모세와 아론이 길에 선 것을 만나
೨೦ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ ತಮ್ಮನ್ನು ಎದುರುಗೊಳ್ಳುವುದಕ್ಕೆ ನಿಂತಿದ್ದ ಮೋಶೆ ಮತ್ತು ಆರೋನರನ್ನು ನೋಡಿ
21 그들에게 이르되 `너희가 우리로 바로의 눈과 그 신하의 눈에 미운 물건이 되게 하고 그들의 손에 칼을 주어 우리를 죽이게 하는도다 여호와는 너희를 감찰하시고 판단하시기를 원하노라'
೨೧ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು.
22 모세가 여호와께 돌아와서 고하되 `주여, 어찌하여 이 백성으로 학대를 당케 하셨나이까? 어찌하여 나를 보내셨나이까?
೨೨ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, “ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ?
23 내가 바로에게 와서 주의 이름으로 말함으로부터 그가 이 백성을 더 학대하며 주께서도 주의 백성을 구원치 아니하시나이다'
೨೩ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ” ಎಂದು ಹೇಳಿದನು.