< 사도행전 27 >

1 우리의 배 타고 이달리야로 갈 일이 작정되매 바울과 다른 죄수 몇 사람을 아구사도대의 백부장 율리오란 사람에게 맡기니
ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.
2 아시아 해변 각처로 가려 하는 아드라뭇데노 배에 우리가 올라 행선할새 마게도냐의 데살로니가 사람 아리스다고도 함께 하니라
ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
3 이튿날 시돈에 대니 율리오가 바울을 친절히 하여 친구들에게 가서 대접받음을 허락하더니
ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.
4 또 거기서 우리가 떠나가다가 바람의 거스림을 피하여 구브로 해안을 의지하고 행선하여
ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,
5 길리기아와 밤빌리아 바다를 건너 루기아의 무라성에 이르러
ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.
6 거기서 백부장이 이달리야로 가려 하는 알렉산드리아 배를 만나 우리를 오르게 하니
ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.
7 배가 더디 가 여러 날만에 간신히 니도 맞은 편에 이르러 풍세가 더 허락지 아니하므로 살모네 앞을 지나 그레데 해안을 의지하고 행선하여
ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,
8 간신히 그 연안을 지나 미항이라는 곳에 이르니 라새아성에서 가깝더라
ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.
9 여러 날이 걸려 금식하는 절기가 이미 지났으므로 행선하기가 위태한지라 바울이 저희를 권하여
ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
10 말하되 `여러분이여, 내가 보니 이번 행선이 하물과 배만 아니라 우리 생명에도 타격과 많은 손해가 있으리라' 하되
೧೦“ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು.
11 백부장이 선장과 선주의 말을 바울의 말보다 더 믿더라
೧೧ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.
12 그 항구가 과동하기에 불편하므로 거기서 떠나 아무쪼록 뵈닉스에 가서 과동하자 하는 자가 더 많으니 뵈닉스는 그레데 항구라 한 편은 동북을, 한 편은 동남을 향하였더라
೧೨ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.
13 남풍이 순하게 불매 저희가 득의한 줄 알고 닻을 감아 그레데 해변을 가까이 하고 행선하더니
೧೩ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.
14 얼마 못되어 섬 가운데로서 유라굴로라는 광풍이 대작하니
೧೪ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನ್ಯ ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು.
15 배가 밀려 바람을 맞추어 갈 수 없어 가는 대로 두고 쫓겨가다가
೧೫ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.
16 가우다라는 작은 섬 아래로 지나 간신히 거루를 잡아
೧೬ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.
17 끌어 올리고 줄을 가지고 선체를 둘러 감고 스르디스에 걸릴까 두려워 연장을 내리고 그냥 쫓겨가더니
೧೭ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.
18 우리가 풍랑으로 심히 애쓰다가 이튿날 사공들이 짐을 바다에 풀어 버리고
೧೮ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.
19 사흘째 되는 날에 배의 기구를 저희 손으로 내어 버리니라
೧೯ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.
20 여러 날 동안 해와 별이 보이지 아니하고 큰 풍랑이 그대로 있으매 구원의 여망이 다 없어졌더라
೨೦ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.
21 여러 사람이 오래 먹지 못하였으매 바울이 가운데 서서 말하되 여러분이여 내 말을 듣고 그레데에서 떠나지 아니하여 이 타격과 손상을 면하였더면 좋을 뻔하였느니라
೨೧ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.
22 내가 너희를 권하노니 이제는 안심하라 너희 중 생명에는 아무 손상이 없겠고 오직 배뿐이리라
೨೨ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.
23 나의 속한 바 곧 나의 섬기는 하나님의 사자가 어제 밤에 내 곁에 서서 말하되
೨೩ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
24 바울아 두려워 말라 네가 가이사 앞에 서야 하겠고 또 하나님께서 너와 함께 행선하는 자를 다 네게 주셨다 하였으니
೨೪‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
25 그러므로 여러분이여 안심하라 나는 내게 말씀하신 그대로 되리라! 고 하나님을 믿노라
೨೫ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.
26 그러나 우리가 한 섬에 걸리리라 하더라
೨೬ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ” ಎಂದು ಹೇಳಿದನು.
27 열 나흘째 되는 날 밤에 우리가 아드리아 바다에 이리저리 쫓겨 가더니 밤중쯤 되어 사공들이 어느 육지에 가까와지는 줄을 짐작하고
೨೭ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ,
28 물을 재어보니 이십 길이 되고 조금 가다가 다시 재니 열 다섯 길이라
೨೮ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.
29 암초에 걸릴까 하여 고물로 닻 넷을 주고 날이 새기를 고대하더니
೨೯ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.
30 사공들이 도망하고자 하여 이물에서 닻을 주려는 체하고 거루를 바다에 내려놓거늘
೩೦ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,
31 바울이 백부장과 군사들에게 이르되 `이 사람들이 배에 있지 아니하면 너희가 구원을 얻지 못하리라' 하니
೩೧ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.
32 이에 군사들이 거룻 줄을 끊어 떼어 버리니라
೩೨ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
33 날이 새어 가매 바울이 여러 사람을 음식 먹으라 권하여 가로되 너희가 기다리고 기다리며 먹지 못하고 주린 지가 오늘까지 열 나흘인즉
೩೩ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.
34 음식 먹으라 권하노니 이것이 너희 구원을 위하는 것이요 너희 중 머리터럭 하나라도 잃을 자가 없느니라 하고
೩೪ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,
35 떡을 가져다가 모든 사람 앞에서 하나님께 축사하고 떼어 먹기를 시작하매
೩೫ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.
36 저희도 다 안심하고 받아 먹으니
೩೬ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.
37 배에 있는 우리의 수는 전부 이백 칠십 륙 인이러라
೩೭ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು.
38 배부르게 먹고 밀을 바다에 버려 배를 가볍게 하였더니
೩೮ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.
39 날이 새매 어느 땅인지 알지 못하나 경사 진 해안으로 된 항만이 눈에 띄거늘 배를 거기에 들여다 댈 수 있는가 의논한 후
೩೯ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.
40 닻을 끊어 바다에 버리는 동시에 킷줄을 늦추고 돛을 달고 바람을 맞추어 해안을 향하여 들어가다가
೪೦ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.
41 두 물이 합하여 흐르는 곳을 당하여 배를 걸매 이물은 부딪혀 움직일 수 없이 붙고 고물은 큰 물결에 깨어져 가니
೪೧ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.
42 군사들은 죄수가 헤엄쳐서 도망할까 하여 저희를 죽이는 것이 좋다 하였으나
೪೨ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.
43 백부장이 바울을 구원하려 하여 저희의 뜻을 막고 헤엄칠 줄 아는 사람들을 명하여 물에 뛰어 내려 먼저 육지에 나가게 하고
೪೩ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,
44 그 남은 사람들은 널조각 혹은 배 물건에 의지하여 나가게 하니 마침내 사람들이 다 상륙하여 구원을 얻으니라
೪೪ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.

< 사도행전 27 >