< 다니엘 6 >

1 다리오가 자기의 심원대로 방백 일백 이십 명을 세워 전국을 통치하게 하고
ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.
2 또 그들 위에 총리 셋을 두었으니 다니엘이 그 중에 하나이라 이는 방백들로 총리에게 자기의 직무를 보고하게 하여 왕에게 손해가 없게 하려함이었더라
ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.
3 다니엘은 마음이 민첩하여 총리들과 방백들 위에 뛰어나므로 왕이 그를 세워 전국을 다스리게 하고자 한지라
ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
4 이에 총리들과 방백들이 국사에 대하여 다니엘을 고소할 틈을 얻고자 하였으나 능히 아무 틈, 아무 허물을 얻지 못하였으니 이는 그가 충성되어 아무 그릇함도 없고 아무 허물도 없음이었더라
ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.
5 그 사람들이 가로되 이 다니엘은 그 하나님의 율법에 대하여 그 틈을 얻지 못하면 그를 고소할 수 없으리라 하고
ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು.
6 이에 총리들과 방백들이 모여 왕에게 나아가서 그에게 말하되 다리오 왕이여 만세수를 하옵소서
ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!
7 나라의 모든 총리와 수령과 방백과 모사와 관원이 의논하고 왕에게 한 율법을 세우며 한 금령을 정하실 것을 구하려 하였는데 왕이여 그것은 곧 이제부터 삼십일 동안에 누구든지 왕 외에 어느신에게나 사람에게 무엇을 구하면 사자굴에 던져 넣기로 한 것이니이다
ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.
8 그런즉 원컨대 금령을 세우시고 그 조서에 어인을 찍어서 메대와 바사의 변개치 아니하는 규례를 따라 그것을 다시 고치지 못하게 하옵소서 하매
ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.
9 이에 다리오 왕이 조서에 어인을 찍어 금령을 내니라
ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.
10 다니엘이 이 조서에 어인이 찍힌 것을 알고도 자기 집에 돌아가서는 그 방의 예루살렘으로 향하여 열린 창에서 전에 행하던 대로 하루 세 번씩 무릎을 꿇고 기도하며 그 하나님께 감사하였더라
೧೦ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
11 그 무리들이 모여서 다니엘이 자기 하나님 앞에 기도하며 간구하는 것을 발견하고
೧೧ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು.
12 이에 그들이 나아가서 왕의 금령에 대하여 왕께 아뢰되 왕이여 왕이 이미 금령에 어인을 찍어서 이제부터 삼십 일 동안에 누구든지 왕 외에 어느 신에게나 사람에게 구하면 사자굴에 던져 넣기로 하지 아니하였나이까 왕이 대답하여 가로되 이 일이 적실하니 메대와 바사의 변개치 아니하는 규례대로 된 것이니라
೧೨ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು.
13 그들이 왕 앞에서 대답하여 가로되 왕이여 사로잡혀 온 유다 자손 중에 그 다니엘이 왕과 왕의 어인이 찍힌 금령을 돌아보지 아니하고 하루 세 번씩 기도하나이다
೧೩ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.
14 왕이 이 말을 듣고 그로 인하여 심히 근심하여 다니엘을 구원하려고 마음을 쓰며 그를 건져 내려고 힘을 다하여 해가 질 때까지 이르매
೧೪ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.
15 그 무리들이 또 모여 왕에게로 나아와서 왕께 말씀하되 왕이여 메대와 바사의 규례를 아시거니와 왕의 세우신 금령과 법도는 변개하지 못할 것이니이다
೧೫ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು.
16 이에 왕이 명하매 다니엘을 끌어다가 사자굴에 던져 넣는지라 왕이 다니엘에게 일러 가로되 너의 항상 섬기는 네 하나님이 너를 구원하시리라 하니라
೧೬ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.
17 이에 돌을 굴려다가 굴 아구를 막으매 왕이 어인과 귀인들의 인을 쳐서 봉하였으니 이는 다니엘 처치한 것을 변개함이 없게 하려 함이었더라
೧೭ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.
18 왕이 궁에 돌아가서는 밤이 맞도록 금식하고 그 앞에 기악을 그치고 침수를 폐하니라
೧೮ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.
19 이튿날에 왕이 새벽에 일어나 급히 사자굴로 가서
೧೯ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.
20 다니엘의 든 굴에 가까이 이르러는 슬피 소리질러 다니엘에게 물어 가로되 사시는 하나님의 종 다니엘아 너의 항상 섬기는 네 하나님이 사자에게서 너를 구원하시기에 능하셨느냐
೨೦ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.
21 다니엘이 왕에게 고하되 왕이여 원컨대 왕은 만세수를 하옵소서
೨೧ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!
22 나의 하나님이 이미 그 천사를 보내어 사자들의 입을 봉하셨으므로 사자들이 나를 상해치 아니하였사오니 이는 나의 무죄함이 그 앞에 명백함이오며 또 왕이여 나는 왕의 앞에도 해를 끼치지 아니하였나이다
೨೨ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
23 왕이 심히 기뻐서 명하여 다니엘을 굴에서 올리라 하매 그들이 다니엘을 굴에서 올린즉 그 몸이 조금도 상하지 아니하였으니 이는 그가 자기 하나님을 의뢰함이었더라
೨೩ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
24 왕이 명을 내려 다니엘을 참소한 사람들을 끌어오게 하고 그들을 그 처자들과 함께 사자굴에 던져 넣게 하였더니 그들이 굴 밑에 닿기 전에 사자가 곧 그들을 움켜서 그 뼈까지도 부숴뜨렸더라
೨೪ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.
25 이에 다리오 왕이 온 땅에 있는 모든 백성과 나라들과 각 방언하는 자들에게 조서를 내려 가로되 원컨대 많은 평강이 너희에게 있을지어다
೨೫ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!
26 내가 이제 조서를 내리노라 내 나라 관할 아래 있는 사람들은 다 다니엘의 하나님 앞에서 떨며 두려워할지니 그는 사시는 하나님이시요 영원히 변치 않으실 자시며 그 나라는 망하지 아니할 것이요 그 권세는 무궁할 것이며
೨೬“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;
27 그는 구원도 하시며 건져내기도 하시며 하늘에서든지 땅에서든지이적과 기사를 행하시는 자로서 다니엘을 구원하여 사자의 입에서 벗어나게 하셨음이니라 하였더라
೨೭ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
28 이 다니엘이 다리오 왕의 시대와 바사 사람 고레스 왕의 시대에 형통하였더라
೨೮ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.

< 다니엘 6 >