< 출애굽기 25 >

1 여호와께서 모세에게 일러 가라사대
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
2 이스라엘 자손에게 명하여 내게 예물을 가져오라 하고 무릇 즐거운 마음으로 내는 자에게서 내게 드리는 것을 너희는 받을지니라
“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
3 너희가 그들에게서 받을 예물은 이러하니 금과 은과 놋과
ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವುವೆಂದರೆ, ಚಿನ್ನ, ಬೆಳ್ಳಿ, ಹಾಗೂ ತಾಮ್ರ ಎಂಬ ಲೋಹಗಳು,
4 청색, 자색, 홍색실과, 가는 베실과, 염소털과,
ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,
5 붉은 물 들인 수양의 가죽과, 해달의 가죽과, 조각목과,
ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,
6 등유와 관유에 드는 향품과 분향할 향을 만들 향품과
ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,
7 호마노며 에봇과 흉패에 물릴 보석이니라
ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.
8 내가 그들 중에 거할 성소를 그들을 시켜 나를 위하여 짓되
“ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.
9 무릇 내가 네게 보이는대로 장막의 식양과 그 기구의 식양을 따라 지을지니라
ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.
10 그들은 조각목으로 궤를 짓되 장이 이 규빗 반, 광이 일 규빗 반, 고가 일 규빗 반이 되게 하고
೧೦“ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.
11 너는 정금으로 그것을 싸되 그 안팎을 싸고 윗가로 돌아가며 금테를 두르고
೧೧ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
12 금고리 넷을 부어 만들어 그 네 발에 달되 이편에 두 고리요, 저편에 두 고리며
೧೨ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.
13 조각목으로 채를 만들고 금으로 싸고
೧೩ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,
14 그 채를 궤 양편 고리에 꿰어서 궤를 메게 하며
೧೪ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
15 채를 궤의 고리에 꿴대로 두고 빼어내지 말지며
೧೫ಆ ಕಂಬಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೇ ಅವುಗಳಲ್ಲಿಯೇ ಬಿಟ್ಟಿರಬೇಕು.
16 내가 네게 줄 증거판을 궤 속에 둘지며
೧೬ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.
17 정금으로 속죄소를 만들되 장이 이 규빗 반, 광이 일 규빗 반이 되게 하고
೧೭ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.
18 금으로 그룹 둘을 속죄소 두 끝에 쳐서 만들되
೧೮ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.
19 한 그룹은 이 끝에, 한 그룹은 저 끝에 곧 속죄소 두 끝에 속죄소와 한 덩이로 연하게 할지며
೧೯ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು.
20 그룹들은 그 날개를 높이 펴서 그 날개로 속죄소를 덮으며 그 얼굴을 서로 대하여 속죄소를 향하게 하고
೨೦ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.
21 속죄소를 궤 위에 얹고 내가 네게 줄 증거판을 궤 속에 넣으라
೨೧ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು
22 거기서 내가 너와 만나고 속죄소 위 곧 증거궤 위에 있는 두 그룹 사이에서 내가 이스라엘 자손을 위하여 네게 명할 모든 일을 네게 이르리라
೨೨ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.
23 너는 조각목으로 상을 만들되 장이 이 규빗, 광이 일 규빗, 고가 일 규빗 반이 되게 하고
೨೩“ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.
24 정금으로 싸고 주위에 금테를 두르고
೨೪ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
25 그 사면에 손바닥 넓이만한 턱을 만들고 그 턱 주위에 금으로 테를 만들고
೨೫ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.
26 그것을 위하여 금고리 넷을 만들어 네 발위 네 모퉁이에 달되
೨೬ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು.
27 턱 곁에 달라 이는 상 멜 채를 꿸 곳이며
೨೭ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
28 또 조각목으로 그 채를 만들고 금으로 싸라 상을 이것으로 멜 것이니라
೨೮ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.
29 너는 대접과, 숟가락과, 병과 붓는 잔을 만들되 정금으로 만들지며
೨೯ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.
30 상 위에 진설병을 두어 항상 내 앞에 있게 할지니라!
೩೦ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.
31 너는 정금으로 등대를 쳐서 만들되 그 밑판과, 줄기와, 잔과, 꽃받침과, 꽃을 한 덩이로 연하게 하고
೩೧“ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.
32 가지 여섯을 등대 곁에서 나오게 하되 그 세 가지는 이편으로 나오고 그 세 가지는 저편으로 나오게 하며
೩೨ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು.
33 이편 가지에 살구 꽃 형상의 잔 셋과 꽃받침과 꽃이 있게 하고 저편 가지에도 살구꽃 형상의 잔 셋과 꽃받침과 꽃이 있게 하여 등대에서 나온 여섯 가지를 같게 할지며
೩೩ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು.
34 등대 줄기에는 살구꽃 형상의 잔 넷과 꽃받침과 꽃이 있게 하고
೩೪ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು.
35 등대에서 나온 여섯 가지를 위하여 꽃받침이 있게 하되 두 가지 아래 한 꽃받침이 있어 줄기와 연하게 하며 또 두 가지 아래 한 꽃받침이 있어 줄기와 연하게 하고
೩೫ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು.
36 그 꽃받침과 가지를 줄기와 연하게 하여 전부를 정금으로 쳐 만들고
೩೬ಪುಷ್ಪಪಾತ್ರೆಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು.
37 등잔 일곱을 만들어 그 위에 두어 앞을 비추게 하며
೩೭ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.
38 그 불집게와 불똥 그릇도 정금으로 만들지니
೩೮ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.
39 등대와 이 모든 기구를 정금 한 달란트로 만들되
೩೯ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.
40 너는 삼가 이 산에서 네게 보인 식양대로 할지니라!
೪೦ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”

< 출애굽기 25 >