< 사도행전 16 >

1 바울이 더베와 루스드라에도 이르매 거기 디모데라 하는 제자가 있으니 그 모친은 믿는 유대 여자요 부친은 헬라인이라
ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
2 디모데는 루스드라와 이고니온에 있는 형제들에게 칭찬 받는 자니
ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.
3 바울이 그를 데리고 떠나고자 할 새 그 지경에 있는 유대인을 인하여 그를 데려다가 할례를 행하니 이는 그 사람들이 그의 부친은 헬라인인 줄 다 앎이러라
ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.
4 여러 성으로 다녀 갈 때에 예루살렘에 있는 사도와 장로들의 작정한 규례를 저희에게 주어 지키게 하니
ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.
5 이에 여러 교회가 믿음이 더 굳어지고 수가 날마다 더하니라
ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.
6 성령이 아시아에서 말씀을 전하지 못하게 하시거늘 브루기아와 갈라디아 땅으로 다녀가
ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
7 무시아 앞에 이르러 비두니아로 가고자 애쓰되 예수의 영이 허락지 아니하시는지라
ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
8 무시아를 지나 드로아로 내려 갔는데
ಆಗ ಅವರು ಮೂಸ್ಯದ ಮುಖಾಂತಾರವಾಗಿ ತ್ರೋವಕ್ಕೆ ಬಂದರು.
9 밤에 환상이 바울에게 보이니 마게도냐 사람 하나가 서서 그에게 청하여 가로되 `마게도냐로 건너와서 우리를 도우라' 하거늘
ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
10 바울이 이 환상을 본 후에 우리가 곧 마게도냐로 떠나기를 힘쓰니 이는 하나님이 저 사람들에게 복음을 전하라고 우리를 부르신줄로 인정함이러라
೧೦ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
11 드로아에서 배로 떠나 사모드라게로 직행하여 이튿날 네압볼리로 가고
೧೧ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು.
12 거기서 빌립보에 이르니 이는 마게도냐 지경 첫성이요 또 로마의 식민지라 이 성에서 수일을 유하다가
೧೨ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
13 안식일에 우리가 기도처가 있는가 하여 문 밖 강가에 나가 거기 앉아서 모인 여자들에게 말하더니
೧೩ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.
14 두아디라성의 자주 장사로서 하나님을 공경하는 루디아라 하는 한 여자가 들었는데 주께서 그 마음을 열어 바울의 말을 청종하게 하신지라
೧೪ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
15 저와 그 집이 다 세례를 받고 우리에게 청하여 가로되 `만일 나를 주 믿는 자로 알거든 내 집에 들어와 유하라' 하고 강권하여 있게 하니라
೧೫ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
16 우리가 기도하는 곳에 가다가 점하는 귀신 들린 여종 하나를 만나니 점으로 그 주인들을 크게 이(利)하게 하는지라
೧೬ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.
17 바울과 우리를 좇아와서 소리 질러 가로되 `이 사람들은 지극히 높은 하나님의 종으로 구원의 길을 너희에게 전하는 자라' 하며
೧೭ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
18 이같이 여러 날을 하는지라 바울이 심히 괴로와하여 돌이켜 그 귀신에게 이르되 `예수 그리스도의 이름으로 내가 네게 명하노니 그에게서 나오라' 하니 귀신이 즉시 나오니라
೧೮ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
19 종의 주인들은 자기 이익의 소망이 끊어진 것을 보고 바울과 실라를 잡아 가지고 저자로 관원들에게 끌어 갔다가
೧೯ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
20 상관들 앞에 데리고 가서 말하되 `이 사람들이 유대인인데 우리 성을 심히 요란케 하여
೨೦ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;
21 로마 사람인 우리가 받지도 못하고 행치도 못할 풍속을 전한다' 하거늘
೨೧ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.
22 무리가 일제히 일어나 송사하니 상관들이 옷을 찢어 벗기고 매로 치라 하여
೨೨ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
23 많이 친 후에 옥에 가두고 간수에게 분부하여 `든든히 지키라' 하니
೨೩ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
24 그가 이러한 영을 받아 저희를 깊은 옥에 가두고 그 발을 착고에 든든히 채웠더니
೨೪ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
25 밤중쯤 되어 바울과 실라가 기도하고 하나님을 찬미하매 죄수들이 듣더라
೨೫ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
26 이에 홀연히 큰 지진이 나서 옥터가 움직이고 문이 곧 다 열리며 모든 사람의 매인 것이 다 벗어진지라
೨೬ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
27 간수가 자다가 깨어 옥문들이 열린 것을 보고 죄수들이 도망한 줄 생각하고 검을 빼어 자결하려 하거늘
೨೭ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
28 바울이 크게 소리질러 가로되 `네 몸을 상하지 말라 우리가 다 여기 있노라' 하니
೨೮ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.
29 간수가 등불을 달라고 하며 뛰어 들어가 무서워 떨며 바울과 실라 앞에 부복하고
೨೯ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.
30 저희를 데리고 나가 가로되 `선생들아, 내가 어떻게 하여야 구원을 얻으리이까?' 하거늘
೩೦ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,
31 가로되 `주 예수를 믿으라! 그리하면 너와 네 집이 구원을 얻으리라!' 하고
೩೧ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,
32 주의 말씀을 그 사람과 그 집에 있는 모든 사람에게 전하더라
೩೨ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.
33 밤 그 시에 간수가 저희를 데려다가 그 맞은 자리를 씻기고 자기와 그 권속이 다 세례를 받은 후
೩೩ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
34 저희를 데리고 자기 집에 올라가서 음식을 차려 주고 저와 온 집이 하나님을 믿었으므로 크게 기뻐하니라
೩೪ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
35 날이 새매 상관들이 아전을 보내어 `이 사람들을 놓으라' 하니
೩೫ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.
36 간수가 이 말대로 바울에게 고하되 `상관들이 사람을 보내어 너희를 놓으라 하였으니 이제는 나가서 평안히 가라' 하거늘
೩೬ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
37 바울이 이르되 `로마 사람인 우리를 죄도 정치 아니하고 공중 앞에서 때리고 옥에 가두었다가 이제는 가만히 우리를 내어 보내고자 하느냐? 아니라 저희가 친히 와서 우리를 데리고 나가야 하리라' 한대
೩೭ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
38 아전들이 이 말로 상관들에게 고하니 저희가 로마 사람이라 하는 말을 듣고 두려워하여
೩೮ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.
39 와서 권하여 데리고 나가 성에서 떠나기를 청하니
೩೯ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
40 두 사람이 옥에서 나가 루디아의 집에 들어가서 형제들을 만나 보고 위로하고 가니라
೪೦ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.

< 사도행전 16 >