< 이사야 28 >
1 취한 자 에브라임의 교만한 면류관이여 화 있을진저 술에 빠진 자의 성 곧 영화로운 관 같이 기름진 골짜기 꼭대기에 세운 성이여 쇠잔해가는 꽃 같으니 화 있을진저
೧ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!
2 보라, 주께 있는 강하고 힘 있는 자가 쏟아지는 우박 같이 파괴하는 광풍 같이 큰 물의 창일함 같이 손으로 그 면류관을 땅에 던지리니
೨ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.
3 에브라임의 취한 자의 교만한 면류관이 발에 밟힐 것이라
೩ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.
4 그 기름진 골짜기 꼭대기에 있는 그 영화의 쇠잔해 가는 꽃이 여름 전에 처음 익은 무화과와 같으니 보는 자가 그것을 보고 얼른 따서 먹으리로다
೪ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.
5 그 날에 만군의 여호와께서 그 남은 백성에게 영화로운 면류관이 되시며 아름다운 화관이 되실 것이라
೫ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.
6 재판석에 앉은 자에게는 판결하는 신이 되시며 성문에서 싸움을 물리치는 자에게는 힘이 되시리로다 마는
೬ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.
7 이 유다 사람들도 포도주로 인하여 옆걸음 치며 독주로 인하여 비틀거리며 제사장과 선지자도 독주로 인하여 옆걸음 치며 포도주에 빠지며 독주로 인하여 비틀거리며 이상을 그릇 풀며 재판할때에 실수하나니
೭ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.
8 모든 상에는 토한 것 더러운 것이 가득하고 깨끗한 곳이 없도다
೮ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.
9 그들이 이르기를 그가 뉘게 지식을 가르치며 뉘게 도를 전하여 깨닫게 하려는가 젖 떨어져 품을 떠난 자들에게 하려는가
೯ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?
10 대저 경계에 경계를 더하며 경계에 경계를 더하며 교훈에 교훈을 더하며 교훈에 교훈을 더하되 여기서도 조금, 저기서도 조금하는구나 하는도다
೧೦ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ.
11 그러므로 생소한 입술과 다른 방언으로 이 백성에게 말씀하시리라
೧೧ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು.
12 전에 그들에게 이르시기를 이것이 너희 안식이요 이것이 너희 상쾌함이니 너희는 곤비한 자에게 안식을 주라 하셨으나 그들이 듣지 아니하였으므로
೧೨ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.
13 여호와께서 그들에게 말씀하시되 경계에 경계를 더하며 경계에 경계를 더하며 교훈에 교훈을 더하며 교훈에 교훈을 더하고 여기서도 조금, 저기서도 조금 하사 그들로 가다가 뒤로 넘어져 부러지며 걸리며 잡히게 하시리라
೧೩ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.
14 이러므로 예루살렘에 있는 이 백성을 치리하는 너희 경만한 자여 여호와의 말씀을 들을지어다
೧೪ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,
15 너희 말이 우리는 사망과 언약하였고 음부와 맹약하였은즉 넘치는 재앙이 유행할지라도 우리에게 미치지 못하리니 우리는 거짓으로 우리 피난처를 삼았고 허위 아래 우리를 숨겼음이라 하는도다 (Sheol )
೧೫ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ. (Sheol )
16 그러므로 주 여호와께서 가라사대 보라 내가 한 돌을 시온에 두어 기초를 삼았노니 곧 시험한 돌이요 귀하고 견고한 기초 돌이라 그것을 믿는 자는 급절하게 되지 아니하리로다
೧೬ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
17 나는 공평으로 줄을 삼고 의로 추를 삼으니 우박이 거짓의 피난처를 소탕하며 물이 그 숨는 곳에 넘칠 것인즉
೧೭ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
18 너희의 사망으로 더불어 세운 언약이 폐하며 음부로 더불어 맺은 맹약이 서지 못하여 넘치는 재앙이 유행할 때에 너희가 그것에게 밟힘을 당할 것이라 (Sheol )
೧೮ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು. (Sheol )
19 그것이 유행할 때마다 너희를 잡을 것이니 아침마다 유행하고 주야로 유행한즉 그 전하는 도를 깨닫는 것이 오직 두려움이라
೧೯ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.
20 침상이 짧아서 능히 몸을 펴지 못하며 이불이 좁아서 능히 몸을 싸지 못함 같으리라 하셨나니
೨೦ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.”
21 대저 여호와께서 브라심산에서와 같이 일어나시며 기브온 골짜기에서와 같이 진노하사 자기 일을 행하시리니 그 일이 비상할 것이며 자기 공을 이루시리니 그 공이 기이할 것임이라
೨೧ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.
22 그러므로 너희는 경만한 자가 되지 말라 너희 결박이 우심할까 하노라 대저 온 땅을 멸망시키기로 작정하신 것을 내가 만군의 주 여호와께로서 들었느니라
೨೨ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
23 너희는 귀를 기울여 내 목소리를 들으라 자세히 내 말을 들으라
೨೩ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
24 파종하려고 가는 자가 어찌 끊이지 않고 갈기만 하겠느냐 그 땅을 개간하며 고르게만 하겠느냐
೨೪ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?
25 지면을 이미 평평히 하였으면 소회향을 뿌리며 대회향을 뿌리며 소맥을 줄줄이 심으며 대맥을 정한 곳에 심으며 귀리를 그 가에 심지 않겠느냐
೨೫ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ?
26 이는 그의 하나님이 그에게 적당한 방법으로 보이사 가르치셨음이며
೨೬ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.
27 소회향은 도리깨로 떨지 아니하며 대회향에는 수레 바퀴를 굴리지 아니하고 소회향은 작대기로 떨고 대회향은 막대기로 떨며
೨೭ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.
28 곡식은 부수는가, 아니라 늘 떨기만 하지 아니하고 그것에 수레 바퀴를 굴리고 그것을 말굽으로 밟게 할지라도 부수지는 아니하나니
೨೮ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.
29 이도 만군의 여호와께로서 난 것이라 그의 모략은 기묘하며 지혜는 광대하니라
೨೯ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.