< 예레미야 7 >
1 여호와께로서 예레미야에게 말씀이 임하니라 가라사대
೧ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
2 너는 여호와의 집 문에 서서 이 말을 선포하여 이르기를 여호와께 경배하러 이 문으로 들어가는 유다인아 다 여호와의 말씀을 들으라
೨“ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.
3 만군의 여호와 이스라엘의 하나님이 이같이 말씀하시되 너희 길과 행위를 바르게 하라 그리하면 내가 너희로 이 곳에 거하게 하 리라
೩ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.
4 너희는 이것이 여호와의 전이라, 여호와의 전이라, 여호와의 전이라 하는 거짓말을 믿지 말라
೪‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.
5 너희가 만일 길과 행위를 참으로 바르게 하여 이웃들 사이에 공의를 행하며
೫ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.
6 이방인과 고아와 과부를 압제하지 말며 무죄한 자의 피를 이 곳에서 흘리지 아니하며 다른 신들을 좇아 스스로 해하지 아니하면
೬ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,
7 내가 너희를 이 곳에 거하게 하리니 곧 너희 조상에게 영원 무궁히 준 이 땅에니라
೭ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.
೮ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.
9 너희가 도적질 하며 살인하며 간음하며 거짓 맹세하며 바알에게 분향하며 너희의 알지 못하는 다른 신들을 좇으면서
೯ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,
10 내 이름으로 일컬음을 받는 이 집에 들어와서 내 앞에 서서 말하기를 우리가 구원을 얻었나이다 하느냐 이는 이 모든 가증한 일을 행하려 함이로다
೧೦ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?
11 내 이름으로 일컬음을 받는 이 집이 너희 눈에는 도적의 굴혈로 보이느냐? 보라 나 곧 내가 그것을 보았노라 여호와의 말이니라
೧೧ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.
12 너희는 내가 처음으로 내 이름을 둔 처소 실로에 가서 내 백성 이스라엘의 악을 인하여 내가 어떻게 행한 것을 보라
೧೨“ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.
13 나 여호와가 말하노라 이제 너희가 그 모든 일을 행하였으며 내가 너희에게 말하되 새벽부터 부지런히 말하여도 듣지 아니하였고 너희를 불러도 대답지 아니하였느니라
೧೩ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.
14 그러므로 내가 실로에 행함 같이 너희가 의뢰하는 바 내 이름으로 일컬음을 받는 이 집 곧 너희와 너희 열조에게 준 이 곳에 행하겠고
೧೪ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.
15 내가 너희 모든 형제 곧 에브라임 온 자손을 쫓아냄같이 내 앞에서 너희를 쫓아내리라 하셨다 할지니라
೧೫ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು.
16 그런즉 너는 이 백성을 위하여 기도하지 말라 그들을 위하여 부르짖어 구하지 말라 내게 간구하지 말라 내가 너를 듣지 아니하리라
೧೬“ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.
17 너는 그들이 유다 성읍들과 예루살렘 거리에서 행하는 일을 보지 못하느냐?
೧೭ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?
18 자식들은 나무를 줍고 아비들은 불을 피우며 부녀들은 가루를 반죽하여 하늘 황후를 위하여 과자를 만들며 그들이 또 다른 신들에게 전제를 부음으로 나의 노를 격동하느니라
೧೮ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.
19 나 여호와가 말하노라 그들이 나를 격노케 함이냐? 어찌 자기 얼굴에 수욕을 자취함이 아니냐?
೧೯ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ” ಎಂದು ಯೆಹೋವನು ನುಡಿಯುತ್ತಾನೆ.
20 그러므로 주 여호와 내가 이같이 말하노라 보라 나의 진노와 분한을 이 곳에 붓되 사람과 짐승과 들나무와 땅의 소산에 부으리니 불같이 살라지고 꺼지지 아니하리라 하시니라
೨೦ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”
21 만군의 여호와 이스라엘의 하나님이 이같이 말씀하시되 너희 희생에 번제물을 아울러 그 고기를 먹으라
೨೧ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.
22 대저 내가 너희 열조를 애굽 땅에서 인도하여 낸 날에 번제나 희생에 대하여 말하지 아니하며 명하지 아니하고
೨೨ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.
23 오직 내가 이것으로 그들에게 명하여 이르기를 너희는 내 목소리를 들으라! 그리하면 나는 너희 하나님이 되겠고 너희는 내 백성이 되리라 너희는 나의 명한 모든 길로 행하라 그리하면 복을 받으리라 하였으나
೨೩ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
24 그들이 청종치 아니하며 귀를 기울이지도 아니하고 자기의 악한 마음의 꾀와 강퍅한 대로 행하여 그 등을 내게로 향하고 그 얼굴을 향치 아니하였으며
೨೪ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.
25 너희 열조가 애굽 땅에서 나온 날 부터 오늘까지 내가 내 종 선지자들을 너희에게 보내었으되 부지런히 보내었으나
೨೫“ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ.
26 너희가 나를 청종치 아니하며 귀를 기울이지 아니하고 목을 굳게하여 너희 열조보다 악을 더 행하였느니라
೨೬ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.
27 네가 그들에게 이 모든 말을 할지라도 그들이 너를 청종치 아니할 것이요 네가 그들을 불러도 그들이 네게 대답지 아니하리니
೨೭“ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ.
28 너는 그들에게 말하기를 너희는 너희 하나님 여호와의 목소리를 청종치 아니하며 교훈을 받지 아니하는 국민이라 진실이 없어져 너희 입에서 끊어졌다 할지니라
೨೮ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.
29 예루살렘아, 너의 머리털을 베어 버리고 자산 위에서 호곡할지어다 여호와께서 그 노하신 바 이 세대를 끊어버리셨음이니라
೨೯ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.
30 여호와께서 말씀하시되 유다 자손이 나의 목전에 악을 행하여 내 이름으로 일컬음을 받는 집에 그들의 가증한 것을 두어 집을 더럽혔으며
೩೦ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.
31 힌놈의 아들 골짜기에 도벳 사당을 건축하고 그 자녀를 불에 살랐나니 내가 명하지 아니하였고 내 마음에 생각지도 아니한 일이니라
೩೧ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
32 그러므로 나 여호와가 말하노라 날이 이르면 이 곳을 도벳이라 하거나 힌놈의 아들의 골짜기라 칭하지 아니하고 살륙의 골짜기라 칭하리니 매장할 자리가 없도록 도벳에 장사함을 인함이니라
೩೨ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ‘ಸಂಹಾರದ ತಗ್ಗು’ ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
33 이 백성의 시체가 공중의 새와 땅 짐승의 밥이 될 것이나 그것을 쫓을 자가 없을 것이라
೩೩ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.
34 그 때에 내가 유다 성읍들과 예루살렘 거리에 기뻐하는 소리, 즐기는 소리, 신랑의 소리, 신부의 소리가 끊쳐지게 하리니 땅이 황폐하리라
೩೪ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.