< 시편 116 >

1 여호와께서 내 음성과 내 간구를 들으시므로 내가 저를 사랑하는도다
ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.
2 그 귀를 내게 기울이셨으므로 내가 평생에 기도하리로다!
ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.
3 사망의 줄이 나를 두르고 음부의 고통이 내게 미치므로 내가 환난과 슬픔을 만났을 때에 (Sheol h7585)
ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. (Sheol h7585)
4 내가 여호와의 이름으로 기도하기를 여호와여, 주께 구하오니 내 영혼을 건지소서 하였도다
ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.
5 여호와는 은혜로우시며 의로우시며 우리 하나님은 자비하시도다
ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.
6 여호와께서는 어리석은 자를 보존하시나니 내가 낮게 될 때에 나를 구원하셨도다
ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.
7 내 영혼아! 네 평안함에 돌아갈지어다 여호와께서 너를 후대하심이로다
ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.
8 주께서 내 영혼을 사망에서, 내 눈을 눈물에서, 내 발을 넘어짐에서 건지셨나이다
ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,
9 내가 생존 세계에서 여호와 앞에 행하리로다
ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.
10 내가 믿는고로 말하리라 내가 큰 곤란을 당하였도다
೧೦“ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ,
11 내가 경겁 중에 이르기를 모든 사람은 거짓말장이라 하였도다
೧೧“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.
12 여호와께서 내게 주신 모든 은혜를 무엇으로 보답할꼬
೧೨ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?
13 내가 구원의 잔을 들고 여호와의 이름을 부르며
೧೩ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
14 여호와의 모든 백성 앞에서 나의 서원을 여호와께 갚으리로다
೧೪ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.
15 성도의 죽는 것을 여호와께서 귀중히 보시는도다
೧೫ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.
16 여호와여, 나는 진실로 주의 종이요 주의 여종의 아들 곧 주의 종이라 주께서 나의 결박을 푸셨나이다
೧೬ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.
17 내가 주께 감사제를 드리고 여호와의 이름을 부르리이다
೧೭ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
18 내가 여호와의 모든 백성 앞에서 나의 서원을 여호와께 갚을지라
೧೮ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,
19 예루살렘아, 네 가운데서, 여호와의 전 정에서 내가 갚으리로다 할렐루야!
೧೯ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!

< 시편 116 >