< 열왕기상 20 >
1 아람 왕 벤하닷이 그 군대를 다 모으니 왕 삼십 이인이 저와 함께 있고 또 말과 병거들이 있더라 이에 올라가서 사마리아를 에워싸고 치며
೧ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.
2 사자들을 성 중 이스라엘 왕 아합에게 보내어 이르기를 벤하닷은 이르노니
೨ಅವನು ಆ ಪಟ್ಟಣದಲ್ಲಿದ್ದ ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
3 네 은, 금은 내 것이요 네 처들과 네 자녀들의 아름다운 자도 내것이니라 하매
೩“ನಿನ್ನ ಬೆಳ್ಳಿಬಂಗಾರ ನನ್ನದು. ನಿನ್ನ ಪ್ರಿಯ ಹೆಂಡತಿ ಮಕ್ಕಳು ನನ್ನವರೇ ಎಂದು ತಿಳಿದುಕೋ” ಎಂಬುದಾಗಿ ತಿಳಿಸಿದನು.
4 이스라엘 왕이 대답하여 말하기를 내 주 왕이여 왕의 말씀 같이 나와 나의 것은 다 왕의 것이니이다 하였더니
೪ಅದಕ್ಕೆ ಇಸ್ರಾಯೇಲರ ಅರಸನು, “ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ” ಎಂದು ಉತ್ತರಕೊಟ್ಟು ಕಳುಹಿಸಿದನು.
5 사자가 다시 와서 이르기를 벤하닷은 이르노라 내가 이미 네게 보내어 말하기를 너는 네 은금과 처들과 자녀들을 내게 붙이라 하였거니와
೫ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ.
6 내일 이맘때에 내가 내 신복을 네게 보내리니 저희가 네 집과 네 신복의 집을 수탐하여 무릇 네 눈이 기뻐하는 것을 그 손으로 잡아 가져 가리라 한지라
೬ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ” ಎಂದು ತಿಳಿಸಿದರು.
7 이에 이스라엘 왕이 나라의 장로를 다 불러 이르되 너희는 이 사람이 잔해하려고 구하는 줄을 자세히 알라 저가 나의 처들과 자녀들과 은금을 취하려고 사람을 내게 보내었으나 내가 거절치 못하였노라
೭ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.
8 모든 장로와 백성들이 다 왕께 고하되 왕은 듣지도 말고 허락지도 마옵소서 한지라
೮ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, “ನೀನು ಈ ಮಾತಿಗೆ ಒಪ್ಪಬೇಡ” ಎಂದರು.
9 그러므로 왕이 벤하닷의 사자에게 이르되 너희는 내 주 왕께 고하기를 왕이 처음에 보내어 종에게 구하신 것은 내가 다 그대로 하려니와 이것은 내가 할 수 없나이다 하라 사자들이 돌아가서 고하니라
೯ಆದುದರಿಂದ ಅವನು ಬಂದಂಥ ದೂತರ ಮುಖಾಂತರವಾಗಿ ಬೆನ್ಹದದನಿಗೆ, “ನನ್ನ ಒಡೆಯನೇ, ಅರಸನೇ, ನಾನು ನಿನ್ನ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ. ಆದರೆ ಎರಡನೆಯ ಮಾತಿಗೆ ಒಪ್ಪಲಾರೆನು” ಎಂದು ಹೇಳಿ ಕಳುಹಿಸಿದನು. ದೂತರು ಬಂದು ಈ ಮಾತನ್ನು ಬೆನ್ಹದದನಿಗೆ ತಿಳಿಸಿದರು.
10 벤하닷이 다시 저에게 보내어 이르되 사마리아의 부스러진 것이 나를 좇는 백성의 무리의 손에 채우기에 족할 것 같으면 신들이 내게 벌 위에 벌을 내림이 마땅하니라 하매
೧೦ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.
11 이스라엘 왕이 대답하여 가로되 갑옷 입은 자가 갑옷 벗는 자 같이 자랑치 못할 것이라 하라 하니라
೧೧ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.
12 벤하닷이 왕들과 장막에서 마시다가 이 말을 듣고 그 신복에게 이르되 너희는 진을 베풀라 하매 곧 성을 향하여 진을 베푸니라
೧೨ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
13 한 선지자가 이스라엘 왕 아합에게 나아가서 가로되 여호와의 말씀이 네가 이 큰 무리를 보느냐 내가 오늘 저희를 네 손에 붙이리니 너는 내가 여호와인줄 알리라 하셨나이다
೧೩ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.
14 아합이 가로되 누구로 하시리이까 대답하되 여호와의 말씀이 각도의 방백의 소년들로 하리라 하셨나이다 아합이 가로되 누가 싸움을 시작하리이까 대답하되 왕이니이다
೧೪ಅಹಾಬನು ಅವನನ್ನು, “ಇದು ಯಾರ ಮುಖಾಂತರವಾಗಿ ಆಗುವುದು?” ಎಂದು ಕೇಳಿದ್ದಕ್ಕೆ ಅವನು, “ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳ ಮುಖಾಂತರವಾಗಿ ಆಗುವುದು ಎಂದು ಯೆಹೋವನು ಅನ್ನುತ್ತಾನೆ” ಎಂದು ಉತ್ತರಕೊಟ್ಟನು. ಅಹಾಬನು ಪುನಃ ಅವನನ್ನು, “ಯುದ್ಧ ಪ್ರಾರಂಭಮಾಡತಕ್ಕವರು ಯಾರು?” ಎಂದು ಕೇಳಲು ಅವನು, “ನೀನೇ” ಎಂದು ಹೇಳಿದನು.
15 아합이 이에 각 도의 방백의 소년들을 계수하니 이백 삼십 이인이요 그 외에 모든 백성 곧 이스라엘의 모든 자손을 계수하니 칠천인이더라
೧೫ಅಹಾಬನು ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಜನರಿದ್ದರು. ಇಸ್ರಾಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಜನರಿದ್ದರು.
16 저희가 오정에 나가니 벤하닷은 장막에서 돕는 왕 삼십 이인으로 더불어 마시고 취한 중이라
೧೬ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.
17 각 도의 방백의 소년들이 먼저 나갔더라 벤하닷이 탐지군을 보내었더니 저희가 회보하여 가로되 사마리아에서 사람들이 나오더이다 하매
೧೭ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು.
18 저가 이르되 화친하러 나올지라도 사로잡고 싸우러 나올지라도 사로잡으라 하니라
೧೮ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.
19 각 도의 방백의 소년들과 저희를 좇는 군대들이 성에서 나가서
೧೯ಮೊದಲು ಹೊರಟುಬಂದಿದ್ದ ದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್ ಸೈನ್ಯದವರೂ ಬಂದರು.
20 각각 적군을 쳐 죽이매 아람 사람이 도망하는지라 이스라엘이 쫓으니 아람 왕 벤하닷이 말을 타고 마병으로 더불어 도망하여 면하니라
೨೦ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.
21 이스라엘 왕이 나가서 말과 병거를 치고 또 아람 사람을 쳐서 크게 도륙하였더라
೨೧ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.
22 그 선지자가 이스라엘 왕에게 나아와 가로되 왕은 가서 힘을 기르고 왕의 행할 일을 알고 준비하소서 해가 돌아오면 아람 왕이 왕을 치러 오리이다 하니라
೨೨ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.
23 아람 왕의 신복들이 왕께 고하되 저희의 신은 산의 신이므로 저희가 우리보다 강하였거니와 우리가 만일 평지에서 저희와 싸우면 정녕 저희보다 강할지라
೨೩ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.
24 왕은 이 일을 행하실지니 곧 왕들을 제하여 각각 그곳에서 떠나게 하고 저희 대신에 장관들을 두시고
೨೪ನೀನು ಆಯಾ ಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸು.
25 또 왕의 잃어버린 군대와 같은 군대를 왕을 위하여 충수하고 말도 말대로, 병거도 병거대로 충수하고 우리가 평지에서 저희와 싸우면 정녕 저희보다 강하리이다 왕이 그 말을 듣고 그리하니라
೨೫ಅನಂತರ ನಮ್ಮ ಸೈನ್ಯದಿಂದ ನಷ್ಟವಾಗಿ ಹೋದಷ್ಟು ಜನರನ್ನು, ಕುದುರೆಗಳನ್ನೂ, ರಥಗಳನ್ನೂ ತಿರುಗಿ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ. ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ” ಎಂದು ಹೇಳಿದನು. ಅವನು ಅದರಂತೆಯೇ ಮಾಡಿದನು.
26 해가 돌아오매 벤하닷이 아람 사람을 점고하고 아벡으로 올라와서 이스라엘과 싸우려 하매
೨೬ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.
27 이스라엘 자손도 점고함을 입고 군량을 받고 마주 나가서 저희 앞에 진을 치니 이스라엘은 염소 새끼의 두 적은 떼와 같고 아람 사람은 그 땅에 가득하였더라
೨೭ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.
28 때에 하나님의 사람이 이스라엘 왕에게 나아와 고하여 가로되 여호와의 말씀이 아람사람이 말하기를 여호와는 산의 신이요 골짜기의 신은 아니라 하도다 그러므로 내가 이 큰 군대를 다 네 손에 붙이리니 너희는 내가 여호와인줄 알리라 하셨나이다 하니라
೨೮ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.
29 진이 서로 대한지 칠일이라 제 칠일에 접전하여 이스라엘 자손이 하루에 아람 보병 십만을 죽이매
೨೯ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.
30 그 남은 자는 아벡으로 도망하여 성읍으로 들어갔더니 그 성이 그 남은 자 이만 칠천위에 무너지고 벤하닷은 도망하여 성읍에 이르러 골방으로 들어가니라
೩೦ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.
31 그 신복들이 저에게 고하되 우리가 들은즉 이스라엘 집의 왕들은 인자한 왕이라 하니 만일 우리가 굵은 베로 허리를 묶고 테두리를 머리에 이고 이스라엘 왕에게로 나아가면 저가 혹시 왕의 생명을 살리리이다 하고
೩೧ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು.
32 저희가 굵은 베로 허리를 묶고 테두리를 머리에 이고 이스라엘 왕에게 이르러 가로되 왕의 종 벤하닷이 청하기를 나의 생명을 살려주옵소서 하더이다 아합이 가로되 저가 오히려 살았느냐 저는 나의 형제니라
೩೨ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ” ಅಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು” ಎಂದು ಉತ್ತರಕೊಟ್ಟನು.
33 그 사람들이 징조로 여기고 그 말을 얼른 받아 대답하여 가로되 벤하닷은 왕의 형제니이다 왕이 가로되 너희는 가서 저를 인도하여 오라 벤하닷이 이에 왕에게 나아오니 왕이 저를 병거에 올린 지라
೩೩ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, “ಬೆನ್ಹದದನು ನಿನ್ನ ಸಹೋದರನೇ ಹೌದು” ಅಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
34 벤하닷이 왕께 고하되 내 부친이 당신의 부친에게서 빼앗은 모든 성읍을 내가 돌려 보내리이다 또 나의 부친이 사마리아에서 만든것 같이 당신도 다메섹에서 당신을 위하여 거리를 만드소서 아합이 가로되 내가 이 약조로 당신을 놓으리라 하고 이에 더불어 약조하고 저를 놓았더라
೩೪ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.
35 선지자의 무리 중 한 사람이 여호와의 말씀으로 그 동무에게 이르되 너는 나를 치라 하였더니 그 사람이 치기를 싫어하는지라
೩೫ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.
36 저가 그 사람에게 이르되 네가 여호와의 말씀을 듣지 아니하였으니 네가 나를 떠나갈 때에 사자가 너를 죽이리라 그 사람이 저의 곁을 떠나가더니 사자가 그를 만나 죽였더라
೩೬ಆಗ ಪ್ರವಾದಿಯು ಅವನಿಗೆ, “ನೀನು ಯೆಹೋವನ ಮಾತನ್ನು ಕೇಳದೆ ಹೋದುದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೇ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು” ಎಂದನು. ಅವನು ಅವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದು ಹಾಕಿತು.
37 저가 또 다른 사람을 만나 가로되 너는 나를 치라 하매 그 사람이 저를 치되 상하도록 친지라
೩೭ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡಿ” ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.
38 선지자가 가서 수건으로 그 눈을 가리워 변형하고 길가에서 왕을 기다리다가
೩೮ಆಗ ಅವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತನು.
39 왕이 지나갈 때에 소리질러 왕을 불러 가로되 종이 전장 가운데 나갔더니 한 사람이 돌이켜 어떤 사람을 끌고 내게로 와서 말하기를 이 사람을 지키라 만일 저를 잃어버리면 네 생명으로 저의 생명을 대신하거나 그렇지 아니하면 네가 은 한달란트를 내어야하리라 하였거늘
೩೯ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.
40 종이 이리 저리 일 볼 동안에 저가 없어졌나이다 이스라엘 왕이 저에게 이르되 네가 스스로 결정하였으니 그대로 당하여야 하리라
೪೦ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು” ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ “ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?” ಎಂದು ನುಡಿದನು.
41 저가 급히 그 눈에 가리운 수건을 벗으니 이스라엘 왕이 저는 선지자 중 한 사람인 줄 알아 본지라
೪೧ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು.
42 저가 왕께 고하되 여호와의 말씀이 내가 멸하기로 작정한 사람을 네 손으로 놓았은즉 네 목숨은 저의 목숨을 대신하고 네 백성은 저의 백성을 대신하리라 하셨나이다
೪೨ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
43 이스라엘 왕이 근심하고 답답하여 그 궁으로 돌아가려고 사마리아에 이르니라
೪೩ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.