< 시편 5 >

1 (다윗의 시. 영장으로 관악에 맞춘 노래) 여호와여, 나의 말에 귀를 기울이사 나의 심사를 통촉하소서
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.
2 나의 왕, 나의 하나님이여, 나의 부르짖는 소리를 들으소서 내가 주께 기도하나이다
ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು.
3 여호와여, 아침에 주께서 나의 소리를 들으시리니 아침에 내가 주께 기도하고 바라리이다
ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
4 주는 죄악을 기뻐하는 신이 아니시니 악이 주와 함께 유하지 못하며
ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.
5 오만한 자가 주의 목전에 서지 못하리이다 주는 모든 행악자를 미워하시며
ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
6 거짓말하는 자를 멸하시리이다 여호와께서는 피 흘리기를 즐기고 속이는 자를 싫어하시나이다
ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
7 오직 나는 주의 풍성한 인자를 힘입어 주의 집에 들어가 주를 경외함으로 성전을 향하여 경배하리이다
ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
8 여호와여, 나의 원수들을 인하여 주의 의로 나를 인도하시고 주의 길을 내 목전에 곧게 하소서
ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
9 저희 입에 신실함이 없고 저희 심중이 심히 악하며 저희 목구멍은 열린 무덤같고 저희 혀로는 아첨하나이다
ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.
10 하나님이여, 저희를 정죄하사 자기 꾀에 빠지게 하시고 그 많은 허물로 인하여 저희를 쫓아 내소서 저희가 주를 배역함이니이다
೧೦ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.
11 오직 주에게 피하는 자는 다 기뻐하며 주의 보호로 인하여 영영히 기뻐 외치며 주의 이름을 사랑하는 자들은 주를 즐거워하리이다
೧೧ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
12 여호와여, 주는 의인에게 복을 주시고 방패로 함 같이 은혜로 저를 호위하시리이다
೧೨ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.

< 시편 5 >