< 민수기 4 >

1 여호와께서 또 모세와 아론에게 일러 가라사대
ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದೇನೆಂದರೆ,
2 레위 자손 중에서 고핫 자손을 그들의 가족과 종족을 따라 총계할지니
“ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
3 곧 삼십세 이상으로 오십세까지 회막의 일을 하기 위하여 그 역사에 참가할 만한 모든 자를 계수하라
ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.
4 고핫 자손의 회막 안 지성물에 대하여 할 일은 이러하니라
ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.
5 행진할 때에 아론과 그 아들들이 들어가서 간 막는 장을 걷어 증거궤를 덮고
ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,
6 그 위에 해달의 가죽으로 덮고 그 위에 순청색 보자기를 덮은후에 그 채를 꿰고
ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.
7 또 진설병의 상에 청색 보자기를 펴고 대접들과, 숟가락들과, 주발들과, 붓는 잔들을 그 위에 두고 또 항상 진설하는 떡을 그 위에 두고
ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.
8 홍색 보자기를 그 위에 펴고 그것을 해달의 가죽 덮개로 덮은후에 그 채를 꿰고
ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.
9 또 청색 보자기를 취하여 등대와, 그 등잔들과, 그 불집게들과, 불똥 그릇들과, 그 쓰는 바 모든 기름 그릇을 덮고
ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ
10 등대와 그 모든 기구를 해달의 가죽 덮개 안에 넣어 메는 틀위에 두고
೧೦ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.
11 또 금단 위에 청색 보자기를 펴고 해달의 가죽 덮개로 덮고 그 채를 꿰고
೧೧ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.
12 또 성소에서 봉사하는 데 쓰는 모든 기명을 취하여 청색 보자기에 싸서 해달의 가죽 덮개로 덮어 메는 틀 위에 두고
೧೨ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.
13 또 단의 재를 버리고 그 단 위에 자색 보자기를 펴고
೧೩ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು.
14 봉사하는 데 쓰는 모든 기구 곧 불 옮기는 그릇들과, 고기 갈고리들과, 부삽들과, 대야들과, 단의 모든 기구를 두고 해달의 가죽 덮개를 그 위에 덮고 그 채를 꿸 것이며
೧೪ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.
15 행진할 때에 아론과 그 아들들이 성소와 성소의 모든 기구 덮기를 필하거든 고핫 자손이 와서 멜 것이니라 그러나 성물은 만지지 말지니 죽을까 하노라 회막 물건 중에서 이것들은 고핫 자손이 멜 것이며
೧೫ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.
16 제사장 아론의 아들 엘르아살의 맡을 것은 등유와, 분향할 향품과, 항상 드리는 소제물과, 관유며, 또 장막의 전체와, 그 중에 있는 모든 것과, 성소와, 그 모든 기구니라
೧೬ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”
17 여호와께서 또 모세와 아론에게 일러 가라사대
೧೭ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
18 너희는 고핫 족속의 지파를 레위인 중에서 끊어지게 말지니
೧೮“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.
19 그들이 지성물에 접근할 때에 그 생명을 보존하고 죽지 않게 하기 위하여 너희는 이같이 하여 아론과 그 아들들이 들어가서 각 사람에게 그 할 일과 그 멜 것을 지휘할지니라
೧೯ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.
20 그들은 잠시라도 들어가서 성소를 보지 말것은 죽을까 함이니라
೨೦ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು.
21 여호와께서 또 모세에게 일러 가라사대
೨೧ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
22 게르손 자손도 그 종족과 가족을 따라 총계하되
೨೨“ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು.
23 삼십세 이상으로 오십세까지 회막 봉사에 입참하여 일할 만한 모든 자를 계수하라
೨೩ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು.
24 게르손 가족의 할 일과 멜 것은 이러하니
೨೪ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ;
25 곧 그들은 성막의 앙장들과, 회막과, 그 덮개와, 그 위의 해달의 가죽 덮개와, 회막 문장을 메이며
೨೫ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ,
26 뜰의 휘장과, 및 성막과, 단 사면에 있는 뜰의 문장과, 그 줄들과, 그것에 사용하는 모든 기구를 메이며 이 모든 것을 어떻게 맡아 처리할 것이라
೨೬ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.
27 게르손 자손은 그 모든 일 곧 멜 것과 처리할 것에 아론과 그 아들들의 명대로 할 것이니 너희는 그들의 멜 짐을 그들에게 맡길 것이니라
೨೭ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.
28 게르손 자손의 가족들이 회막에서 할 일이 이러하며 그들의 직무는 제사장 아론의 아들 이다말이 감독할지니라
೨೮ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು.
29 너는 므라리 자손도 그 가족과 종족을 따라 계수하되
೨೯“ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
30 삼십세 이상으로 오십세까지 회막 봉사에 입참하여 일할 만한 모든 자를 계수하라
೩೦ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು.
31 그들이 직무를 따라 회막에서 할 모든 일 곧 그 멜 것이 이러하니 곧 장막의 널판들과, 그 띠들과, 그 기둥들과, 그 받침들과,
೩೧ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,
32 뜰 사면 기둥들과, 그 받침들과, 그 말뚝들과, 그 줄들과, 그 모든 기구들과, 무릇 그것에 쓰는 것이라 너희는 그들의 맡아 멜 모든 기구의 명목을 지정하라
೩೨ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.
33 이는 제사장 아론의 아들 이다말의 수하에 있을 므라리 자손의 가족들이 그 모든 사무대로 회막에서 행할 일이니라
೩೩ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು.
34 모세와 아론과 회중의 족장들이 고핫 자손들을 그 가족과 종족대로 계수하니
೩೪ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
35 삼십세 이상으로 오십세까지 회막 봉사에 입참하여 일할 만한 모든 자
೩೫ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.
36 곧 그 가족대로 계수함을 입은 자가 이천 칠백 오십이니
೩೬ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ.
37 이는 모세와 아론이 여호와께서 모세로 명하신 대로 회막에서 종사하는 고핫인의 모든 가족 중 계수한 자니라
೩೭ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
38 게르손 자손의 그 가족과 종족을 따라 계수함을 입은 자는
೩೮ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
39 삼십세 이상으로 오십세까지 회막 봉사에 입참하여 일할 만한 모든 자라
೩೯ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು.
40 그 가족과 종족을 따라 계수함을 입은 자가 이천 육백 삼십명이니
೪೦ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.
41 이는 모세와 아론이 여호와의 명대로 회막에서 종사하는 게르손 자손의 모든 가족 중 계수한 자니라
೪೧ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
42 므라리 자손의 가족 중 그 가족과 종족을 따라 계수함을 입은 자는
೪೨ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
43 삼십세 이상으로 오십세까지 회막 봉사에 입참하여 일할 만한 모든 자라
೪೩ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು.
44 그 가족을 따라 계수함을 입은 자가 삼천 이백명이니
೪೪ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ.
45 이는 모세와 아론이 여호와께서 모세로 명하신 대로 므라리 자손들의 가족 중 계수한 자니라
೪೫ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು.
46 모세와 아론과 이스라엘 족장들이 레위인을 그 가족과 종족대로 다 계수하니
೪೬ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
47 삼십세 이상으로 오십세까지 회막 봉사와 메는 일에 입참하여 일할 만한 모든 자
೪೭ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.
48 곧 그 계수함을 입은 자가 팔천 오백 팔십명이라
೪೮ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580.
49 그들이 그 할 일과 멜일을 따라 모세에게 계수함을 입었으되 여호와께서 모세에게 명하신 대로 그들이 계수함을 입었더라
೪೯ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.

< 민수기 4 >