< 사도행전 13 >
1 안디옥 교회에 선지자들과 교사들이 있으니 곧 바나바와 니게르라하는 시므온과 구레네 사람 루기오와 분봉왕 헤롯의 젖동생 마나엔과 및 사울이라
೧ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
2 주를 섬겨 금식할 때에 성령이 가라사대 `내가 불러 시키는 일을 위하여 바나바와 사울을 따로 세우라' 하시니
೨ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
3 이에 금식하며 기도하고 두 사람에게 안수하여 보내니라
೩ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
4 두 사람이 성령의 보내심을 받아 실루기아에 내려가 거기서 배 타고 구브로에 가서
೪ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
5 살라미에 이르러 하나님의 말씀을 유대인의 여러 회당에서 전할새 요한을 수종자로 두었더라
೫ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
6 온 섬 가운데로 지나서 바보에 이르러 바예수라 하는 유대인 거짓 선지자 박수를 만나니
೬ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
7 그가 총독 서기오 바울과 함께 있으니 서기오 바울은 지혜 있는 사람이라 바나바와 사울을 불러 하나님 말씀을 듣고자 하더라
೭ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.
8 이 박수 엘루마는 (이 이름을 번역하면 박수라) 저희를 대적하여 총독으로 믿지 못하게 힘쓰니
೮ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
9 바울이라고 하는 사울이 성령이 충만하여 그를 주목하고
೯ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,
10 가로되 `모든 궤계와 악행이 가득한 자요, 마귀의 자식이요, 모든 의의 원수여, 주의 바른 길을 굽게 하기를 그치지 아니하겠느냐?
೧೦ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?
11 보라, 이제 주의 손이 네 위에 있으니 네가 소경이 되어 얼마 동안 해를 보지 못하리라' 하니 즉시 안개와 어두움이 그를 덮어 인도할 사람을 두루 구하는지라
೧೧ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
12 이에 총독이 그렇게 된 것을 보고 믿으며 주의 가르치심을 기이히 여기니라
೧೨ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
13 바울과 및 동행하는 사람들이 바보에서 배 타고 밤빌리아에 있는 버가에 이르니 요한은 저희에게서 떠나 예루살렘으로 돌아가고
೧೩ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
14 저희는 버가로부터 지나 비시디아 안디옥에 이르러 안식일에 회당에 들어가 앉으니라
೧೪ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
15 율법과 선지자의 글을 읽은 후에 회당장들이 사람을 보내어 물어 가로되 `형제들아, 만일 백성을 권할 말이 있거든 말하라' 하니
೧೫ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
16 바울이 일어나 손짓하며 말하되 `이스라엘 사람들과 및 하나님을 경외하는 사람들아 들으라!
೧೬ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;
17 이 이스라엘 백성의 하나님이 우리 조상들을 택하시고 애굽 땅에서 나그네 된 그 백성을 높여 큰 권능으로 인도하여 내사
೧೭“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
18 광야에서 약 사십 년간 저희 소행을 참으시고
೧೮ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,
19 가나안 땅 일곱 족속을 멸하사 그 땅을 기업으로 주시고 (약 사백 오십 년간)
೧೯ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.
20 그 후에 선지자 사무엘 때까지 사사를 주셨더니
೨೦ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
21 그 후에 저희가 왕을 구하거늘 하나님이 베냐민 지파 사람 기스의 아들 사울을 사십 년간 주셨다가
೨೧ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
22 폐하시고 다윗을 왕으로 세우시고 증거하여 가라사대 내가 이새의 아들 다윗을 만나니 내 마음에 합한 사람이라 내 뜻을 다 이루게 하리라 하시더니
೨೨ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
23 하나님이 약속하신 대로 이 사람의 씨에서 이스라엘을 위하여 구주를 세우셨으니 곧 예수라
೨೩“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
24 그 오시는 앞에 요한이 먼저 회개의 세례를 이스라엘 모든 백성에게 전파하니라
೨೪ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
25 요한이 그 달려 갈 길을 마칠 때에 말하되 너희가 나를 누구로 생각하느냐? 나는 그리스도가 아니라 내 뒤에 오시는 이가 있으니 나는 그 발의 신 풀기도 감당치 못하리라 하였으니
೨೫ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
26 형제들 아브라함의 후예와 너희 중 하나님을 경외하는 사람들아! 이 구원의 말씀을 우리에게 보내셨거늘
೨೬“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
27 예루살렘에 사는 자들과 저희 관원들이 예수와 및 안식일마다 외우는 바 선지자들의 말을 알지 못하므로 예수를 정죄하여 선지자들의 말을 응하게 하였도다
೨೭ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
28 죽일 죄를 하나도 찾지 못하였으나 빌라도에게 죽여 달라 하였으니
೨೮ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
29 성경에 저를 가리켜 기록한 말씀을 다 응하게 한 것이라 후에 나무에서 내려다가 무덤에 두었으나
೨೯ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
30 하나님이 죽은 자 가운데서 저를 살리신지라
೩೦“ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
31 갈릴리로부터 예루살렘에 함께 올라간 사람들에게 여러 날 보이셨으니 저희가 이제 백성 앞에 그의 증인이라
೩೧ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
32 우리도 조상들에게 주신 약속을 너희에게 전파하노니
೩೨“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
33 곧 하나님이 예수를 일으키사 우리 자녀들에게 이 약속을 이루게 하셨다 함이라 시편 둘째 편에 기록한 바와 같이 너는 내 아들이라 오늘 너를 낳았다 하셨고
೩೩‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
34 또 하나님께서 죽은 자 가운데서 저를 일으키사 다시 썩음을 당하지 않게 하실 것을 가르쳐 가라사대 내가 다윗의 거룩하고 미쁜 은사를 너희에게 주리라 하셨으니
೩೪“ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
35 그러므로 또 다른 편에 일렀으되 주의 거룩한 자로 썩음을 당하지 않게 하시리라 하셨느니라
೩೫ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
36 다윗은 당시에 하나님의 뜻을 좇아 섬기다가 잠들어 그 조상들과 함께 묻혀 썩음을 당하였으되
೩೬“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
37 하나님의 살리신 이는 썩음을 당하지 아니하였나니
೩೭ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.
38 그러므로 형제들아 너희가 알것은 이 사람을 힘입어 죄 사함을 너희에게 전하는 이것이며
೩೮“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
39 또 모세의 율법으로 너희가 의롭다 하심을 얻지 못하던 모든 일에도 이 사람을 힘입어 믿는 자마다 의롭다 하심을 얻는 이것이라
೩೯ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
40 그런즉 너희는 선지자들로 말씀하신 것이 너희에게 미칠까 삼가라
೪೦ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
41 일렀으되 보라, 멸시하는 사람들아 너희는 놀라고 망하라 내가 너희 때를 당하여 한 일을 행할 것이니 사람이 너희에게 이를지라도 도무지 믿지 못할 일이라 하였느니라' 하니라
೪೧“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
42 저희가 나갈새 사람들이 청하되 다음 안식일에도 이 말씀을 하라 하더라
೪೨ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
43 폐회한 후에 유대인과 유대교에 입교한 경건한 사람들이 많이 바울과 바나바를 좇으니 두 사도가 더불어 말하고 항상 하나님의 은혜 가운데 있으라 권하니라
೪೩ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
44 그 다음 안식일에는 온 성이 거의 다 하나님 말씀을 듣고자 하여 모이니
೪೪ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.
45 유대인들이 그 무리를 보고 시기가 가득하여 바울의 말한 것을 변박하고 비방하거늘
೪೫ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
46 바울과 바나바가 담대히 말하여 가로되 `하나님의 말씀을 마땅히 먼저 너희에게 전할 것이로되 너희가 버리고 영생 얻음에 합당치 않은 자로 자처하기로 우리가 이방인에게로 향하노라 (aiōnios )
೪೬ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. (aiōnios )
47 주께서 이같이 우리를 명하시되 내가 너를 이방의 빛을 삼아 너로 땅 끝까지 구원하게 하리라 하셨느니라' 하니
೪೭ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
48 이방인들이 듣고 기뻐하여 하나님의 말씀을 찬송하며 영생을 주시기로 작정된 자는 다 믿더라 (aiōnios )
೪೮ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. (aiōnios )
೪೯ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.
50 이에 유대인들이 경건한 귀부인들과 그 성내 유력자들을 선동하여 바울과 바나바를 핍박케 하여 그 지경에서 쫓아내니
೫೦ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
51 두 사람이 저희를 향하여 발에 티끌을 떨어 버리고 이고니온으로 가거늘
೫೧ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
೫೨ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.