< 욥기 15 >
೧ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
2 지혜로운 자가 어찌 헛된 지식으로 대답하겠느냐? 어찌 동풍으로 그 품에 채우겠느냐?
೨“ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ?
3 어찌 유조치 아니한 이야기, 무익한 말로 변론하겠느냐?
೩ಪ್ರಯೋಜನವಿಲ್ಲದ ನುಡಿಯಿಂದಲೂ, ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ?
4 참으로 네가 하나님 경외하는 일을 폐하여 하나님 앞에 묵도하기를 그치게 하는구나
೪ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.
5 네 죄악이 네 입을 가르치나니 네가 간사한 자의 혀를 택하였구나
೫ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.
6 너를 정죄한 것은 내가 아니요 네 입이라 네 입술이 너를 쳐서 증거하느니라
೬ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ.
7 네가 제일 처음 난 사람이냐? 산들이 있기 전에 네가 출생하였느냐?
೭ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ?
8 하나님의 모의를 네가 들었느냐? 지혜를 홀로 가졌느냐?
೮ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?
9 너의 아는 것이 무엇이기로 우리가 알지 못하겠느냐? 너의 깨달은 것이 무엇이기로 우리에게는 없겠느냐?
೯ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ?
10 우리 중에는 머리가 세기도 하고 연로하기도 하여 네 부친보다 나이 많은 자가 있느니라
೧೦ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.
11 하나님의 위로와 네게 온유하게 하시는 말씀을 네가 어찌 작다 하느냐?
೧೧ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ?
12 어찌하여 네가 마음에 끌리며 네 눈을 번쩍여
೧೨ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು? ನಿನ್ನ ಕಣ್ಣುಗಳು ಕಿಡಿಕಿಡಿಯಾಗುವುದೇಕೆ?
13 네 영으로 하나님을 반대하고 네 입으로 말들을 내느냐
೧೩ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!
14 사람이 무엇이관대 깨끗하겠느냐? 여인에게서 난 자가 무엇이관대 의롭겠느냐?
೧೪ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?
15 하나님은 그 거룩한 자들을 믿지 아니 하시나니 하늘이라도 그의 보시기에 부정하거든
೧೫ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.
16 하물며 악을 짓기를 물 마심 같이 하는 가증하고 부패한 사람이겠느냐?
೧೬ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!
17 내가 네게 보이리니 나를 들으라 내가 본 것을 설명하리라
೧೭ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, ಕಂಡದ್ದನ್ನೇ ವಿವರಿಸುವೆನು.
18 이는 곧 지혜로운 자들이 그 열조에게서 받아 숨기지 아니하고 전하여 온 것이라
೧೮ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ.
19 이 땅은 그들에게만 주셨으므로 외인은 그들 중에 왕래하지 못하였었느니라
೧೯ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ.
20 그 말에 이르기를 악인은 그 일평생에 고통을 당하며 강포자의 햇수는 작정되었으므로
೨೦ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.
21 그 귀에는 놀라운 소리가 들리고 그 형통할 때에 멸망시키는 자가 그에게 임하리니
೨೧ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.
22 그가 어두운 데서 나오기를 바라지 못하고 칼날의 기다림이 되느니라
೨೨ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
23 그는 유리하며 식물을 구하여 이르기를 어디 있느냐? 하며 흑암한 날이 가까운 줄을 스스로 아느니라
೨೩‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.
24 환난과 고통이 그를 두렵게 하며 싸움을 준비한 왕처럼 그를 쳐서 이기리니
೨೪ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.
25 이는 그 손을 들어 하나님을 대적하며 교만하여 전능자를 배반함이니라
೨೫ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ.
26 그는 목을 굳게 하고 두터운 방패로 하나님을 치려고 달려가나니
೨೬ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ ಆತನ ಮೇಲೆ ಬೀಳಬೇಕೆಂದು ಓಡಿದನು.
27 그 얼굴에는 살이 찌고 허리에는 기름이 엉기었고
೨೭ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು.
28 그는 황무한 성읍, 사람이 살지 아니하는 집, 돌 무더기가 될 곳에 거하였음이니라
೨೮ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, ‘ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ’ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು.
29 그는 부요하지 못하고 재산이 항상 있지 못하며 그 산업이 땅에서 증식하지 못할 것이며
೨೯ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ.
30 흑암한 데를 떠나지 못하리니 불꽃이 그 가지를 말릴 것이라 하나님의 입김에 그가 떠나리라
೩೦ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.
31 그는 스스로 속아 허망한 것을 믿지 말 것은 허망한 것이 그의 보응이 될 것임이라
೩೧ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,
32 그의 날이 이르기 전에 그 일이 이룰 것인즉 그 가지가 푸르지 못하리니
೩೨ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ,
33 포도열매가 익기 전에 떨어짐 같고 감람 꽃이 곧 떨어짐 같으리라
೩೩ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು.
34 사곡한 무리는 결실이 없고 뇌물을 받는 자의 장막은 불탈 것이라
೩೪ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.
35 그들은 악한 생각을 배고 불의를 낳으며 마음에 궤휼을 예비한다 하였느니라
೩೫ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”