< 시편 93 >

1 여호와께서 통치하시니 스스로 권위를 입으셨도다 여호와께서 능력을 입으시며 띠셨으므로 세계도 견고히 서서 요동치 아니하도다
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
2 주의 보좌는 예로부터 견고히 섰으며 주는 영원부터 계셨나이다
ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.
3 여호와여, 큰 물이 소리를 높였고 큰 물이 그 소리를 높였고 큰 물이 그 물결을 높이나이다
ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.
4 높이 계신 여호와의 능력은 많은 물 소리와 바다의 큰 파도보다 위대하시니이다
ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
5 여호와여, 주의 증거하심이 확실하고 거룩함이 주의 집에 합당하여 영구하리이다
ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

< 시편 93 >