< 시편 111 >
1 할렐루야! 내가 정직한 자의 회와 공회 중에서 전심으로 여호와께 감사하리로다
೧ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.
2 여호와의 행사가 크시니 이를 즐거워하는 자가 다 연구하는도다
೨ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.
3 그 행사가 존귀하고 엄위하며 그 의가 영원히 있도다
೩ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.
4 그 기이한 일을 사람으로 기억케 하셨으니 여호와는 은혜로우시고 자비하시도다
೪ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.
5 여호와께서 자기를 경외하는 자에게 양식을 주시며 그 언약을 영원히 기억하시리로다
೫ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ
6 저가 자기 백성에게 열방을 기업으로 주사 그 행사의 능을 저희에게 보이셨도다
೬ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.
7 그 손의 행사는 진실과 공의며 그 법도는 다 확실하니
೭ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.
8 영원 무궁히 정하신 바요 진실과 정의로 행하신 바로다
೮ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.
9 여호와께서 그 백성에게 구속을 베푸시며 그 언약을 영원히 세우셨으니 그 이름이 거룩하고 지존하시도다
೯ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.
10 여호와를 경외함이 곧 지혜의 근본이라 그 계명을 지키는 자는 다 좋은 지각이 있나니 여호와를 찬송함이 영원히 있으리로다
೧೦ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.