< 사무엘상 3 >

1 아이 사무엘이 엘리 앞에서 여호와를 섬길 때에는 여호와의 말씀이 희귀하여 이상이 흔히 보이지 않았더라
ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.
2 엘리의 눈이 점점 어두워 가서 잘 보지 못하는 그 때에 그가 자기 처소에 누웠고
ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;
3 하나님의 등불은 아직 꺼지지 아니하였으며 사무엘은 하나님의 궤 있는 여호와의 전 안에 누웠더니
ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು.
4 여호와께서 사무엘을 부르시는지라 그가 대답하되 `내가 여기 있나이다' 하고
ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,
5 엘리에게로 달려가서 가로되 `당신이 나를 부르셨기로 내가 여기 있나이다' 가로되 `나는 부르지 아니하였으니 다시 누우라' 그가 가서 누웠더니
“ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲವೇ?” ಅಂದನು. ಆಗ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿದನು.
6 여호와께서 다시 사무엘을 부르시는지라 사무엘이 일어나서 엘리에게로 가서 가로되 `당신이 나를 부르셨기로 내가 여기 있나이다' 대답하되 `내 아들아 내가 부르지 아니 하였으니 다시 누우라' 하니라
ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.
7 사무엘이 아직 여호와를 알지 못하고 여호와의 말씀도 아직 그에게 나타나지 아니한 때라
ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋಕ್ತಿಗಳನ್ನು ಹೊಂದಿರಲಿಲ್ಲ.
8 여호와께서 세번째 사무엘을 부르시는지라 그가 일어나서 엘리에게로 가서 가로되 `당신이 나를 부르셨기로 내가 여기 있나이다' 엘리가 여호와께서 이 아이를 부르신 줄을 깨닫고
ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ;
9 이에 사무엘에게 이르되 `가서 누웠다가 그가 너를 부르시거든 네가 말하기를 여호와여 말씀하옵소서 주의 종이 듣겠나이다 하라' 이에 사무엘이 가서 자기 처소에 누우니라
ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.
10 여호와께서 임하여 서서 전과 같이 사무엘아! 사무엘아! 부르시는지라 사무엘이 가로되 `말씀하옵소서 주의 종이 듣겠나이다'
೧೦ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.
11 여호와께서 사무엘에게 이르시되 보라, 내가 이스라엘 중에 한 일을 행하리니 그것을 듣는 자마다 두 귀가 울리리라
೧೧ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.
12 내가 엘리의 집에 대하여 말한 것을 처음부터 끝까지 그날에 그에게 다 이루리라
೧೨ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.
13 내가 그 집을 영영토록 심판하겠다고 그에게 이른 것은 그의 아는 죄악을 인함이니 이는 그가 자기 아들들이 저주를 자청하되 금하지 아니하였음이니라
೧೩ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
14 그러므로 내가 엘리의 집에 대하여 맹세하기를 엘리 집의 죄악은 제물이나 예물로나 영영히 속함을 얻지 못하리라 하였노라
೧೪ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು.
15 사무엘이 아침까지 누웠다가 여호와의 집 문을 열었으나 그 이상을 엘리에게 알게 하기를 두려워하더니
೧೫ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.
16 엘리가 사무엘을 불러 가로되 `내 아들 사무엘아' 하니 대답하되 `내가 여기 있나이다'
೧೬ಆದರೆ ಏಲಿಯು, “ನನ್ನ ಮಗನೇ, ಸಮುವೇಲನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು.
17 가로되 `네게 무엇을 말씀하셨느냐 청하노니 내게 숨기지 말라 네게 말씀하신 모든 것을 하나라도 숨기면 하나님이 네게 벌을 내리시고 또 내리시기를 원하노라'
೧೭ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು
18 사무엘이 세세히 말하고 조금도 숨기지 아니하니 그가 가로되 `이는 여호와시니 선하신 소견대로 하실 것이니라' 하니라
೧೮ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.
19 사무엘이 자라매 여호와께서 그와 함께 계셔서 그 말로 하나도 땅에 떨어지지 않게 하시니
೧೯ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.
20 단에서부터 브엘세바까지의 온 이스라엘이 사무엘은 여호와의 선지자로 세우심을 입은 줄을 알았더라
೨೦ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.
21 여호와께서 실로에서 다시 나타나시되 여호와께서 실로에서 여호와의 말씀으로 사무엘에게 자기를 나타내시니
೨೧ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.

< 사무엘상 3 >