< 시편 95 >
1 오라! 우리가 여호와께 노래하며 우리 구원의 반석을 향하여 즐거이 부르자
೧ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
2 우리가 감사함으로 그 앞에 나아가며 시로 그를 향하여 즐거이 부르자
೨ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
3 대저 여호와는 크신 하나님이시요 모든 신 위에 크신 왕이시로다
೩ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
4 땅의 깊은 곳이 그 위에 있으며 산들의 높은 것도 그의 것이로다
೪ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.
5 바다가 그의 것이라 그가 만드셨고 육지도 그의 손이 지으셨도다
೫ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
6 오라! 우리가 굽혀 경배하며 우리를 지으신 여호와 앞에 무릎을 꿇자
೬ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.
7 대저 저는 우리 하나님이시요, 우리는 그의 기르시는 백성이며 그 손의 양이라 너희가 오늘날 그 음성 듣기를 원하노라
೭ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
8 이르시기를 너희는 므리바에서와 같이 또 광야 맛사의 날과 같이 너희 마음을 강퍅하게 말지어다
೮ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
9 그 때에 너희 열조가 나를 시험하며 나를 탐지하고 나의 행사를 모았도다
೯ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
10 내가 사십년을 그 세대로 인하여 근심하여 이르기를 저희는 마음이 미혹된 백성이라 내 도를 알지 못한다 하였도다
೧೦ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.
11 그러므로 내가 노하여 맹세하기를 저희는 내 안식에 들어오지 못하리라 하였도다
೧೧ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.