< 전도서 11 >
1 너는 네 식물을 물 위에 던지라 여러날 후에 도로 찾으리라
ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಕಳುಹಿಸು. ಬಹಳ ದಿನಗಳ ಮೇಲೆ ಅದರಿಂದ ನಿನಗೆ ಲಾಭ ಸಿಗುವುದು.
2 일곱에게나 여덟에게 나눠줄지어다 무슨 재앙이 땅에 임할는지 네가 알지 못함이니라
ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.
3 구름에 비가 가득하면 땅에 쏟아지며 나무가 남으로나 북으로나 쓰러지면 그 쓰러진 곳에 그냥 있으리라
ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.
4 풍세를 살펴보는 자는 파종하지 아니할 것이요 구름을 바라보는 자는 거두지 아니하리라
ಯಾವನು ಗಾಳಿಗಾಗಿ ಕಾದಿರುವನೋ, ಅವನು ಬೀಜ ಬಿತ್ತುವುದಿಲ್ಲ. ಮೋಡಗಳನ್ನು ಗಮನಿಸುತ್ತಿರುವವನು ಸಹ ಪೈರು ಕೊಯ್ಯುವುದಿಲ್ಲ.
5 바람의 길이 어떠함과 아이 밴 자의 태에서 뼈가 어떻게 자라는 것을 네가 알지 못함같이 만사를 성취하시는 하나님의 일을 네가 알지 못하느니라
ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ, ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವ ದೇವರ ಕೆಲಸವನ್ನು ನೀನು ಗ್ರಹಿಸಲಾರೆ.
6 너는 아침에 씨를 뿌리고 저녁에도 손을 거두지 말라 이것이 잘 될는지, 저것이 잘 될는지, 혹 둘이 다 잘 될는지 알지 못함이니라
ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.
7 빛은 실로 아름다운 것이라 눈으로 해를 보는 것이 즐거운 일이로다
ಬೆಳಕು ಹಿತಕರ. ಸೂರ್ಯನ ಕಾಂತಿ ಕಣ್ಣುಗಳಿಗೆ ಮೆಚ್ಚಿಕೆ.
8 사람이 여러 해를 살면 항상 즐거워할지로다 그러나 캄캄한 날이 많으리니 그 날을 생각할지로다 장래 일은 다 헛되도다
ಒಬ್ಬನು ಅನೇಕ ವರ್ಷಗಳು ಬದುಕಿ, ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, ಏಕೆಂದರೆ ಅಂಥ ದಿನಗಳು ಬಹಳ. ಮುಂದಾಗುವುದೆಲ್ಲವೂ ವ್ಯರ್ಥವೇ.
9 청년이여 네 어린 때를 즐거워 하며 네 청년의 날을 마음에 기뻐하여 마음에 원하는 길과 네 눈이 보는대로 좇아 행하라 그러나 하나님이 이 모든 일로 인하여 너를 심판하실 줄 알라
ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.
10 그런즉 근심으로 네 마음에서 떠나게 하며 악으로 네 몸에서 물러가게 하라 어릴 때와 청년의 때가 다 헛되니라
ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.